Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅರಣ್ಯಕಾಂಡ 28:7 - ಕನ್ನಡ ಸತ್ಯವೇದವು J.V. (BSI)

7 ಆ ಕುರಿಯೊಂದಿಗೆ ಪಾನದ್ರವ್ಯಾರ್ಪಣೆಗಾಗಿ ಒಂದುವರೆ ಸೇರು ಮದ್ಯವನ್ನು ದೇವಸ್ಥಾನದಲ್ಲಿ ಯೆಹೋವನಿಗೋಸ್ಕರ ಹೊಯ್ದುಬಿಡಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ಒಂದು ಕುರಿಮರಿಯೊಂದಿಗೆ ಪರಿಶುದ್ಧ ಸ್ಥಳದಲ್ಲಿ ಒಂದುವರೆ ಸೇರು ಅಮಲೇರುವ ದ್ರಾಕ್ಷಾರಸದ ಪಾನದ್ರವ್ಯ ಅರ್ಪಣೆಗಾಗಿ, ಯೆಹೋವನಿಗೋಸ್ಕರ ಹೊಯ್ದುಬಿಡಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

7 ಆ ಕುರಿಯೊಂದಿಗೆ ಪಾನದ್ರವ್ಯಾರ್ಪಣೆಗಾಗಿ ಒಂದುವರೆ ಸೇರು ಮದ್ಯವನ್ನು ಪವಿತ್ರಸ್ಥಾನದಲ್ಲಿ ಪೀಠದ ಮೇಲೆ ಸುರಿಯಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

7 ಪ್ರತಿಯೊಂದು ಕುರಿಮರಿಯೊಂದಿಗೆ ಒಂದೂವರೆ ಸೇರು ದ್ರಾಕ್ಷಾರಸವನ್ನು ಪಾನದ್ರವ್ಯದ ಕಾಣಿಕೆಯಾಗಿ ಅರ್ಪಿಸಬೇಕು. ಯೆಹೋವನಿಗೆ ಪಾನದ್ರವ್ಯವಾಗಿ ಅರ್ಪಿಸತಕ್ಕ ದ್ರಾಕ್ಷಾರಸವನ್ನು ಪವಿತ್ರಸ್ಥಳದಲ್ಲಿ ಸುರಿಯಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

7 ಒಂದು ಕುರಿಮರಿಯೊಂದಿಗೆ ಪರಿಶುದ್ಧ ಸ್ಥಳದಲ್ಲಿ ಒಂದು ಲೀಟರ್ ಹುದುಗಿದ ದ್ರಾಕ್ಷಾರಸದ ಪಾನದ ಅರ್ಪಣೆಯನ್ನು ಯೆಹೋವ ದೇವರಿಗೋಸ್ಕರ ಸುರಿಯಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅರಣ್ಯಕಾಂಡ 28:7
17 ತಿಳಿವುಗಳ ಹೋಲಿಕೆ  

ಈ ಸರ್ವಾಂಗಹೋಮವನ್ನು ನೀವೂ ನಿಮ್ಮ ಸಂತತಿಯವರೂ ಪ್ರತಿನಿತ್ಯವೂ ಯೆಹೋವನ ಸನ್ನಿಧಿಯಲ್ಲಿ ದೇವದರ್ಶನದ ಗುಡಾರದ ಬಾಗಲಿನ ಎದುರಿನಲ್ಲಿ ಮಾಡಬೇಕು. ಆ ಗುಡಾರದಲ್ಲಿ ನಾನು ನಿಮಗೆ ದರ್ಶನವನ್ನು ಕೊಟ್ಟು ನಿನ್ನ ಸಂಗಡ ಮಾತಾಡುವೆನು;


ನಿಮ್ಮ ನಂಬಿಕೆಯೆಂಬ ಯಜ್ಞವನ್ನು ದೇವರಿಗರ್ಪಿಸುವ ಸೇವೆಯಲ್ಲಿ ನಾನೇ ಪಾನದ್ರವ್ಯವಾಗಿ ಅರ್ಪಿತವಾಗಬೇಕಾದರೂ ನನಗೆ ಸಂತೋಷ, ನಿಮ್ಮೆಲ್ಲರ ಕೂಡ ಸಂತೋಷ.


ಆತನು ಒಂದು ವೇಳೆ ಪಶ್ಚಾತ್ತಾಪಪಟ್ಟು ಹಿಂದಿರುಗಿ ನಿಮ್ಮ ದೇವರಾದ ಯೆಹೋವನ ಧಾನ್ಯಪಾನನೈವೇದ್ಯಗಳಿಗೆ ಅನುಕೂಲವಾದ ಸುವರಗಳನ್ನು ದಯಪಾಲಿಸಿ ಹೋದಾನು.


ಯಾಜಕರೇ, ಗೋಣಿತಟ್ಟನ್ನು ಉಟ್ಟುಕೊಂಡು ಮೊರೆಯಿಡಿರಿ; ಯಜ್ಞವೇದಿಯ ಸೇವಕರೇ, ಗೋಳಾಡಿರಿ; ನನ್ನ ದೇವರ ದಾಸರೇ, ಬನ್ನಿರಿ, ಗೋಣಿತಟ್ಟನ್ನು ಸುತ್ತಿಕೊಂಡು ರಾತ್ರಿಯೆಲ್ಲಾ ಬಿದ್ದಿರ್ರಿ; ಧಾನ್ಯಪಾನನೈವೇದ್ಯಗಳು ನಿಮ್ಮ ದೇವರ ಆಲಯಕ್ಕೆ ಒದಗವು.


ಧಾನ್ಯಪಾನನೈವೇದ್ಯಗಳು ಯೆಹೋವನ ಆಲಯದಲ್ಲಿ ನಿಂತುಹೋಗಿವೆ; ಯೆಹೋವನ ಸೇವಕರಾದ ಯಾಜಕರು ದುಃಖಿಸುತ್ತಾರೆ.


[ಕೆಟ್ಟ ಸಂತಾನವೇ] ಹೊಳೆಯ ಗುಂಡುಗಳು ನಿನಗೆ ಗತಿ, ಅವುಗಳೇ ನಿನ್ನ ಪಾಲು; ಅವುಗಳಿಗೇ ನೀನು ಪಾನದ್ರವ್ಯವನ್ನು ನೈವೇದ್ಯವಾಗಿ ಸುರಿದು ಧಾನ್ಯದ್ರವ್ಯವನ್ನು ಅರ್ಪಿಸಿದ್ದೀ. ನಾನು ಇದನ್ನೆಲ್ಲಾ ನೋಡಿ ಕೋಪವನ್ನು ಅಣಗಿಸಿಕೊಳ್ಳಲಾದೀತೇ?


ಈ ಪಶುಗಳೆಲ್ಲಾ ಪೂರ್ಣಾಂಗವಾಗಿಯೇ ಇರಬೇಕು. ನಿತ್ಯಸರ್ವಾಂಗಹೋಮ ಮತ್ತು ಅದಕ್ಕೆ ಸೇರಿದ ಧಾನ್ಯದ್ರವ್ಯನೈವೇದ್ಯ ಇವುಗಳನ್ನಲ್ಲದೆ ಮೇಲೆ ಕಂಡ ಯಜ್ಞಗಳನ್ನೂ ಅವುಗಳೊಡನೆ ಕೊಡಬೇಕಾದ ಪಾನದ್ರವ್ಯ ನೈವೇದ್ಯಗಳನ್ನೂ ಹೆಚ್ಚಾಗಿ ಸಮರ್ಪಿಸಬೇಕು.


ಇವುಗಳಿಗೆ ತಕ್ಕ ಪಾನದ್ರವ್ಯಾರ್ಪಣೆ ಯಾವದಂದರೆ - ಒಂದೊಂದು ಹೋರಿಯೊಡನೆ ಮೂರು ಸೇರೂ ಟಗರಿನೊಡನೆ ಎರಡು ಸೇರೂ ಕುರಿಯೊಡನೆ ಒಂದುವರೆ ಸೇರೂ ದ್ರಾಕ್ಷಾರಸ. ಸಂವತ್ಸರದ ಪ್ರತಿ ಅಮಾವಾಸ್ಯೆಯಲ್ಲಿಯೂ ಹೀಗೆ ಸರ್ವಾಂಗಹೋಮವನ್ನು ಮಾಡಬೇಕು;


ಪಾನದ್ರವ್ಯಕ್ಕಾಗಿ ಮೂರು ಸೇರು ದ್ರಾಕ್ಷಾರಸವನ್ನೂ ತಂದು ಸಮರ್ಪಿಸಬೇಕು. ಇದು ಯೆಹೋವನಿಗೆ ಸುಗಂಧಹೋಮವಾಗುವದು.


ಪಾನದ್ರವ್ಯವಾಗಿ ಎರಡು ಸೇರು ದ್ರಾಕ್ಷಾರಸವನ್ನೂ ತಂದು ಸಮರ್ಪಿಸಬೇಕು.


ಒಂದುವರೆ ಸೇರು ದ್ರಾಕ್ಷಾರಸವನ್ನೂ ತರಬೇಕು. ನೀವು ಸರ್ವಾಂಗಹೋಮವಾಗಿ ಇಲ್ಲವೆ ಸಮಾಧಾನಯಜ್ಞವಾಗಿ ಸಮರ್ಪಿಸುವ ಒಂದೊಂದು ಕುರಿಯೊಂದಿಗೆ ಇದನ್ನೂ ಸಮರ್ಪಿಸಬೇಕು.


ಅದರೊಂದಿಗೆ ಮಾಡಬೇಕಾದ ಧಾನ್ಯನೈವೇದ್ಯವು ಯಾವದಂದರೆ ಎಣ್ಣೆ ಬೆರೆತ ಆರು ಸೇರು ಗೋದಿಯ ಹಿಟ್ಟೇ. ಯೆಹೋವನಿಗೆ ಸುವಾಸನೆಯನ್ನುಂಟುಮಾಡುವದಕ್ಕೆ ಇದನ್ನು ಬೆಂಕಿಯಲ್ಲಿ ಹೋಮಮಾಡಬೇಕು. ಅದರೊಂದಿಗೆ ಸಮರ್ಪಿಸಬೇಕಾದ ಪಾನದ್ರವ್ಯವು ಒಂದುವರೆ ಸೇರು ದ್ರಾಕ್ಷಾರಸ.


ಆ ವೇದಿಯ ಮೇಲೆ ಬೇರೆ ಯಾವ ಧೂಪವನ್ನೂ ಹಾಕಕೂಡದು; ಅದರ ಮೇಲೆ ಹೋಮವನ್ನಾಗಲಿ ಧಾನ್ಯ ದ್ರವ್ಯವನ್ನಾಗಲಿ ಪಾನದ್ರವ್ಯವನ್ನಾಗಲಿ ಸಮರ್ಪಿಸಕೂಡದು.


ಒಂದುವರೆ ಸೇರು ಶ್ರೇಷ್ಠವಾದ ಎಣ್ಣೆಯನ್ನೂ ಮೂರು ಸೇರು ಗೋದಿಹಿಟ್ಟನ್ನೂ ಬೆರಸಿ ಧಾನ್ಯ ಸಮರ್ಪಣೆಗಾಗಿ ಆ ಮೊದಲನೆಯ ಕುರಿಯ ಸಂಗಡ ಹೋಮ ಮಾಡಬೇಕು. ಪಾನ ದ್ರವ್ಯಾರ್ಪಣೆಗಾಗಿ ಒಂದುವರೆ ಸೇರು ದ್ರಾಕ್ಷಾರಸವನ್ನು ಹೋಮಮಾಡಬೇಕು.


ನೀವು ಪ್ರತಿನಿತ್ಯವೂ ಯೆಹೋವನಿಗೆ ಸುಗಂಧಕರವಾದ ಈ ಸರ್ವಾಂಗಹೋಮವನ್ನು ಮಾಡಬೇಕೆಂಬದಾಗಿ ಸೀನಾಯಿ ಬೆಟ್ಟದಲ್ಲಿ ನೇಮಕವಾಯಿತು.


ಸಾಯಂಕಾಲದಲ್ಲಿ ಎರಡನೆಯ ಕುರಿಯನ್ನು ಹೋಮಮಾಡುವಾಗ ಹೊತ್ತಾರೆಯಲ್ಲಿ ಮಾಡಿದ ಪ್ರಕಾರವೇ ಅದರೊಂದಿಗೆ ಧಾನ್ಯದ್ರವ್ಯಪಾನದ್ರವ್ಯಗಳನ್ನೂ ಸಮರ್ಪಿಸಬೇಕು. ಅದು ಯೆಹೋವನಿಗೆ ಸುಗಂಧಕರ ಹೋಮವಾಗಿರುವದು.


ಅದರ ಕರುಳುಗಳನ್ನೂ ಕಾಲುಗಳನ್ನೂ ನೀರಿನಲ್ಲಿ ತೊಳೆದನಂತರ ಯಾಜಕನು ಅದನ್ನು ಪೂರ್ತಿಯಾಗಿ ಯಜ್ಞವೇದಿಯ ಮೇಲೆ ಹೋಮಮಾಡಬೇಕು. ಅದು ಅಗ್ನಿಯ ಮೂಲಕ ಯೆಹೋವನಿಗೆ ಸುವಾಸನೆಯನ್ನುಂಟುಮಾಡುವ ಸರ್ವಾಂಗಹೋಮವಾಗಿದೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು