ಅರಣ್ಯಕಾಂಡ 28:1 - ಕನ್ನಡ ಸತ್ಯವೇದವು J.V. (BSI)1 ಯೆಹೋವನು ಮೋಶೆಗೆ ಹೇಳಿದ್ದೇನಂದರೆ - ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20191 ಯೆಹೋವನು ಮೋಶೆಯ ಸಂಗಡ ಮಾತನಾಡಿ ಹೇಳಿದ್ದೇನೆಂದರೆ, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)1 ಸರ್ವೇಶ್ವರ ಸ್ವಾಮಿ ಮೋಶೆಗೆ ಹೇಳಿದ್ದೇನೆಂದರೆ: ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್1 ಯೆಹೋವನು ಮೋಶೆಗೆ ಹೇಳಿದ್ದೇನೆಂದರೆ: ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ1 ಯೆಹೋವ ದೇವರು ಮೋಶೆಯ ಸಂಗಡ ಮಾತನಾಡಿ, ಅಧ್ಯಾಯವನ್ನು ನೋಡಿ |
ಈಗ ನಾನು ನನ್ನ ದೇವರಾದ ಯೆಹೋವನ ಹೆಸರಿಗಾಗಿ ಒಂದು ಆಲಯವನ್ನು ಕಟ್ಟಿಸಿ ಇಸ್ರಾಯೇಲ್ಯರಿಗಿರುವ ಶಾಶ್ವತನಿಯಮದ ಪ್ರಕಾರ ಆತನ ಸನ್ನಿಧಿಯಲ್ಲಿ ಸುಗಂಧದ್ರವ್ಯಗಳಿಂದ ಧೂಪಹಾಕುವದಕ್ಕೂ ಪ್ರತಿನಿತ್ಯ ನೈವೇದ್ಯದ ರೊಟ್ಟಿಗಳನ್ನಿಡುವದಕ್ಕೂ ಪ್ರಾತಃಕಾಲ, ಸಾಯಂಕಾಲ, ಸಬ್ಬತ್‍ದಿನ, ಅಮಾವಾಸ್ಯೆ, ನಮ್ಮ ದೇವರಾದ ಯೆಹೋವನ ಜಾತ್ರೆ ಇವುಗಳಲ್ಲಿ ಸರ್ವಾಂಗ ಹೋಮವನ್ನರ್ಪಿಸುವದಕ್ಕೂ ಆ ಆಲಯವನ್ನು ಆತನಿಗೋಸ್ಕರ ಪ್ರತಿಷ್ಠಿಸಬೇಕೆಂದಿದ್ದೇನೆ.
ಉತ್ಸವಗಳಲ್ಲಿಯೂ ಅಮಾವಾಸ್ಯೆಗಳಲ್ಲಿಯೂ ಸಬ್ಬತ್ತುಗಳಲ್ಲಿಯೂ ಇಸ್ರಾಯೇಲ್ ವಂಶದವರಿಗೆ ನೇಮಕವಾದ ಎಲ್ಲಾ ಹಬ್ಬಗಳಲ್ಲಿಯೂ ಸರ್ವಾಂಗಹೋಮಪಶು, ಧಾನ್ಯನೈವೇದ್ಯ, ಪಾನನೈವೇದ್ಯ, ಇವುಗಳನ್ನು ಒದಗಿಸುವದು ಪ್ರಭುವಿನ ಕರ್ತವ್ಯ; ಇಸ್ರಾಯೇಲ್ ವಂಶದ ದೋಷನಿವಾರಣೆಗಾಗಿ ಅವನು ದೋಷಪರಿಹಾರಕಯಜ್ಞಪಶು, ಧಾನ್ಯನೈವೇದ್ಯ, ಸರ್ವಾಂಗಹೋಮಪಶು, ಸಮಾಧಾನಯಜ್ಞಪಶು, ಇವುಗಳನ್ನು ಒಪ್ಪಿಸತಕ್ಕದ್ದು.