Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅರಣ್ಯಕಾಂಡ 3:25 - ಕನ್ನಡ ಸತ್ಯವೇದವು J.V. (BSI)

25 ದೇವದರ್ಶನದ ಗುಡಾರದ ಸಾಮಾನುಗಳಲ್ಲಿ ಗೇರ್ಷೋನನ ವಂಶದವರು ಕಾಪಾಡಬೇಕಾದವುಗಳು ಯಾವವಂದರೆ - ಗುಡಾರವೂ ಅದರ ಮೇಲಣ ಡೇರೆಯ ಬಟ್ಟೆಯೂ ಅದರ ಮೇಲ್ಹೊದಿಕೆಯೂ ದೇವದರ್ಶನದ ಗುಡಾರದ ಬಾಗಲಲ್ಲಿರುವ ಪರದೆಯೂ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

25 ದೇವದರ್ಶನದ ಗುಡಾರದ ಉಪಕರಣಗಳಲ್ಲಿ ಗೇರ್ಷೋನನ ವಂಶದವರು ನೋಡಿಕೊಳ್ಳಬೇಕಾದವುಗಳು ಯಾವುದೆಂದರೆ: ಗುಡಾರ ಅದರ ಮೇಲಣ ಡೇರೆಯ ಬಟ್ಟೆ, ಅದರ ಮೇಲ್ಹೊದಿಕೆ, ದೇವದರ್ಶನದ ಗುಡಾರದ ಬಾಗಿಲಲ್ಲಿರುವ ಪರದೆಗಳು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

25 ದೇವದರ್ಶನದ ಗುಡಾರದ ಉಪಕರಣಗಳಲ್ಲಿ ಗೇರ್ಷೋನನ ವಂಶದವರು ನೋಡಿಕೊಳ್ಳಬೇಕಾಗಿದ್ದವುಗಳು ಇವು - ಗುಡಾರ, ಅದರ ಮೇಲಿದ್ದ ಡೇರೆಯ ಬಟ್ಟೆ, ಅದರ ಹೊದಿಕೆ, ದೇವದರ್ಶನದ ಗುಡಾರದ ಬಾಗಿಲಲ್ಲಿರುವ ಪರದೆ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

25 ದೇವದರ್ಶನಗುಡಾರದಲ್ಲಿ ಪವಿತ್ರ ಗುಡಾರವನ್ನು, ಹೊರಡೇರೆಯನ್ನು ಮತ್ತು ಅದರ ಮೇಲ್ಹೊದಿಕೆಯನ್ನು ನೋಡಿಕೊಳ್ಳವುದು ಗೇರ್ಷೋನ ವಂಶದವರ ಕೆಲಸವಾಗಿತ್ತು. ಇದಲ್ಲದೆ ಅವರು ಅಂಗಳದ ಪರದೆಯನ್ನೂ ನೋಡಿಕೊಳ್ಳುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

25 ದೇವದರ್ಶನದ ಗುಡಾರದ ಉಪಕರಣಗಳಲ್ಲಿ ಗೇರ್ಷೋನನ ವಂಶದವರು ನೋಡಿಕೊಳ್ಳಬೇಕಾದವುಗಳು ಯಾವವೆಂದರೆ: ಗುಡಾರ, ಅದರ ಮೇಲಿನ ಡೇರೆಯ ಬಟ್ಟೆ, ಅದರ ಹೊದಿಕೆ, ದೇವದರ್ಶನದ ಗುಡಾರದ ಬಾಗಿಲಲ್ಲಿರುವ ಪರದೆ,

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅರಣ್ಯಕಾಂಡ 3:25
23 ತಿಳಿವುಗಳ ಹೋಲಿಕೆ  

ನಾನು ನಿನಗೆ ತೋರಿಸುವ ಮಾದರಿಯ ಪ್ರಕಾರವೇ ಗುಡಾರವನ್ನೂ ಅದರಲ್ಲಿರುವ ಎಲ್ಲಾ ಸಾಮಾನುಗಳನ್ನೂ ಮಾಡಿಸಬೇಕು.


ಮಗನಾದ ತಿಮೊಥೆಯನೇ, ನಿನ್ನ ವಿಷಯದಲ್ಲಿ ಮುಂಚೆ ಉಂಟಾದ ಪ್ರವಾದನೆಗಳನ್ನು ನಾನು ನೆನಸಿ - ನೀನು ಅವುಗಳಿಂದ ಧೈರ್ಯಗೊಂಡು ಕ್ರೈಸ್ತರ ದಿವ್ಯಯುದ್ಧವನ್ನು ನಡಿಸಬೇಕೆಂದು ನಿನಗೆ ಆಜ್ಞಾಪನೆಮಾಡುತ್ತೇನೆ.


ಅರ್ಖಿಪ್ಪನಿಗೆ - ನೀನು ಕರ್ತನಿಂದ ಹೊಂದಿರುವ ಸೇವೆಯನ್ನು ನೆರವೇರಿಸುವದಕ್ಕೆ ಎಚ್ಚರವಾಗಿರಬೇಕೆಂದು ಹೇಳಿರಿ.


ಒಬ್ಬ ಮನುಷ್ಯಸು ತನ್ನ ಮನೆಯನ್ನು ಬಿಟ್ಟು ಬೇರೊಂದು ದೇಶಕ್ಕೆ ಹೋಗುವಾಗ ತನ್ನ ಆಳುಗಳಿಗೆ ಮನೇ ಆಡಳಿತವನ್ನು ಒಪ್ಪಿಸಿಕೊಟ್ಟು ಒಬ್ಬೊಬ್ಬನಿಗೆ ಅವನವನ ಕೆಲಸವನ್ನು ನೇವಿುಸಿ ಬಾಗಿಲುಕಾಯುವವನನ್ನು ಕರೆದು - ನೀನು ಎಚ್ಚರವಾಗಿರಬೇಕೆಂದು ಅಪ್ಪಣೆ ಕೊಡುವ ಪ್ರಕಾರ [ನಾನು ನಿಮಗೆ ಅಪ್ಪಣೆ ಕೊಡುತ್ತೇನೆ].


ಹಿಜ್ಕೀಯನು ಯಾಜಕರ ಮತ್ತು ಲೇವಿಯರ ಆಯಾ ವರ್ಗಗಳವರನ್ನು ಅವರವರಿಗೆ ನೇಮಕವಾದ ಸೇವೆಗೆ ಅಂದರೆ ಸರ್ವಾಂಗಹೋಮ ಸಮಾಧಾನಯಜ್ಞ ಇವುಗಳನ್ನು ಸಮರ್ಪಿಸುವದಕ್ಕೂ ಯೆಹೋವನ ಪಾಳೆಯದ ದ್ವಾರಗಳಲ್ಲಿ ಸೇರಿ ಯೆಹೋವನನ್ನು ಆರಾಧಿಸುತ್ತಾ ಕೀರ್ತಿಸುತ್ತಾ ಕೃತಜ್ಞತಾಸ್ತುತಿ ಮಾಡುತ್ತಾ ಇರುವದಕ್ಕೂ ನೇವಿುಸಿದನು.


ಹೀಗೆ ಅವರು ತಮ್ಮ ಸಹೋದರರಾದ ಆರೋನ್ಯರ ಸಹಾಯಕರಾಗಿದ್ದು ದೇವದರ್ಶನದ ಗುಡಾರವನ್ನೂ ಪರಿಶುದ್ಧವಾದ ಎಲ್ಲಾ ಸಾಮಾನುಗಳನ್ನೂ ನೋಡಿಕೊಳ್ಳುವದೇ ಯೆಹೋವನ ಆಲಯದಲ್ಲಿ ಮಾಡತಕ್ಕ ಪರಿಚರ್ಯ.


ತರುವಾಯ ದೇವದರ್ಶನದ ಗುಡಾರವನ್ನು ಇಳಿಸಿದಾಗ ಗೇರ್ಷೋನ್ಯರೂ ಮೆರಾರೀಯರೂ ಅದನ್ನು ಹೊತ್ತುಕೊಂಡು ಹೊರಟರು.


ಅವನು ಗೇರ್ಷೋನ್ಯರಿಗೆ ಅವರು ಮಾಡಬೇಕಾದ ಕೆಲಸಕ್ಕೆ ತಕ್ಕ ಹಾಗೆ ಎರಡು ಬಂಡಿ ಎರಡು ಜೋಡಿ ಎತ್ತುಗಳನ್ನೂ


ಅವರು ದೇವದರ್ಶನದ ಗುಡಾರದ ಬಳಿಯಲ್ಲಿದ್ದು ಆರೋನನಿಗೋಸ್ಕರವೂ ಸರ್ವಸಮೂಹದವರಿಗೋಸ್ಕರವೂ ದೇವಸ್ಥಾನದ ಪರಿಚರ್ಯವನ್ನು ನಡಿಸಬೇಕು.


ಮತ್ತು ಮೋಶೆ ಗುಡಾರದ ಬಾಗಲಿಗೆ ಪರದೆಯನ್ನು ಹಾಕಿದನು.


ಗುಡಾರದ ಮೇಲೆ ಡೇರೆಯ ಬಟ್ಟೆಯನ್ನು ಹಾಸಿ ಆ ಡೇರೆಗೆ ಮೇಲ್ಹೊದಿಕೆಯನ್ನು ಹಾಕಿದನು. ಯೆಹೋವನು ಆಜ್ಞಾಪಿಸಿದಂತೆಯೇ ಮೋಶೆ ಅದನ್ನೆಲ್ಲಾ ಮಾಡಿದನು.


ಆಜ್ಞಾಶಾಸನಗಳಿರುವ ಗುಡಾರವನ್ನೂ ಅದರ ಸಾಮಾನು, ಉಪಕರಣ ಇವುಗಳನ್ನೂ ನೋಡಿಕೊಳ್ಳುವದಕ್ಕೆ ಅವರನ್ನು ನೇವಿುಸಬೇಕು. ಅವರು ಆ ಗುಡಾರವನ್ನೂ ಅದರ ಸಾಮಾನನ್ನೂ ಹೊರುವದಕ್ಕಾಗಿ ಇರಬೇಕು. ಮತ್ತು ಅವರು ಅದರ ಸೇವೆಯನ್ನು ಮಾಡುವವರಾಗಿ ಅದರ ಸುತ್ತಲೂ ತಮ್ಮ ಡೇರೆಗಳನ್ನು ಹಾಕಿಕೊಳ್ಳಬೇಕು.


ಗೇರ್ಷೋನ್ಯರ ಗೋತ್ರಗಳ ಪ್ರಧಾನಪುರುಷನು ಲಾಯೇಲನ ಮಗನಾದ ಎಲ್ಯಾಸಾಫ್.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು