Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅರಣ್ಯಕಾಂಡ 28:24 - ಕನ್ನಡ ಸತ್ಯವೇದವು J.V. (BSI)

24 ಆ ಏಳು ದಿನಗಳಲ್ಲಿಯೂ ನಿತ್ಯಸರ್ವಾಂಗಹೋಮವನ್ನೂ ಅದಕ್ಕೆ ಸೇರಿದ ಪಾನದ್ರವ್ಯನೈವೇದ್ಯವನ್ನೂ ಸಮರ್ಪಿಸುವದಲ್ಲದೆ ಮೇಲೆ ಕಂಡ ಕ್ರಮದ ಮೇರೆಗೆ ಪ್ರತಿದಿನವೂ ಹೋಮರೂಪವಾಗಿ ಯೆಹೋವನಿಗೆ ಆಹಾರವನ್ನು ಸಮರ್ಪಿಸಿ ಆತನಿಗೋಸ್ಕರ ಸುವಾಸನೆಯನ್ನುಂಟುಮಾಡಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

24 ಆ ಏಳು ದಿನಗಳಲ್ಲಿಯೂ ನಿತ್ಯ ಸರ್ವಾಂಗಹೋಮವನ್ನು ಸಮರ್ಪಿಸುವುದಲ್ಲದೆ ಮೇಲೆ ಹೇಳಿದ ಕ್ರಮದ ಪ್ರಕಾರ ಪ್ರತಿದಿನವೂ ಹೋಮರೂಪವಾಗಿ ಯೆಹೋವನಿಗೆ ಆಹಾರವನ್ನು, ಪಾನದ್ರವ್ಯವನ್ನು ಸಹ ಸಮರ್ಪಿಸಿ ಆತನಿಗೋಸ್ಕರ ಸುವಾಸನೆಯನ್ನುಂಟುಮಾಡಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

24 ಆ ಏಳು ದಿನಗಳಲ್ಲೂ ದೈನಿಕ ದಹನಬಲಿಯನ್ನು ಮತ್ತು ಅದಕ್ಕೆ ಸೇರಿದ ಪಾನಾರ್ಪಣೆಯನ್ನು ಒಪ್ಪಿಸಬೇಕಲ್ಲದೆ ಮೇಲೆ ಹೇಳಿದ ಕ್ರಮದ ಮೇರೆಗೆ ಪ್ರತಿದಿನವೂ ದಹನಬಲಿ ರೂಪವಾಗಿ ಸರ್ವೇಶ್ವರನಿಗೆ ಅನ್ನಾರ್ಪಣೆ ಮಾಡಿ ಅವರಿಗೆ ಸುಗಂಧ ಸುವಾಸನೆಯನ್ನು ಉಂಟುಮಾಡಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

24 “ಈ ಎಲ್ಲ ಅರ್ಪಣೆಗಳನ್ನು ಆ ಏಳು ದಿನಗಳಲ್ಲಿ ಪ್ರತಿಯೊಂದು ದಿನವೂ ಆಹಾರವಾಗಿಯೂ ತ್ಯಾಗಮಯವಾದ ಕಾಣಿಕೆಯಾಗಿಯೂ ಯೆಹೋವನಿಗೆ ಸುಗಂಧ ವಾಸನೆಯಾಗಿಯೂ ಅರ್ಪಿಸಬೇಕು. ಕ್ರಮಾನುಸಾರವಾದ ಸರ್ವಾಂಗಹೋಮ ಮತ್ತು ಅದರ ಪಾನದ್ರವ್ಯಾರ್ಪಣೆಗಳಲ್ಲದೆ ಇವುಗಳನ್ನೂ ಅರ್ಪಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

24 ಈ ಪ್ರಕಾರ ನೀವು ಏಳು ದಿವಸಗಳ ಮಟ್ಟಿಗೆ ಪ್ರತಿದಿನವೂ ಯೆಹೋವ ದೇವರಿಗೆ ಸುವಾಸನೆಗಾಗಿ ದಹನಬಲಿಯ ಆಹಾರವನ್ನು ಅರ್ಪಿಸಬೇಕು. ಅದನ್ನೂ ಅದಕ್ಕೆ ತಕ್ಕ ಪಾನಾರ್ಪಣೆಯನ್ನೂ ನಿತ್ಯವಾದ ದಹನಬಲಿಯ ಹೊರತಾಗಿ ಅರ್ಪಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅರಣ್ಯಕಾಂಡ 28:24
5 ತಿಳಿವುಗಳ ಹೋಲಿಕೆ  

ಯಾಜಕನು ಯಜ್ಞವೇದಿಯ ಮೇಲೆ ಹೋಮಮಾಡಬೇಕು. ಅದು ಅಗ್ನಿಮೂಲಕವಾಗಿ ಯೆಹೋವನಿಗೆ ಆಹಾರವಾಗುವದು.


ಇದರ ವಿಷಯದಲ್ಲಿ ನೀನು ಅಪ್ಪಣೆ ಮಾಡಬೇಕಾದದ್ದೇನಂದರೆ -


ಒಂದುವರೆ ಸೇರು ಶ್ರೇಷ್ಠವಾದ ಎಣ್ಣೆಯನ್ನೂ ಮೂರು ಸೇರು ಗೋದಿಹಿಟ್ಟನ್ನೂ ಬೆರಸಿ ಧಾನ್ಯ ಸಮರ್ಪಣೆಗಾಗಿ ಆ ಮೊದಲನೆಯ ಕುರಿಯ ಸಂಗಡ ಹೋಮ ಮಾಡಬೇಕು. ಪಾನ ದ್ರವ್ಯಾರ್ಪಣೆಗಾಗಿ ಒಂದುವರೆ ಸೇರು ದ್ರಾಕ್ಷಾರಸವನ್ನು ಹೋಮಮಾಡಬೇಕು.


ಹಬ್ಬದ ಏಳು ದಿನಗಳಲ್ಲಿಯೂ ಯೆಹೋವನಿಗೆ ಸಮರ್ಪಿಸತಕ್ಕ ಸರ್ವಾಂಗಹೋಮಕ್ಕಾಗಿ ಅವನು ಏಳು ದಿನಗಳವರೆಗೆ ದಿನವೊಂದಕ್ಕೆ ಪೂರ್ಣಾಂಗವಾದ ಏಳು ಹೋರಿಗಳನ್ನೂ ಏಳು ಟಗರುಗಳನ್ನೂ ಒದಗಿಸಲಿ, ಮತ್ತು ದೋಷಪರಿಹಾರಕಯಜ್ಞಕ್ಕಾಗಿ ದಿನವಹಿ ಒಂದು ಹೋತವನ್ನು ಕೊಡಲಿ.


ಇದಲ್ಲದೆ ಆ ಯಾಜಕರೆಲ್ಲರು ದಿನಾಲು ಸೇವೆಮಾಡುತ್ತಾ ಎಂದಿಗೂ ಪಾಪನಿವಾರಣೆ ಮಾಡಲಾರದಂಥ ಒಂದೇ ವಿಧವಾದ ಯಜ್ಞಗಳನ್ನು ಪದೇಪದೇ ಸಮರ್ಪಿಸುತ್ತಾ ನಿಂತುಕೊಂಡಿರುವರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು