Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅರಣ್ಯಕಾಂಡ 3:46 - ಕನ್ನಡ ಸತ್ಯವೇದವು J.V. (BSI)

46 ಲೇವಿಯರ ಸಂಖ್ಯೆಗಿಂತ ಹೆಚ್ಚಾಗಿ 273 ಮಂದಿ ಚೊಚ್ಚಲರು ಇಸ್ರಾಯೇಲ್ಯರಲ್ಲಿ ಇರುವದರಿಂದ ಅವರನ್ನು ಬಿಡಿಸುವದಕ್ಕೋಸ್ಕರ ತಲೆ ಒಂದಕ್ಕೆ ಐದೈದು ರೂಪಾಯಿಯ ಮೇರೆಗೆ ಈಡು ತೆಗೆದುಕೊಳ್ಳಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

46 “ಲೇವಿಯರ ಸಂಖ್ಯೆಗಿಂತ ಹೆಚ್ಚಾಗಿ 273 ಮಂದಿ ಚೊಚ್ಚಲರು ಹೆಚ್ಚಾಗಿ ಇಸ್ರಾಯೇಲರಲ್ಲಿ ಇರುವುದರಿಂದ ಅವರನ್ನು ಬಿಡಿಸುವುದಕ್ಕಾಗಿ ಒಬ್ಬೊಬ್ಬರಿಗೆ ಐದೈದು ಶೆಕೆಲ್ ಮೇರೆಗೆ ಈಡು ತೆಗೆದುಕೊಳ್ಳಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

46 ಲೇವಿಯರ ಸಂಖ್ಯೆಗಿಂತ 273 ಮಂದಿ ಜೇಷ್ಠರು ಇಸ್ರಯೇಲರಲ್ಲಿ ಹೆಚ್ಚಾಗಿದ್ದಾರೆ. ಆದುದರಿಂದ ಅವರನ್ನು ವಿಮೋಚಿಸುವುದಕ್ಕಾಗಿ ತಲೆ ಒಂದಕ್ಕೆ ಐದು ಬೆಳ್ಳಿ ನಾಣ್ಯಗಳಂತೆ ಈಡು ತೆಗೆದುಕೊ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

46 ಲೇವಿಯರ ಸಂಖ್ಯೆ 22,000. ಆದರೆ ಬೇರೆ ಕುಟುಂಬಗಳ ಚೊಚ್ಚಲು ಪುತ್ರರ ಸಂಖ್ಯೆ 22,273. ಹೀಗೆ ಲೇವಿಯರಿಗಿಂತ 273 ಮಂದಿ ಹೆಚ್ಚು ಚೊಚ್ಚಲು ಪುತ್ರರಿರುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

46 ಇಸ್ರಾಯೇಲರ ಜೇಷ್ಠರಾದವರಲ್ಲಿ ಲೇವಿಯರಿಗಿಂತ ಹೆಚ್ಚಾಗಿರುವ 273 ಮಂದಿಯ ವಿಮೋಚನೆಯ ಕ್ರಯವಾಗಿ

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅರಣ್ಯಕಾಂಡ 3:46
3 ತಿಳಿವುಗಳ ಹೋಲಿಕೆ  

ಕತ್ತೆಯ ಚೊಚ್ಚಲುಮರಿಗೆ ಬದಲಾಗಿ ಕುರಿಮರಿಯನ್ನು ಕೊಟ್ಟು ಆ ಕತ್ತೇಮರಿಯನ್ನು ಬಿಡಿಸಿಕೊಳ್ಳಬಹುದು; ಹಾಗೆ ಬಿಡಿಸಲೊಲ್ಲದೆ ಹೋದರೆ ಅದರ ಕುತ್ತಿಗೆ ಮುರಿದು ಕೊಲ್ಲಬೇಕು. ಮನುಷ್ಯರ ಚೊಚ್ಚಲುಗಂಡನ್ನಾದರೋ ಬದಲುಕೊಟ್ಟು ಬಿಡಿಸಿಕೊಳ್ಳಲೇಬೇಕು.


ಫರೋಹನು ಹಟಹಿಡಿದು ನಮ್ಮನ್ನು ಹೋಗಗೊಡಿಸದೆ ಇದ್ದಾಗ ಯೆಹೋವನು ಐಗುಪ್ತ ದೇಶದಲ್ಲಿದ್ದ ಮನುಷ್ಯರ ಚೊಚ್ಚಲು ಮಕ್ಕಳನ್ನೂ ಪಶುಗಳ ಚೊಚ್ಚಲುಮರಿಗಳನ್ನೂ ಅಂತೂ ಆ ದೇಶದ ಚೊಚ್ಚಲಾಗಿದ್ದದ್ದನ್ನೆಲ್ಲಾ ಸಂಹಾರ ಮಾಡಿದನು. ಆದಕಾರಣ ಗಂಡಾದ ಪ್ರಥಮ ಗರ್ಭವನ್ನೆಲ್ಲಾ ನಾವು ಯೆಹೋವನಿಗೆ ಸಮರ್ಪಿಸುವದುಂಟು; ಮನುಷ್ಯರಿಂದಾದ ಪ್ರಥಮಗರ್ಭವನ್ನಾದರೋ ಬದಲು ಕೊಟ್ಟು ಬಿಡಿಸುತ್ತೇವೆ ಎಂದು ಹೇಳಬೇಕು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು