Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅರಣ್ಯಕಾಂಡ 29:17 - ಕನ್ನಡ ಸತ್ಯವೇದವು J.V. (BSI)

17 ಆ ಉತ್ಸವದ ಎರಡನೆಯ ದಿನದಲ್ಲಿ ನೀವು ನಿತ್ಯಸರ್ವಾಂಗಹೋಮವನ್ನೂ ಅದಕ್ಕೆ ನೇಮಕವಾದ ಧಾನ್ಯದ್ರವ್ಯಪಾನದ್ರವ್ಯಗಳನ್ನೂ ಮಾತ್ರವಲ್ಲದೆ [ಸರ್ವಾಂಗಹೋಮಕ್ಕಾಗಿ] ಹನ್ನೆರಡು ಹೋರಿ, ಎರಡು ಟಗರು, ಹದಿನಾಲ್ಕು ಪೂರ್ಣಾಂಗವಾದ ವರುಷದ ಕುರಿ ಇವುಗಳನ್ನೂ;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

17 “‘ಆ ಉತ್ಸವದ ಎರಡನೆಯ ದಿನದಲ್ಲಿ ನೀವು ನಿತ್ಯ ಸರ್ವಾಂಗಹೋಮವನ್ನೂ, ಧಾನ್ಯದ್ರವ್ಯಗಳನ್ನೂ, ಪಾನದ್ರವ್ಯಗಳನ್ನೂ ಮಾತ್ರವಲ್ಲದೆ ಸರ್ವಾಂಗಹೋಮಕ್ಕಾಗಿ ದೋಷವಿಲ್ಲದ ಹನ್ನೆರಡು ಹೋರಿ, ಎರಡು ಟಗರು, ಹದಿನಾಲ್ಕು ಪೂರ್ಣಾಂಗವಾದ ಒಂದು ವರ್ಷದ ಕುರಿಮರಿಯನ್ನು ಸಮರ್ಪಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

17 ಆ ಹಬ್ಬದ ಎರಡನೆಯ ದಿನದಲ್ಲಿ ದೈನಿಕ ದಹನಬಲಿಯನ್ನೂ ಅದಕ್ಕೆ ಸಂಬಂಧಿಸಿದ ಧಾನ್ಯ ಹಾಗು ಪಾನಾರ್ಪಣೆಗಳ ಜೊತೆಗೆ ಕಳಂಕರಹಿತವಾದ ಹನ್ನೆರಡು ಹೋರಿ, ಎರಡು ಟಗರು, ವರ್ಷದ ಹದಿನಾಲ್ಕು ಕುರಿಗಳು ಇವುಗಳನ್ನು ಸಮರ್ಪಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

17 “ಆ ಉತ್ಸವದ ಎರಡನೆಯ ದಿನದಲ್ಲಿ ನೀವು ಹನ್ನೆರಡು ಹೋರಿಗಳನ್ನು, ಎರಡು ಟಗರುಗಳನ್ನು ಮತ್ತು ಒಂದು ವರ್ಷದ ಹದಿನಾಲ್ಕು ಗಂಡು ಕುರಿಮರಿಗಳನ್ನು ಅರ್ಪಿಸಬೇಕು. ಇವುಗಳೆಲ್ಲ ಪೂರ್ಣಾಂಗವಾದವುಗಳಾಗಿರಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

17 “ ‘ಎರಡನೆಯ ದಿವಸದಲ್ಲಿ ಕಳಂಕವಿಲ್ಲದ ಹನ್ನೆರಡು ಎಳೆಯ ಹೋರಿಗಳನ್ನೂ ಎರಡು ಟಗರುಗಳನ್ನೂ ಒಂದು ವರ್ಷದ ಹದಿನಾಲ್ಕು ಕುರಿಮರಿಗಳನ್ನೂ,

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅರಣ್ಯಕಾಂಡ 29:17
14 ತಿಳಿವುಗಳ ಹೋಲಿಕೆ  

ಇಲ್ಲಿ ಹೊಸ ಒಡಂಬಡಿಕೆಯೆಂದು ಹೇಳಿದ್ದರಲ್ಲಿ ಮೊದಲಿದ್ದದ್ದನ್ನು ಹಳೇದಾಗಿ ಮಾಡಿದ್ದಾನೆ. ಆದರೆ ಹಳೇದಾಗುತ್ತಾ ಮುದಿಯಾಗುವಂಥದಕ್ಕೆ ಅಂತ್ಯವು ಸಮೀಪವಾಗಿದೆ.


ಆದದರಿಂದ ಸಹೋದರರೇ, ದೇವರ ಕನಿಕರವನ್ನು ನಿಮ್ಮ ನೆನಪಿಗೆ ತಂದು ನಿಮ್ಮನ್ನು ಬೇಡಿಕೊಳ್ಳುವದೇನಂದರೆ - ನೀವು ನಿಮ್ಮ ನಿಮ್ಮ ದೇಹಗಳನ್ನು ದೇವರಿಗೆ ಮೀಸಲಾಗಿಯೂ ಮೆಚ್ಚಿಗೆಯಾಗಿಯೂ ಇರುವ ಸಜೀವಯಜ್ಞವಾಗಿ ಅರ್ಪಿಸಿರಿ; ಇದೇ ನಿಮ್ಮ ವಿವೇಕಪೂರ್ವಕವಾದ ಆರಾಧನೆಯು.


ನನಗೆ ಯಜ್ಞವು ಬೇಡ, ಕರುಣೆಯೇ ಬೇಕು; ಹೋಮಗಳಿಗಿಂತ ದೇವಜ್ಞಾನವೇ ಇಷ್ಟ.


ಯೆಹೋವನು ಹೀಗೆನ್ನುತ್ತಾನೆ - ಲೆಕ್ಕವಿಲ್ಲದ ನಿಮ್ಮ ಯಜ್ಞಗಳು ನನಗೇಕೆ? ಟಗರುಗಳ ಸರ್ವಾಂಗಹೋಮ, ಪುಷ್ಟಪಶುಗಳ ಕೊಬ್ಬು, ಇದೆಲ್ಲಾ ನನಗೆ ಸಾಕಾಯಿತು; ಹೋರಿಕುರಿಹೋತಗಳ ರಕ್ತಕ್ಕೆ ನಾನು ಒಲಿಯೆನು.


ಇದು ಯೆಹೋವನಿಗೆ ಕೊಂಬುಗೊರಸುಗಳುಳ್ಳ ಎಳೇ ಹೋರಿಗಳ ಯಜ್ಞಕ್ಕಿಂತ ಬಹು ಪ್ರಿಯವಾದದ್ದು.


ಯಜ್ಞನೈವೇದ್ಯಗಳು ನಿನಗೆ ಇಷ್ಟವಲ್ಲ; ಸರ್ವಾಂಗಹೋಮಗಳನ್ನಾಗಲಿ ದೋಷಪರಿಹಾರಕ ಯಜ್ಞಗಳನ್ನಾಗಲಿ ನೀನು ಅಪೇಕ್ಷಿಸಲಿಲ್ಲ. ಆದರೆ ಶ್ರವಣಶಕ್ತಿಯನ್ನು ನನಗೆ ಅನುಗ್ರಹಿಸಿದಿ.


ಆ ದಿನದಲ್ಲಿ ನಿತ್ಯಸರ್ವಾಂಗಹೋಮವನ್ನೂ ಅದಕ್ಕೆ ನೇಮಕವಾದ ಧಾನ್ಯದ್ರವ್ಯಪಾನದ್ರವ್ಯನೈವೇದ್ಯಗಳನ್ನೂ ಮಾತ್ರವಲ್ಲದೆ ಯೆಹೋವನಿಗೆ ಸುವಾಸನೆಯನ್ನುಂಟುಮಾಡುವ ಸರ್ವಾಂಗಹೋಮಕ್ಕಾಗಿ ಹದಿಮೂರು ಹೋರಿಗಳನ್ನೂ ಎರಡು ಟಗರುಗಳನ್ನೂ ಹದಿನಾಲ್ಕು ಪೂರ್ಣಾಂಗವಾದ ವರುಷದ ಕುರಿಗಳನ್ನೂ;


ಆ ಏಳು ದಿನಗಳಲ್ಲಿಯೂ ನೀವು ಯೆಹೋವನ ಸನ್ನಿಧಿಯಲ್ಲಿ ಹೋಮಮಾಡಬೇಕು. ಎಂಟನೆಯ ದಿನದಲ್ಲಿಯೂ ದೇವಾರಾಧನೆಗಾಗಿ ಸಭೆಕೂಡಬೇಕು, ಯೆಹೋವನ ಸನ್ನಿಧಿಯಲ್ಲಿ ಹೋಮಮಾಡಬೇಕು. ಅದು ಸಭೆಕೂಡುವ ದಿನವಾದದರಿಂದ ಅದರಲ್ಲಿ ಯಾವ ಉದ್ಯೋಗವನ್ನೂ ನಡಿಸಬಾರದು.


ಆ ಮರಿಯು ಪೂರ್ಣಾಂಗವಾದ ಒಂದು ವರುಷದ ಗಂಡಾಗಿರಬೇಕು; ಕುರಿಗಳಿಂದಾಗಲಿ ಆಡುಗಳಿಂದಾಗಲಿ ಅದನ್ನು ತೆಗೆದುಕೊಳ್ಳಬಹುದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು