Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅರಣ್ಯಕಾಂಡ 30:13 - ಕನ್ನಡ ಸತ್ಯವೇದವು J.V. (BSI)

13 ಹೆಂಡತಿ ಮಾಡಿದ ಹರಕೆಯನ್ನೂ ಉಪವಾಸವಾಗಿರುವೆನೆಂದು ಅವಳು ಮಾಡಿದ ಪ್ರಮಾಣವನ್ನೂ ಸ್ಥಾಪಿಸುವದಕ್ಕಾಗಲಿ ರದ್ದು ಮಾಡುವದಕ್ಕಾಗಲಿ ಗಂಡನಿಗೆ ಅಧಿಕಾರವಿರುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

13 ಹೆಂಡತಿ ಮಾಡಿದ ಹರಕೆಯನ್ನೂ, ಉಪವಾಸವಾಗಿರುವೆನೆಂದು ಅವಳು ಮಾಡಿದ ಪ್ರಮಾಣವನ್ನೂ ಸ್ಥಾಪಿಸುವುದಕ್ಕಾಗಲಿ ರದ್ದುಮಾಡುವುದಕ್ಕಾಗಲಿ ಗಂಡನಿಗೆ ಅಧಿಕಾರವಿರುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

13 ಹೆಂಡತಿ ಮಾಡಿದ ಹರಕೆಯನ್ನು ಹಾಗು ಉಪವಾಸವಿರುವೆನೆಂದು ಅವಳು ಮಾಡಿದ ಪ್ರಮಾಣವನ್ನು ದೃಢೀಕರಿಸುವುದಕ್ಕಾಗಲಿ, ರದ್ದುಪಡಿಸುವುದಕ್ಕಾಗಲಿ ಗಂಡನಿಗೆ ಹಕ್ಕಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

13 ಹೆಂಡತಿ ಮಾಡಿದ ಹರಕೆಯನ್ನೂ ಆಣೆಯನ್ನೂ ಸ್ಥಿರಪಡಿಸುವುದಕ್ಕಾಗಲಿ ರದ್ದುಪಡಿಸುವುದಕ್ಕಾಗಲಿ ಗಂಡನಿಗೆ ಅಧಿಕಾರವಿರುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

13 ಸಮಸ್ತ ಪ್ರಮಾಣವನ್ನೂ ಪ್ರಾಣವನ್ನು ಕುಂದಿಸುವ ಸಮಸ್ತ ಹರಕೆಗಳನ್ನೂ, ಅವಳ ಗಂಡನು ಅದನ್ನು ಸ್ಥಾಪಿಸಬಹುದು ಅಥವಾ ಅದನ್ನು ರದ್ದುಗೊಳಿಸಬಹುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅರಣ್ಯಕಾಂಡ 30:13
13 ತಿಳಿವುಗಳ ಹೋಲಿಕೆ  

ಆದರೂ ಒಂದು ಸಂಗತಿಯನ್ನು ನೀವು ತಿಳಿಯಬೇಕೆಂದು ನನ್ನ ಇಷ್ಟ; ಅದೇನಂದರೆ ಪ್ರತಿ ಪುರುಷನಿಗೂ ಕ್ರಿಸ್ತನು ತಲೆ, ಸ್ತ್ರೀಗೆ ಪುರುಷನು ತಲೆ, ಕ್ರಿಸ್ತನಿಗೆ ದೇವರು ತಲೆ ಆಗಿದ್ದಾನೆ.


ಇದಲ್ಲದೆ ಪುರುಷನು ಸ್ತ್ರೀನಿವಿುತ್ತವಾಗಿ ನಿರ್ಮಾಣವಾಗಲಿಲ್ಲ; ಸ್ತ್ರೀಯು ಪುರುಷನ ನಿವಿುತ್ತವಾಗಿ ನಿರ್ಮಾಣವಾದಳು.


ಮನುಷ್ಯನು ತನ್ನ ಆತ್ಮವನ್ನು ಕುಂದಿಸಿಕೊಳ್ಳುವದಕ್ಕಾಗಿ ನಾನು ನೇವಿುಸಿದ ಉಪವಾಸದಿನವು ಇಂಥದೋ? ಒಬ್ಬನು ಜೊಂಡಿನಂತೆ ತಲೆಯನ್ನು ಬೊಗ್ಗಿಸಿಕೊಂಡು ಗೋಣೀತಟ್ಟನ್ನೂ ಬೂದಿಯನ್ನೂ ಆಸನಮಾಡಿಕೊಳ್ಳುವದು ಯೆಹೋವನಿಗೆ ಸಮರ್ಪಕವಾದ ಉಪವಾಸ ಎನ್ನುತ್ತೀರೋ?


ನಾನಾದರೋ ಅವರ ಅಸ್ವಸ್ಥಕಾಲದಲ್ಲಿ ಗೋಣಿತಟ್ಟನ್ನೇ ಕಟ್ಟಿಕೊಂಡಿದ್ದೆನು; ಉಪವಾಸದಿಂದ ನನ್ನ ಆತ್ಮವನ್ನು ನೋಯಿಸಿದೆನು. ನನ್ನ ಪ್ರಾರ್ಥನೆಯು ನನ್ನ ಎದೆಗೆ ತಿರುಗಿತು.


ಆಮೇಲೆ ಆ ಅಹವಾ ನದಿಯ ಬಳಿಯಲ್ಲಿ - ನಾವು ಉಪವಾಸದಿಂದಿದ್ದು ನಮ್ಮ ದೇವರ ಮುಂದೆ ನಮ್ಮನ್ನು ತಗ್ಗಿಸಿಕೊಂಡು ನಮಗೂ ನಮ್ಮ ಮನೆಯವರಿಗೂ ನಮ್ಮ ಎಲ್ಲಾ ಆಸ್ತಿಗೂ ಪ್ರಯಾಣದಲ್ಲಿ ಶುಭವನ್ನು ಕೇಳಿಕೊಳ್ಳಬೇಕೆಂದು ಪ್ರಕಟಿಸಿದೆನು.


ಉಪವಾಸಾಚರಣೆಯ ಏಳನೆಯ ತಿಂಗಳಿನ ಹತ್ತನೆಯ ದಿನದಲ್ಲಿ ನೀವು ಯಾವ ಕೆಲಸವನ್ನೂ ಮಾಡದೆ ದೇವಾರಾಧನೆಗಾಗಿ ಸಭೆಕೂಡಬೇಕು.


ಆ ದಿನವು ಸಂಪೂರ್ಣ ವಿರಾಮವುಳ್ಳ ವಿಶ್ರಾಂತಿ ದಿನವಾಗಿರಬೇಕು. ಅದರಲ್ಲಿ ಉಪವಾಸದಿಂದಿರಬೇಕು. ಆ ತಿಂಗಳಿನ ಒಂಭತ್ತನೆಯ ದಿನದ ಸಾಯಂಕಾಲದಲ್ಲಿ ಪ್ರಾರಂಭಿಸಿ ಮರುದಿನದ ಸಾಯಂಕಾಲದವರೆಗೆ ನೀವು ಆ ವಿರಾಮದಿನವನ್ನು ಆಚರಿಸಬೇಕು.


ಅದೇ ಏಳನೆಯ ತಿಂಗಳಿನ ಹತ್ತನೆಯ ದಿನವು ಸರ್ವದೋಷಪರಿಹಾರಕ ದಿನ. ಅದರಲ್ಲಿ ದೇವಾರಾಧನೆಗಾಗಿ ಸಭೆಕೂಡಬೇಕು; ನೀವು ಪೂರ್ಣವಾಗಿ ಉಪವಾಸಮಾಡಬೇಕು, ಮತ್ತು ಯೆಹೋವನ ಸನ್ನಿಧಿಯಲ್ಲಿ ಹೋಮವನ್ನು ಮಾಡಬೇಕು.


ಇದು ನಿಮಗೆ ಶಾಶ್ವತವಾದ ನಿಯಮ; ಯಾವದಂದರೆ ಸ್ವದೇಶಸ್ಥರಾದ ನೀವೂ ನಿಮ್ಮಲ್ಲಿ ಇಳುಕೊಂಡಿರುವ ಅನ್ಯದೇಶದವರೂ ಎಲ್ಲರೂ ಏಳನೆಯ ತಿಂಗಳಿನ ಹತ್ತನೆಯ ದಿನದಲ್ಲಿ ಸಕಲ ವಿಧವಾದ ಕೆಲಸಗಳನ್ನೂ ಬಿಟ್ಟು [ಉಪವಾಸಮಾಡಿ] ಪ್ರಾಣವನ್ನು ಕುಂದಿಸಿಕೊಳ್ಳಬೇಕು.


ಪ್ರಾರ್ಥನೆಗೆ ಮನಸ್ಸು ಕೊಡುವದಕ್ಕಾಗಿ ನೀವು ಪರಸ್ಪರ ಸಮ್ಮತಿಯಿಂದ ಸ್ವಲ್ಪಕಾಲ ದಂಪತಿ ಧರ್ಮವನ್ನು ಬಿಟ್ಟು ಅಗಲಿರಬಹುದೇ ಹೊರತು ಅನ್ಯಥಾ ಹಾಗೆ ಮಾಡಬಾರದು; ಆಮೇಲೆ ಸೈತಾನನು ನಿಮಗೆ ದಮೆಯಿಲ್ಲದಿರುವದನ್ನು ನೋಡಿ ನಿಮಗೆ ದುಷ್ಪ್ರೇರಣೆಮಾಡದಂತೆ ತಿರಿಗಿ ಕೂಡಿಕೊಳ್ಳಿರಿ.


ಆದರೆ ಗಂಡನು ಅವುಗಳನ್ನು ತಿಳಿದಾಗಲೇ ಬೇಡವೆಂದರೆ ಅವು ರದ್ದಾಗುವವು. ಗಂಡನು ರದ್ದುಮಾಡಿದ್ದರಿಂದ ಅಂಥವಳು ಯೆಹೋವನಿಂದ ದೋಷಿಯೆಂದು ಎಣಿಸಲ್ಪಡುವದಿಲ್ಲ.


ಆದರೆ ಅವಳ ಗಂಡನು ಯಾವ ಅಡ್ಡಿಯನ್ನೂ ಮಾಡದೆ ದಿನದಿನಕ್ಕೆ ಸುಮ್ಮನಿದ್ದರೆ ಅವನು ಅವಳ ಹರಕೆಗಳನ್ನೂ ಪ್ರತಿಜ್ಞೆಗಳನ್ನೂ ಸ್ಥಾಪಿಸಿದ ಹಾಗಾಗುವದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು