Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅರಣ್ಯಕಾಂಡ 27:4 - ಕನ್ನಡ ಸತ್ಯವೇದವು J.V. (BSI)

4 ನಮ್ಮ ತಂದೆಗೆ ಗಂಡುಮಗನಿಲ್ಲದ ಮಾತ್ರದಿಂದ ಅವನ ಹೆಸರು ಕುಲದಿಂದ ತೆಗೆಯಲ್ಪಡುವದು ನ್ಯಾಯವೋ? ತಂದೆಯ ಕುಲದವರೊಂದಿಗೆ ನಮಗೂ ಸ್ವಾಸ್ತ್ಯವನ್ನು ಕೊಡಬೇಕೆಂದು ಕೇಳಿಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ನಮ್ಮ ತಂದೆಗೆ ಗಂಡು ಮಗನಿಲ್ಲದ ಕಾರಣದಿಂದ ಅವನ ಹೆಸರು ಕುಲದಿಂದ ತೆಗೆದು ಹಾಕುವುದು ನ್ಯಾಯವೋ? ತಂದೆಯ ಕುಲದವರೊಂದಿಗೆ ನಮಗೂ ಸ್ವತ್ತನ್ನು ಕೊಡಬೇಕು” ಎಂದು ಕೇಳಿಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

4 ನಮ್ಮ ತಂದೆಗೆ ಗಂಡುಮಗನಿಲ್ಲದ ಮಾತ್ರಕ್ಕೆ ಅವರ ಹೆಸರನ್ನು ಕುಲದಿಂದ ತೆಗೆದುಹಾಕುವುದು ನ್ಯಾಯವೇ? ನಮ್ಮ ತಂದೆಯ ಸ್ವಂತದವರಲ್ಲಿ ನಮಗೂ ಸೊತ್ತನ್ನು ಕೊಡಿ,” ಎಂದು ಕೇಳಿಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

4 ನಮ್ಮ ತಂದೆಗೆ ಗಂಡುಮಗನಿಲ್ಲದ ಮಾತ್ರದಿಂದ ಅವನ ಹೆಸರನ್ನು ಅವನ ಕುಲದವರ ಮಧ್ಯದಿಂದ ತೆಗೆಯುವುದು ನ್ಯಾಯವೋ? ನಮ್ಮ ತಂದೆಯ ಸಂಬಂಧಿಕರೊಡನೆ ನಮಗೂ ಸ್ವಾಸ್ತ್ಯವನ್ನು ಕೊಡು” ಎಂದು ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

4 ಹಾಗಾದರೆ ನಮ್ಮ ತಂದೆಗೆ ಮಗನಿಲ್ಲದಿರುವುದರಿಂದ, ಅವನ ಹೆಸರನ್ನು ತನ್ನ ಕುಟುಂಬದಿಂದ ಏಕೆ ತೆಗೆಯಬೇಕು? ನೀನು ನಮ್ಮ ತಂದೆಯ ಸಹೋದರರ ಮಧ್ಯದಲ್ಲಿ ಒಂದು ಸೊತ್ತನ್ನು ನಮಗೆ ಕೊಡು,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅರಣ್ಯಕಾಂಡ 27:4
6 ತಿಳಿವುಗಳ ಹೋಲಿಕೆ  

ಇವರು ಮಹಾಯಾಜಕನಾದ ಎಲ್ಲಾಜಾರ್, ನೂನನ ಮಗನಾದ ಯೆಹೋಶುವ, ಕುಲಾಧಿಪತಿಗಳು ಇವರ ಬಳಿಗೆ ಬಂದು - ನಮ್ಮ ಅಣ್ಣತಮ್ಮಂದಿರ ಮಧ್ಯದಲ್ಲಿ ನಮಗೆ ಪಾಲುಕೊಡಬೇಕೆಂದು ಯೆಹೋವನು ಮೋಶೆಗೆ ಆಜ್ಞಾಪಿಸಿದನಲ್ಲಾ ಎಂದು ಹೇಳಲು ಯೆಹೋಶುವನು ಯೆಹೋವನ ಅಪ್ಪಣೆಯಂತೆ ಅವರಿಗೆ ಅವರ ತಂದೆಯ ಅಣ್ಣತಮ್ಮಂದಿರ ಮಧ್ಯದಲ್ಲಿ ಸ್ವಾಸ್ತ್ಯವನ್ನು ಕೊಟ್ಟನು.


ಅವನ ಸಂತತಿಯು ನಿರ್ಮೂಲವಾಗಲಿ. ಎರಡನೆಯ ತಲೆಯಲ್ಲಿಯೇ ಅದು ನಿರ್ನಾಮವಾಗಿ ಹೋಗಲಿ.


ಆಗ ಮೋಶೆ ತನ್ನ ದೇವರಾದ ಯೆಹೋವನನ್ನು ಬೇಡಿಕೊಂಡು - ಯೆಹೋವನೇ, ನೀನು ಮಹಾಶಕ್ತಿಯಿಂದಲೂ ಭುಜಬಲದಿಂದಲೂ ಐಗುಪ್ತದೇಶದಿಂದ ಬಿಡಿಸಿದ ನಿನ್ನ ಪ್ರಜೆಗಳ ಮೇಲೆ ಕೋಪದಿಂದುರಿಯುವದೇಕೆ?


ಶಿಷ್ಟರ ಬೆಳಕು ಬೆಳಗುವದು; ದುಷ್ಟರ ದೀಪವು ಆರುವದು.


ನಮ್ಮ ತಂದೆ ಅರಣ್ಯದಲ್ಲಿ ಸತ್ತುಹೋದನು; ಅವನು ಕೋರಹನ ಜೊತೆಯಲ್ಲಿ ಯೆಹೋವನಿಗೆ ವಿರೋಧವಾಗಿ ತಿರುಗಿಬಿದ್ದವರೊಳಗೆ ಸೇರಿದವನಲ್ಲ; ಅವನು ಸತ್ತದ್ದು ಸ್ವಂತ ಕರ್ಮಫಲವೇ. ಅವನಿಗೆ ಗಂಡು ಮಕ್ಕಳಿರಲಿಲ್ಲ.


ಮೋಶೆಯು ಅವರ ಪ್ರಾರ್ಥನೆಯನ್ನು ಯೆಹೋವನ ಬಳಿಯಲ್ಲಿ ವಿಚಾರಿಸಲಾಗಿ ಆತನು ಅವನಿಗೆ ಆಜ್ಞಾಪಿಸಿದ್ದೇನಂದರೆ -


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು