ಅರಣ್ಯಕಾಂಡ 28:26 - ಕನ್ನಡ ಸತ್ಯವೇದವು J.V. (BSI)26 [ಪಸ್ಕವಾದ ಏಳು] ವಾರಗಳ ಮೇಲೆ ನೀವು ಹೊಸ ಬೆಳೆಯ ಗೋದಿಯನ್ನು ಯೆಹೋವನಿಗೆ ನೈವೇದ್ಯಮಾಡುವಾಗ ಪ್ರಥಮ ಫಲಾರ್ಪಣೆಯ ದಿನದಲ್ಲಿ ನೀವು ಯಾವ ಉದ್ಯೋಗವನ್ನೂ ನಡಿಸದೆ ದೇವಾರಾಧನೆಗಾಗಿ ಸಭೆಕೂಡಬೇಕು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201926 “‘ಪಸ್ಕವಾದ ಏಳು ವಾರಗಳ ಮೇಲೆ ನೀವು ಹೊಸ ಬೆಳೆಯ ಗೋದಿಯನ್ನು ಯೆಹೋವನಿಗೆ ನೈವೇದ್ಯಮಾಡುವಾಗ ಪ್ರಥಮಫಲಾರ್ಪಣೆಯ ದಿನದಲ್ಲಿ ನೀವು ಯಾವ ಉದ್ಯೋಗವನ್ನು ನಡೆಸದೆ ದೇವಾರಾಧನೆಗಾಗಿ ಸಭೆಕೂಡಬೇಕು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)26 ‘ಪಾಸ್ಕವಾದ ಏಳು ವಾರಗಳ ಮೇಲೆ ನೀವು ಹೊಸ ಬೆಳೆಯ ಗೋದಿಯನ್ನು ನೈವೇದ್ಯ ಮಾಡಬೇಕು. ಆ ಪ್ರಥಮ ಫಲಾರ್ಪಣೆಯ ದಿನ ನೀವು ಯಾವ ದುಡಿಮೆಯನ್ನೂ ಮಾಡದೆ ದೇವಾರಾಧನೆಗಾಗಿ ಸಭೆಸೇರಬೇಕು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್26 “ನಿಮ್ಮ ಪ್ರಥಮಫಲಗಳ ಹಬ್ಬದಲ್ಲಿ ಅಂದರೆ ವಾರಗಳ ಹಬ್ಬದಲ್ಲಿ ನೀವು ಹೊಸದಾಗಿ ಬೆಳೆದ ಗೋಧಿಯನ್ನು ಯೆಹೋವನಿಗೆ ಅರ್ಪಿಸುವಾಗ, ದೇವರನ್ನು ಆರಾಧಿಸಲು ನೀವು ಸಭೆ ಸೇರಬೇಕು. ನೀವು ಯಾವ ಪ್ರಯಾಸದ ಕೆಲಸವನ್ನೂ ಮಾಡಬಾರದು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ26 “ ‘ಪ್ರಥಮ ಫಲಗಳ ದಿವಸದಲ್ಲಿಯೂ ನೀವು ಯೆಹೋವ ದೇವರಿಗೆ ನಿಮ್ಮ ವಾರಗಳಲ್ಲಿ ಹೊಸ ಧಾನ್ಯ ಸಮರ್ಪಣೆಯನ್ನು ಅರ್ಪಿಸುವಾಗ, ಆ ದಿನದಲ್ಲಿ ನೀವು ಉದ್ಯೋಗವನ್ನೂ ಮಾಡದೆ ಪವಿತ್ರ ಸಭೆ ಕೂಡಬೇಕು. ಅಧ್ಯಾಯವನ್ನು ನೋಡಿ |