Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅರಣ್ಯಕಾಂಡ 28:4 - ಕನ್ನಡ ಸತ್ಯವೇದವು J.V. (BSI)

4 ನೀವು ದಿನಂಪ್ರತಿಯೂ ಯೆಹೋವನಿಗೆ ಸರ್ವಾಂಗಹೋಮಕ್ಕಾಗಿ ಹೊತ್ತಾರೆಯಲ್ಲಿ ಒಂದು ಕುರಿಯನ್ನೂ ಸಾಯಂಕಾಲದಲ್ಲಿ ಒಂದು ಕುರಿಯನ್ನೂ ಅಂತು ಎರಡು ಪೂರ್ಣಾಂಗವಾದ ವರುಷದ ಕುರಿಗಳನ್ನು ಸಮರ್ಪಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ಹೊತ್ತಾರೆಯಲ್ಲಿ ಒಂದು ಕುರಿಯನ್ನು, ಸಾಯಂಕಾಲದಲ್ಲಿ ಒಂದು ಕುರಿಯನ್ನೂ ಸಮರ್ಪಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

4 ‘ಪ್ರತಿದಿನ ನೀವು ಸರ್ವೇಶ್ವರನಿಗೆ ದಹನಬಲಿಗಾಗಿ ಬೆಳಿಗ್ಗೆ ಒಂದು ಕುರಿ, ಸಂಜೆ ಒಂದು ಕುರಿ ಹೀಗೆ ಎರಡು ಕಳಂಕರಹಿತವಾದ ಒಂದು ವರ್ಷದ ಕುರಿಗಳನ್ನು ಸಮರ್ಪಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

4 ನೀವು ಒಂದು ಕುರಿಮರಿಯನ್ನು ಹೊತ್ತಾರೆಯಲ್ಲಿಯೂ ಇನ್ನೊಂದನ್ನು ನಸುಸಂಜೆಯಲ್ಲಿಯೂ ಅರ್ಪಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

4 ಒಂದು ಕುರಿಮರಿಯನ್ನು ಮುಂಜಾನೆಯಲ್ಲಿಯೂ ಮತ್ತೊಂದನ್ನು ಸಾಯಂಕಾಲದಲ್ಲಿಯೂ ಸಮರ್ಪಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅರಣ್ಯಕಾಂಡ 28:4
12 ತಿಳಿವುಗಳ ಹೋಲಿಕೆ  

ಮೊದಲು ನನ್ನ ಕನಸಿನಲ್ಲಿ ಕಂಡ ಗಬ್ರಿಯೇಲನೆಂಬ ಪುರುಷನು ಅಸುರುಸುರಾಗಿ ಹಾರಿಬಂದು ಸಂಧ್ಯಾನೈವೇದ್ಯಸಮಯದಲ್ಲಿ ನನ್ನನ್ನು ಸೇರಿ


ಸಂಧ್ಯಾನೈವೇದ್ಯದ ಹೊತ್ತಿಗೆ ಪ್ರವಾದಿಯಾದ ಎಲೀಯನು ವೇದಿಯ ಹತ್ತಿರ ಬಂದು - ಅಬ್ರಹಾಮ್ ಇಸಾಕ್ ಇಸ್ರಾಯೇಲ್ಯರ ದೇವರೇ, ಯೆಹೋವನೇ, ನೀನೋಬ್ಬನೇ ಇಸ್ರಾಯೇಲ್ಯರ ದೇವರಾಗಿರುತ್ತೀ ಎಂಬದನ್ನೂ ನಾನು ನಿನ್ನ ಸೇವಕನಾಗಿರುತ್ತೇನೆಂಬದನ್ನೂ ಇದನ್ನೆಲ್ಲಾ ನಿನ್ನ ಅಪ್ಪಣೆಯ ಮೇರೆಗೆ ಮಾಡಿದೆನೆಂಬದನ್ನೂ ಈಹೊತ್ತು ತೋರಿಸಿ ಕೊಡು.


ಮಧ್ಯಾಹ್ನದಿಂದ ನೈವೇದ್ಯ ಸಮರ್ಪಣೆಯ ಹೊತ್ತಿನವರೆಗೂ ಪರವಶರಾಗಿ ಕೂಗುತ್ತಾ ಇದ್ದರು. ಆದರೂ ಆಕಾಶವಾಣಿಯಾಗಲಿಲ್ಲ; ಯಾವನೂ ಅವರಿಗೆ ಉತ್ತರಕೊಡಲಿಲ್ಲ, ಅವರನ್ನು ಲಕ್ಷಿಸಲಿಲ್ಲ.


ನಾನು ನಿರೂಪಿಸಿದ ಆಜ್ಞಾವಿಧಿಗಳ ಪ್ರಕಾರ ನೇಮಕವಾದ ಕಾಲದಲ್ಲೇ ಅಂದರೆ ಈ ತಿಂಗಳಿನ ಹದಿನಾಲ್ಕನೆಯ ದಿನದ ಸಂಜೇವೇಳೆಯಲ್ಲಿ ನೀವು ಅದನ್ನು ಆಚರಿಸಬೇಕು ಎಂದು ಹೇಳಿದನು.


ಈ ತಿಂಗಳಿನ ಹದಿನಾಲ್ಕನೆಯ ದಿನದವರೆಗೆ ಅವುಗಳನ್ನು ಇಟ್ಟುಕೊಂಡಿದ್ದು ಆ ದಿನದ ಸಂಜೇ ವೇಳೆಯಲ್ಲಿ ಇಸ್ರಾಯೇಲ್ಯರ ಸಮೂಹದವರೆಲ್ಲರು ತಮ್ಮ ತಮ್ಮ ಕೂಟಗಳಲ್ಲಿ ಕೊಯ್ಯಬೇಕು.


ನನ್ನ ಪ್ರಾರ್ಥನೆಯು ಧೂಪದಂತೆಯೂ ನಾನು ಕೈಯೆತ್ತುವದು ಸಂಧ್ಯಾನೈವೇದ್ಯದಂತೆಯೂ ನಿನಗೆ ಸಮರ್ಪಕವಾಗಲಿ.


ಅದು ಕುರಿಯಾಗಿದ್ದರೆ ತಂದವನು ಅದನ್ನು ಯೆಹೋವನ ಸನ್ನಿಧಿಗೆ ತೆಗೆದುಕೊಂಡು ಬಂದು


ಇದರ ವಿಷಯದಲ್ಲಿ ನೀನು ಅಪ್ಪಣೆ ಮಾಡಬೇಕಾದದ್ದೇನಂದರೆ -


[ಹೊತ್ತಾರೆಯ ಕುರಿಯೊಂದಿಗೆ] ನೀವು ಧಾನ್ಯನೈವೇದ್ಯಕ್ಕಾಗಿ ಒಂದುವರೆ ಸೇರು ಶ್ರೇಷ್ಠವಾದ ಎಣ್ಣೆಯನ್ನೂ ಮೂರು ಸೇರು ಗೋದಿಹಿಟ್ಟನ್ನೂ ಬೆರಸಿ ಸಮರ್ಪಿಸಬೇಕು.


ಅವರು ಪ್ರತಿದಿನವೂ ಪ್ರಾತಃಕಾಲಸಾಯಂಕಾಲಗಳಲ್ಲಿ ಯೆಹೋವನಿಗೋಸ್ಕರ ಯಜ್ಞವೇದಿಯ ಮೇಲೆ ಸರ್ವಾಂಗಹೋಮಗಳನ್ನು ಮಾಡಿ ಯೆಹೋವನ ಧರ್ಮಶಾಸ್ತ್ರದಲ್ಲಿ ಇಸ್ರಾಯೇಲ್ಯರಿಗೆ ವಿಧಿತವಾದದ್ದೆಲ್ಲವನ್ನೂ ನೆರವೇರಿಸಬೇಕಾಯಿತು.


ಯಾಜಕರೇ, ಗೋಣಿತಟ್ಟನ್ನು ಉಟ್ಟುಕೊಂಡು ಮೊರೆಯಿಡಿರಿ; ಯಜ್ಞವೇದಿಯ ಸೇವಕರೇ, ಗೋಳಾಡಿರಿ; ನನ್ನ ದೇವರ ದಾಸರೇ, ಬನ್ನಿರಿ, ಗೋಣಿತಟ್ಟನ್ನು ಸುತ್ತಿಕೊಂಡು ರಾತ್ರಿಯೆಲ್ಲಾ ಬಿದ್ದಿರ್ರಿ; ಧಾನ್ಯಪಾನನೈವೇದ್ಯಗಳು ನಿಮ್ಮ ದೇವರ ಆಲಯಕ್ಕೆ ಒದಗವು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು