Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅರಣ್ಯಕಾಂಡ 3:15 - ಕನ್ನಡ ಸತ್ಯವೇದವು J.V. (BSI)

15 ನೀನು ಲೇವಿಯರಲ್ಲಿ ಒಂದು ತಿಂಗಳು ಮೊದಲುಗೊಂಡು ಹೆಚ್ಚಾದ ವಯಸ್ಸುಳ್ಳ ಗಂಡಸರನ್ನೆಲ್ಲಾ ಗೋತ್ರಕುಟುಂಬಗಳ ಪ್ರಕಾರ ಲೆಕ್ಕಿಸಬೇಕೆಂದು ಆಜ್ಞಾಪಿಸಲಾಗಿ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

15 “ನೀನು ಲೇವಿಯರಲ್ಲಿ ಒಂದು ತಿಂಗಳು ಮತ್ತು ಅದಕ್ಕೆ ಮೇಲ್ಪಟ್ಟ ವಯಸ್ಸುಳ್ಳ ಗಂಡಸರನ್ನೆಲ್ಲಾ ಗೋತ್ರಕುಟುಂಬಗಳ ಪ್ರಕಾರ ಲೆಕ್ಕಿಸಬೇಕು” ಎಂದು ಆಜ್ಞಾಪಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

15 “ನೀನು ಲೇವಿಯರಲ್ಲಿ ಒಂದು ತಿಂಗಳು ಮತ್ತು ಮೇಲ್ಪಟ್ಟ ವಯಸ್ಸಿನ ಗಂಡಸರನ್ನೆಲ್ಲಾ ಗೋತ್ರ ಕುಟುಂಬಗಳ ಪ್ರಕಾರ ಎಣಿಸಬೇಕು,” ಎಂದು ಆಜ್ಞಾಪಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

15 “ಲೇವಿಯರನ್ನು ಅವರ ಕುಟುಂಬಗಳಿಗನುಗುಣವಾಗಿಯೂ ಗೋತ್ರಗಳಿಗನುಸಾರವಾಗಿಯೂ ಲೆಕ್ಕಿಸು. ಪ್ರತಿಯೊಬ್ಬ ಗಂಡಸನ್ನೂ ಒಂದು ತಿಂಗಳು ಮೇಲ್ಪಟ್ಟ ಪ್ರತಿಯೊಬ್ಬ ಗಂಡುಮಗುವನ್ನೂ ಲೆಕ್ಕಿಸು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

15 “ಲೇವಿಯರನ್ನು ಕುಟುಂಬಗಳಾಗಿಯೂ, ಗೋತ್ರಗಳಾಗಿಯೂ ಎಣಿಕೆ ಮಾಡು. ಒಂದು ತಿಂಗಳು ಅದಕ್ಕೆ ಮೇಲ್ಪಟ್ಟ ಪ್ರಾಯವುಳ್ಳ ಗಂಡಸರೆಲ್ಲರನ್ನೂ ನೀನು ಎಣಿಸು,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅರಣ್ಯಕಾಂಡ 3:15
17 ತಿಳಿವುಗಳ ಹೋಲಿಕೆ  

ಬೇರೆ ಇಸ್ರಾಯೇಲ್ಯರಿಗೆ ಸ್ವಾಸ್ತ್ಯದೊರಕಿದಂತೆ ಲೇವಿಯರಿಗೆ ಸ್ವಾಸ್ತ್ಯದೊರೆಯದೆ ಹೋದದರಿಂದ ಅವರು ಇಸ್ರಾಯೇಲ್ಯರೊಡನೆ ಲೆಕ್ಕಿಸಲ್ಪಡಲಿಲ್ಲ. ಲೇವಿಯರೊಳಗೆ ಒಂದು ತಿಂಗಳು ಮೊದಲುಗೊಂಡು ಹೆಚ್ಚಾದ ವಯಸ್ಸುಳ್ಳ ಗಂಡಸರನ್ನು ಲೆಕ್ಕಿಸಲಾಗಿ ಅವರ ಸಂಖ್ಯೆ 23,000.


ಆ ಗ್ರಂಥಗಳು ಕ್ರಿಸ್ತ ಯೇಸುವಿನಲ್ಲಿರುವ ನಂಬಿಕೆಯ ಮೂಲಕ ರಕ್ಷಣೆಹೊಂದಿಸುವ ಜ್ಞಾನವನ್ನು ಕೊಡುವದಕ್ಕೆ ಶಕ್ತವಾಗಿವೆ.


ಆದರೆ ಯೇಸು ಅದನ್ನು ಕಂಡು ಕೋಪಗೊಂಡು ಅವರಿಗೆ - ಮಕ್ಕಳನ್ನು ನನ್ನ ಹತ್ತಿರಕ್ಕೆ ಬರಗೊಡಿಸಿರಿ; ಅವುಗಳಿಗೆ ಅಡ್ಡಿಮಾಡಬೇಡಿರಿ; ದೇವರ ರಾಜ್ಯವು ಇಂಥವರದೇ.


ನಾನು ನಿನ್ನನ್ನು ಪ್ರೀತಿಸಿರುವದು ಶಾಶ್ವತ ಪ್ರೇಮದಿಂದಲೇ; ಆದಕಾರಣ ನಿನ್ನನ್ನು ಮಮತೆಯಿಂದ ಸೆಳೆದುಕೊಂಡಿದ್ದೇನೆ,


ನೀನು ಹೋಗಿ ಯೆರೂಸಲೇವಿುನ ಕಿವಿಗೆ ಮುಟ್ಟುವಂತೆ ಈ ಮಾತುಗಳನ್ನು ಸಾರು - ಯೆಹೋವನು ಹೀಗನ್ನುತ್ತಾನೆ, ನೀನು ಯೌವನದಲ್ಲಿ [ನನ್ನ ಮೇಲೆ] ಇಟ್ಟಿದ್ದ ಪ್ರೀತಿಯನ್ನೂ ವಿವಾಹ ಕಾಲದ ನಿನ್ನ ಪ್ರೇಮವನ್ನೂ ಬೀಜಬಿತ್ತಿಯೇ ಇಲ್ಲದ ಅರಣ್ಯದಲ್ಲಿ ನೀನು ನನ್ನನ್ನು ಹಿಂಬಾಲಿಸಿದ ನಿನ್ನ ಪಾತಿವ್ರತ್ಯವನ್ನೂ ನಿನ್ನ ಹಿತಕ್ಕಾಗಿ ಜ್ಞಾಪಕದಲ್ಲಿಟ್ಟಿದ್ದೇನೆ.


ನನ್ನನ್ನು ಪ್ರೀತಿಸುವವರನ್ನು ನಾನು ಪ್ರೀತಿಸುತ್ತೇನೆ, ಆತುರದಿಂದ ಹುಡುಕುವವರು ನನ್ನನ್ನು ಕಂಡುಕೊಳ್ಳುವರು.


ಹೆಸರುಹಿಡಿದು ಲೆಕ್ಕಿಸಲ್ಪಟ್ಟ ಚೊಚ್ಚಲಾದವರು ಅಂದರೆ ಒಂದು ತಿಂಗಳು ಮೊದಲುಗೊಂಡು ಹೆಚ್ಚಾದ ವಯಸ್ಸುಳ್ಳ ಗಂಡಸರು 22,273 ಮಂದಿ.


ಅವರಲ್ಲಿ ಲೆಕ್ಕಿಸಲ್ಪಟ್ಟ ಒಂದು ತಿಂಗಳು ಮೊದಲುಗೊಂಡು ಹೆಚ್ಚಾದ ವಯಸ್ಸುಳ್ಳ ಗಂಡಸರು 6200 ಮಂದಿ.


ಅವರಲ್ಲಿ ದೇವಸ್ಥಾನವನ್ನು ಕಾಯತಕ್ಕವರು ಅಂದರೆ ಒಂದು ತಿಂಗಳು ಮೊದಲುಗೊಡು ಹೆಚ್ಚಾದ ವಯಸ್ಸುಳ್ಳ ಗಂಡಸರು 8600 ಮಂದಿ.


ಅವರಲ್ಲಿ ಲೆಕ್ಕಿಸಲ್ಪಟ್ಟ ಒಂದು ತಿಂಗಳು ಮೊದಲುಗೊಂಡು ಹೆಚ್ಚಾದ ವಯಸ್ಸುಳ್ಳ ಗಂಡಸರು 7,500 ಮಂದಿ.


ಆದರೆ ಅವರೊಡನೆ ಲೇವಿಕುಲದ ಕುಟುಂಬಗಳು ಲೆಕ್ಕಿಸಲ್ಪಡಲಿಲ್ಲ.


ಆತನ ಅಪ್ಪಣೆಯ ಮೇರೆಗೆ ಮೋಶೆ ಅವರನ್ನು ಲೆಕ್ಕಿಸಿದನು.


ಇಸ್ರಾಯೇಲ್ಯರಲ್ಲಿ ಸೈನಿಕರಾಗಿ ಹೊರಡತಕ್ಕವರನ್ನು ಅಂದರೆ ಇಪ್ಪತ್ತು ವರುಷ ಮೊದಲುಗೊಂಡು ಹೆಚ್ಚಾದ ವಯಸ್ಸುಳ್ಳವರೆಲ್ಲರನ್ನು ಸೈನ್ಯಸೈನ್ಯವಾಗಿ ನೀನೂ ಆರೋನನೂ ಲೆಕ್ಕಿಸಬೇಕು.


ಲೇವಿಯರೊಳಗೆ ಲೆಕ್ಕಿಸಲ್ಪಟ್ಟ ಕುಟುಂಬಗಳು - ಗೇರ್ಷೋನನ ವಂಶದವರಾದ ಗೇರ್ಷೋನ್ಯರು, ಕೆಹಾತನ ವಂಶದವರಾದ ಕೆಹಾತ್ಯರು, ಮೆರಾರೀಯ ವಂಶದವರಾದ ಮೆರಾರೀಯರು.


ಆ ಪಟ್ಟಿಯಲ್ಲಿ ಗೋತ್ರಗಳಿಗನುಸಾರವಾಗಿಯೂ ಆಯಾ ಉದ್ಯೋಗವರ್ಗಗಳಿಗನುಸಾರವಾಗಿಯೂ ಇಪ್ಪತ್ತು ವರುಷ ಮೊದಲುಗೊಂಡು ಹೆಚ್ಚು ವಯಸ್ಸುಳ್ಳ ಯಾಜಕರು,


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು