ಅರಣ್ಯಕಾಂಡ 3:4 - ಕನ್ನಡ ಸತ್ಯವೇದವು J.V. (BSI)4 ನಾದಾಬ್ ಅಬೀಹೂ ಎಂಬಿಬ್ಬರು ಸೀನಾಯಿ ಅರಣ್ಯದಲ್ಲಿ ಯೆಹೋವನು ಆಜ್ಞಾಪಿಸದೆ ಇದ್ದ ಬೇರೆ ಬೆಂಕಿಯಿಂದ ಧೂಪವನ್ನು ಸಮರ್ಪಿಸಿದದರಿಂದ ಆತನ ಸನ್ನಿಧಿಯಲ್ಲೇ ಸತ್ತು ಹೋದರು; ಅವರಿಗೆ ಮಕ್ಕಳಿರಲಿಲ್ಲ. ಎಲ್ಲಾಜಾರ್ ಈತಾಮಾರ್ ಎಂಬಿಬ್ಬರು ತಂದೆಯ ಕೈಕೆಳಗೆ ಯಾಜಕಧರ್ಮವನ್ನು ನಡಿಸಿದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20194 ಆದರೆ ನಾದಾಬ್ ಮತ್ತು ಅಬೀಹೂ ಎಂಬುವವರು ಸೀನಾಯಿ ಮರುಭೂಮಿಯಲ್ಲಿ ಯೆಹೋವನು ಆಜ್ಞಾಪಿಸದೇ ಇದ್ದ ಬೇರೆ ಬೆಂಕಿಯಿಂದ ಧೂಪವನ್ನು ಸಮರ್ಪಿಸಿದ್ದರಿಂದ ಆತನ ಸನ್ನಿಧಿಯಲ್ಲೇ ಸತ್ತು ಹೋದರು. ಅವರಿಗೆ ಮಕ್ಕಳಿರಲಿಲ್ಲ. ಆದುದರಿಂದ ಎಲ್ಲಾಜಾರ್ ಮತ್ತು ಈತಾಮಾರ್ ಎಂಬಿಬ್ಬರು ತಮ್ಮ ತಂದೆಯಾದ ಆರೋನನ ಕೈಕೆಳಗೆ ಯಾಜಕಧರ್ಮವನ್ನು ನಡೆಸಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)4 ನಾದಾಬ್ ಮತ್ತು ಅಬೀಹೂ ಎಂಬಿಬ್ಬರು ಸೀನಾಯಿ ಮರುಭೂಮಿಯಲ್ಲಿ ಸರ್ವೇಶ್ವರ ಆಜ್ಞಾಪಿಸದ ಅಪವಿತ್ರ ಅಗ್ನಿಯಿಂದ ಧೂಪವನ್ನು ಸಮರ್ಪಿಸಿದರು. ಈ ಕಾರಣ ಸರ್ವೇಶ್ವರನ ಸನ್ನಿಧಿಯಲ್ಲಿ ಸತ್ತುಹೋದರು. ಅವರಿಗೆ ಮಕ್ಕಳಿರಲಿಲ್ಲ. ಎಲ್ಲಾಜಾರ್ ಮತ್ತು ಈತಾಮಾರ್ ಎಂಬ ಮಿಕ್ಕವರು ತಮ್ಮ ತಂದೆಯ ಕೈಕೆಳಗೆ ಯಾಜಕರಾಗಿ ಸೇವೆ ಸಲ್ಲಿಸಿದರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್4 ಆದರೆ ನಾದಾಬ ಮತ್ತು ಅಬೀಹೂ ಎಂಬಿಬ್ಬರು ಸೀನಾಯಿ ಮರುಭೂಮಿಯಲ್ಲಿ ಯೆಹೋವನಿಗೆ ಧೂಪವನ್ನು ಸಮರ್ಪಿಸುವಾಗ ಯೆಹೋವನು ಅಪ್ಪಣೆ ಕೊಡದೆ ಇದ್ದ ಬೆಂಕಿಯನ್ನು ಉಪಯೋಗಿಸಿದರು. ಆದ್ದರಿಂದ ನಾದಾಬ ಮತ್ತು ಅಬೀಹೂ ಅಲ್ಲಿ ಸತ್ತರು. ಅವರಿಗೆ ಗಂಡುಮಕ್ಕಳಿಲ್ಲದ್ದರಿಂದ ಎಲ್ಲಾಜಾರನು ಮತ್ತು ಈತಾಮಾರನು ಅವರ ತಂದೆಯಾದ ಆರೋನನ ಕೈಕೆಳಗೆ ಯೆಹೋವನ ಸೇವೆ ಮಾಡಿದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ4 ಆದರೆ ನಾದಾಬ್ ಮತ್ತು ಅಬೀಹೂ ಎಂಬ ಇಬ್ಬರು ಸೀನಾಯಿ ಮರುಭೂಮಿಯಲ್ಲಿ ಆಜ್ಞಾಪಿಸದೇ ಇದ್ದ ಬೇರೆ ಬೆಂಕಿಯನ್ನು ಅರ್ಪಿಸಿದಾಗ, ಯೆಹೋವ ದೇವರ ಮುಂದೆ ಸತ್ತರು. ಅವರಿಗೆ ಮಕ್ಕಳು ಇರಲಿಲ್ಲ. ಹೀಗೆ ಎಲಿಯಾಜರನು, ಈತಾಮಾರನು ತಮ್ಮ ತಂದೆ ಆರೋನನ ಎದುರಿನಲ್ಲಿ ಯಾಜಕ ಉದ್ಯೋಗವನ್ನು ಮಾಡಿದರು. ಅಧ್ಯಾಯವನ್ನು ನೋಡಿ |