Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅರಣ್ಯಕಾಂಡ 28:15 - ಕನ್ನಡ ಸತ್ಯವೇದವು J.V. (BSI)

15 ಮತ್ತು ದೋಷಪರಿಹಾರಕಯಜ್ಞಕ್ಕಾಗಿ ಒಂದು ಹೋತವನ್ನು ಯೆಹೋವನಿಗೆ ಸಮರ್ಪಿಸಬೇಕು. ನಿತ್ಯಸರ್ವಾಂಗಹೋಮವನ್ನೂ ಅದಕ್ಕೆ ಸೇರಿದ ಪಾನದ್ರವ್ಯವನ್ನೂ ಸಮರ್ಪಿಸುವದಲ್ಲದೆ [ಅಮಾವಾಸ್ಯೆಯಲ್ಲಿ] ಇವುಗಳನ್ನು ಹೆಚ್ಚಾಗಿ ಸಮರ್ಪಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

15 ನಿತ್ಯ ಸರ್ವಾಂಗಹೋಮ ಹೊರತು ದೋಷಪರಿಹಾರ ಯಜ್ಞಕ್ಕಾಗಿ ಒಂದು ಹೋತವನ್ನು ಅದಕ್ಕೆ ತಕ್ಕ ಪಾನದ ಅರ್ಪಣೆಯನ್ನು ಯೆಹೋವನಿಗೆ ಸಮರ್ಪಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

15 ಅಮಾವಾಸ್ಯೆಯಲ್ಲಿ ದಹನಬಲಿಯನ್ನೂ ಅರ್ಪಿಸುವುದಲ್ಲದೆ ಪಾಪಪರಿಹಾರಕಬಲಿಗಾಗಿ ಒಂದು ಹೋತವನ್ನು ಸರ್ವೇಶ್ವರನಿಗೆ ಹೆಚ್ಚಾಗಿ ಸಮರ್ಪಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

15 ಕ್ರಮಾನುಸಾರವಾದ ಸರ್ವಾಂಗಹೋಮ ಮತ್ತು ಅದರ ಪಾನದ್ರವ್ಯಾರ್ಪಣೆಗಳಲ್ಲದೆ, ಪಾಪಪರಿಹಾರಕ ಯಜ್ಞವಾಗಿ ಒಂದು ಹೋತವನ್ನು ಯೆಹೋವನಿಗೆ ಅರ್ಪಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

15 ಇದಲ್ಲದೆ ನಿತ್ಯ ದಹನಬಲಿಯ ಹೊರತು, ಯೆಹೋವ ದೇವರಿಗೆ ಪಾಪ ಪರಿಹಾರಕ ಬಲಿಗಾಗಿ ಒಂದು ಹೋತವನ್ನೂ ಅದಕ್ಕೆ ತಕ್ಕ ಪಾನದ ಅರ್ಪಣೆಯನ್ನೂ ಸಮರ್ಪಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅರಣ್ಯಕಾಂಡ 28:15
14 ತಿಳಿವುಗಳ ಹೋಲಿಕೆ  

ಇದರ ವಿಷಯದಲ್ಲಿ ನೀನು ಅಪ್ಪಣೆ ಮಾಡಬೇಕಾದದ್ದೇನಂದರೆ -


ಅದಲ್ಲದೆ ದೋಷಪರಿಹಾರಕಯಜ್ಞಕ್ಕಾಗಿ ಒಂದು ಹೋತವನ್ನು ಸಮರ್ಪಿಸಬೇಕು.


ಅವರೆಲ್ಲರೂ ಒಟ್ಟಾಗಿ ಯೆಹೋವನಿಗೆ ಸುವಾಸನೆಯನ್ನುಂಟುಮಾಡುವದಕ್ಕೋಸ್ಕರ ಸರ್ವಾಂಗಹೋಮವಾಗಿ ಒಂದು ಹೋರಿಯನ್ನೂ ನೈವೇದ್ಯವಾಗಿ ಅದಕ್ಕೆ ನೇವಿುತವಾದ ಧಾನ್ಯದ್ರವ್ಯ ಪಾನದ್ರವ್ಯಗಳನ್ನೂ ದೋಷಪರಿಹಾರಕಯಜ್ಞವಾಗಿ ಒಂದು ಹೋತವನ್ನೂ ಸಮರ್ಪಿಸಬೇಕು.


ನಾವು ಆತನಲ್ಲಿ ದೇವರಿಗೆ ಸಮರ್ಪಕರಾದ ನೀತಿಸ್ವರೂಪಿಗಳಾಗುವಂತೆ ದೇವರು ಪಾಪಜ್ಞಾನವಿಲ್ಲದ ಆತನನ್ನು ನಮಗೋಸ್ಕರ ಪಾಪ ಸ್ವರೂಪಿಯಾಗ ಮಾಡಿದನು.


ಧರ್ಮಶಾಸ್ತ್ರವು ನಮ್ಮ ಶರೀರಾಧೀನಸ್ವಭಾವದ ನಿವಿುತ್ತ ನಿರ್ಬಲವಾಗಿ ಯಾವ ಕೆಲಸವನ್ನು ಮಾಡಲಾರದೆ ಇತ್ತೋ ಅದನ್ನು ದೇವರೇ ಮಾಡಿದನು. ಏನಂದರೆ ಆತನು ಪಾಪನಿವಾರಣೆಗಾಗಿ ತನ್ನ ಮಗನನ್ನು ಪಾಪಾಧೀನವಾದ ನರಭಾವದ ರೂಪದಲ್ಲಿ ಕಳುಹಿಸಿಕೊಟ್ಟು ನರಭಾವದಲ್ಲಿಯೇ ಪಾಪಕ್ಕೆ ಮರಣದಂಡನೆಯನ್ನು ವಿಧಿಸಿದನು.


ತರುವಾಯ ಅವನು ಜನರಿಗೋಸ್ಕರವಾದ ದೋಷಪರಿಹಾರಕಯಜ್ಞದ ಹೋತವನ್ನು ವಧಿಸಿ ಅದರ ರಕ್ತವನ್ನು ತೆರೆಯೊಳಗೆ ತಂದು ಹೋರಿಯ ರಕ್ತದಿಂದ ಮಾಡಿದಂತೆಯೇ ಇದರ ರಕ್ತದಿಂದಲೂ ಮಾಡಿ ಕೃಪಾಸನದ ಮೇಲೆಯೂ ಎದುರಾಗಿಯೂ ಚಿವಿುಕಿಸಬೇಕು.


ತನ್ನ ತಪ್ಪು ತನಗೆ ತಿಳಿದು ಬಂದಾಗ ಅವನು ಪೂರ್ಣಾಂಗವಾದ ಹೋತವನ್ನು ತಂದು ಸಮರ್ಪಿಸಬೇಕು;


ಆಮೇಲೆ ಅವರು ಒಂದು ಹೋತವನ್ನು ಕೊಯಿದು ಅದರ ರಕ್ತದಲ್ಲಿ ಯೋಸೇಫನ ಅಂಗಿಯನ್ನು ಅದ್ದಿ


ಇವುಗಳಿಗೆ ತಕ್ಕ ಪಾನದ್ರವ್ಯಾರ್ಪಣೆ ಯಾವದಂದರೆ - ಒಂದೊಂದು ಹೋರಿಯೊಡನೆ ಮೂರು ಸೇರೂ ಟಗರಿನೊಡನೆ ಎರಡು ಸೇರೂ ಕುರಿಯೊಡನೆ ಒಂದುವರೆ ಸೇರೂ ದ್ರಾಕ್ಷಾರಸ. ಸಂವತ್ಸರದ ಪ್ರತಿ ಅಮಾವಾಸ್ಯೆಯಲ್ಲಿಯೂ ಹೀಗೆ ಸರ್ವಾಂಗಹೋಮವನ್ನು ಮಾಡಬೇಕು;


ಹೀಗೆ ಇಸ್ರಾಯೇಲ್ಯರು ನಾನಾ ವಿಧವಾದ ಅಪರಿಶುದ್ಧತ್ವ, ಅಪರಾಧ, ದ್ರೋಹ ಇವುಗಳಿಂದ ಮಹಾಪವಿತ್ರಸ್ಥಾನಕ್ಕೆ ಉಂಟುಮಾಡಿದ ದೋಷವನ್ನು ಆರೋನನು ಪರಿಹರಿಸುವನು. ಅಶುದ್ಧರಾದ ಅವರ ನಡುವೆ ಇರುವ ದೇವದರ್ಶನದ ಗುಡಾರಕ್ಕೋಸ್ಕರವೂ ಹಾಗೆಯೇ ದೋಷಪರಿಹಾರ ಮಾಡುವನು.


ದೋಷಪರಿಹಾರಕಯಜ್ಞಕ್ಕಾಗಿ ಒಂದು ಹೋತವನ್ನೂ ಸಮರ್ಪಿಸಬೇಕು.


ದೋಷಪರಿಹಾರಕ ಯಜ್ಞಕ್ಕಾಗಿ ಒಂದು ಹೋತವನ್ನೂ ತಂದು ಸಮರ್ಪಿಸಬೇಕು.


ದೋಷಪರಿಹಾರಕಯಜ್ಞಕ್ಕಾಗಿ ಒಂದು ಹೋತವನ್ನೂ ತಂದು ಸಮರ್ಪಿಸಬೇಕು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು