Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅರಣ್ಯಕಾಂಡ 30:3 - ಕನ್ನಡ ಸತ್ಯವೇದವು J.V. (BSI)

3 ಸ್ತ್ರೀಯು ಕನ್ಯಾವಸ್ಥೆಯಲ್ಲಿ ತಂದೆಯ ಮನೆಯಲ್ಲಿದ್ದು ಯೆಹೋವನಿಗೆ ಹರಕೆಯನ್ನು ಮಾಡಿದಾಗ ಇಲ್ಲವೆ ಯಾವದಾದರೂ ಒಂದನ್ನು ಮುಟ್ಟದೆ ಇರುವೆನೆಂದು ಪ್ರತಿಜ್ಞೆಯನ್ನು ಮಾಡಿಕೊಂಡಾಗ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 “ಸ್ತ್ರೀಯು ಕನ್ಯಾವಸ್ಥೆಯಲ್ಲಿ ತಂದೆಯ ಮನೆಯಲ್ಲಿದ್ದು ಯೆಹೋವನಿಗೆ ಹರಕೆಯನ್ನು ಮಾಡಿದಾಗ ಇಲ್ಲವೆ ಯಾವುದಾದರೂ ಒಂದನ್ನು ಮುಟ್ಟದೆ ಇರುವೆನೆಂದು ಪ್ರತಿಜ್ಞೆಯನ್ನು ಮಾಡಿಕೊಂಡಾಗ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

3 “ಕನ್ಯೆಯೊಬ್ಬಳು ತನ್ನ ತಂದೆಯ ಮನೆಯಲ್ಲಿದ್ದು ಸರ್ವೇಶ್ವರನಿಗೆ ಹರಕೆಯನ್ನು ಮಾಡಿದಾಗ ಇಲ್ಲವೆ ಯಾವುದಾದರೊಂದನ್ನು ಮುಟ್ಟುವುದಿಲ್ಲವೆಂದು ಪ್ರತಿಜ್ಞೆಮಾಡಿದಾಗ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

3 “ಇನ್ನೂ ತನ್ನ ತಂದೆಯ ಮನೆಯಲ್ಲಿರುವ ಯುವತಿಯು ಯೆಹೋವನಿಗೆ ಇಂಥದ್ದನ್ನು ಕೊಡುತ್ತೇನೆಂದು ಹರಕೆ ಮಾಡಿಕೊಂಡರೆ ಅಥವಾ ಇಂಥದ್ದನ್ನು ಮಾಡುವುದಿಲ್ಲ ಎಂದು ಆಣೆಯಿಟ್ಟುಕೊಂಡರೆ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

3 “ಸ್ತ್ರೀಯು ಯೆಹೋವ ದೇವರಿಗೆ ಹರಕೆಮಾಡಿ, ತನ್ನ ಕನ್ಯಾವಸ್ಥೆಯಲ್ಲಿ ತಂದೆಯ ಮನೆಯಲ್ಲಿ ದೇವರಿಗೆ ಹರಕೆಯನ್ನು ಮಾಡಿದಾಗ, ಇಲ್ಲವೆ ಯಾವುದಾದರೊಂದನ್ನು ಮುಟ್ಟುವುದಿಲ್ಲವೆಂದು ಪ್ರತಿಜ್ಞೆ ಮಾಡಿದಾಗ,

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅರಣ್ಯಕಾಂಡ 30:3
10 ತಿಳಿವುಗಳ ಹೋಲಿಕೆ  

ಯಾವನಾದರೂ ಯೆಹೋವನಿಗೆ ಹರಕೆಮಾಡಿದರೆ ಇಲ್ಲವೆ ತಾನು ಯಾವದಾದರೂ ಒಂದನ್ನು ಮುಟ್ಟದೆ ಇರುವೆನೆಂದು ಆಣೆಯಿಟ್ಟುಕೊಂಡರೆ ಅವನು ತನ್ನ ಮಾತನ್ನು ಮೀರದೆ ಹೇಳಿದಂತೆಯೇ ನೆರವೇರಿಸಬೇಕು.


ಅವಳ ತಂದೆಯು ಆ ಸಂಗತಿಯನ್ನು ತಿಳಿದು ಸುಮ್ಮನಿದ್ದರೆ ಅವಳು ಆ ಹರಕೆಯನ್ನು ನೆರವೇರಿಸಲೇಬೇಕು; ಯಾವದನ್ನು ಮುಟ್ಟದೆ ಇರುವೆನೆಂದು ಹೇಳಿದಳೋ ಅದನ್ನು ಮುಟ್ಟಲೇಬಾರದು.


ನೀನು ಇಸ್ರಾಯೇಲ್ಯರಿಗೆ ಹೀಗೆ ಆಜ್ಞಾಪಿಸು - ಯಾವನಾದರೂ ಮನುಷ್ಯರ ಪ್ರಾಣಗಳನ್ನು ಯೆಹೋವನಿಗೆ ಹರಕೆಮಾಡಿ ಪ್ರತಿಷ್ಠಿಸಿದರೆ [ಅವುಗಳನ್ನು ಬಿಡಿಸುವದಕ್ಕೆ] ದೇವರ ಸೇವೆಗೆ ನೇಮಕವಾದ ರೂಪಾಯಿಯ ಮೇರೆಗೆ ನೀವು ಅವನಿಂದ ಕೊಡಿಸಬೇಕಾದ ಈಡು ಹೇಗಂದರೆ -


ನೀನು ಇಸ್ರಾಯೇಲ್ಯರಿಗೆ ಹೀಗೆ ಆಜ್ಞಾಪಿಸು - ಯಾವ ಪುರುಷನಾಗಲಿ ಸ್ತ್ರೀಯಾಗಲಿ ನಾಜೀರರ ಹರಕೆಯನ್ನು ಅಂದರೆ ಯೆಹೋವನಿಗೆ ತನ್ನನ್ನು ಪ್ರತಿಷ್ಠಿಸಿಕೊಳ್ಳುವ


ಸಮೂಹಪ್ರಧಾನರು ಇಸ್ರಾಯೇಲ್‍ದೇವರಾದ ಯೆಹೋವನ ಹೆಸರಿನಲ್ಲಿ ಅವರಿಗೆ ಪ್ರಮಾಣಮಾಡಿದ್ದರಿಂದ ಇಸ್ರಾಯೇಲ್ಯರು ಅವರನ್ನು ಹೊಡೆಯಲಿಲ್ಲ. ಆದರೆ ಸಮೂಹದವರೆಲ್ಲಾ ಪ್ರಧಾನರಿಗೆ ವಿರೋಧವಾಗಿ ಗುಣುಗುಟ್ಟಿದರು.


ಆಕೆಯನ್ನು ಕಾಣುತ್ತಲೆ ಅವನು ತನ್ನ ಬಟ್ಟೆಯನ್ನು ಹರಿದುಕೊಂಡು - ಅಯ್ಯೋ ನನ್ನ ಮಗಳೇ, ಮಗಳೇ, ನೀನು ನನ್ನನ್ನು ಕುಗ್ಗಿಸೇ ಬಿಟ್ಟಿಯಲ್ಲಾ; ನನಗೆ ಮಹಾಸಂಕಟವನ್ನುಂಟುಮಾಡಿದಿ. ನಾನು ಬಾಯ್ದೆರೆದು ಯೆಹೋವನಿಗೆ ಹರಕೆಮಾಡಿದ್ದೇನೆ; ಅದಕ್ಕೆ ಹಿಂದೆಗೆಯಲಾರೆನು ಎಂದು ಕೂಗಿಕೊಳ್ಳಲು


ಸೇನಾಧೀಶ್ವರನಾದ ಯೆಹೋವನೇ, ನಿನ್ನ ದಾಸಿಯ ದುಃಖವನ್ನು ಪರಾಂಬರಿಸು; ನನ್ನನ್ನು ತಿರಸ್ಕರಿಸದೆ ಕನಿಕರವಿಟ್ಟು ನನಗೊಬ್ಬ ಮಗನನ್ನು ಕೊಡಬೇಕು; ಅವನು ಜೀವದಿಂದಿರುವ ತನಕ ನಿನ್ನವನಾಗಿಯೇ ಇರುವ ಹಾಗೆ ನಿನಗೆ ಪ್ರತಿಷ್ಠಿಸಿಕೊಡುವೆನು; ಅವನ ತಲೆಯ ಮೇಲೆ ಕ್ಷೌರ ಕತ್ತಿಯನ್ನು ಬರಗೊಡುವದಿಲ್ಲ ಎಂದು ಪ್ರಾರ್ಥಿಸಿ ಹರಕೆಮಾಡಿದಳು.


ಇದಲ್ಲದೆ ನೆಬೂಕದ್ನೆಚ್ಚರನಿಗೆ ಒಳಗಾಗುತ್ತೇನೆಂದು ದೇವರ ಮೇಲೆ ಆಣೆಯಿಟ್ಟು ಪ್ರಮಾಣಮಾಡಿದ್ದರೂ ಅವನಿಗೆ ವಿರುದ್ಧವಾಗಿ ತಿರುಗಿಬಿದ್ದು ಇಸ್ರಾಯೇಲ್‍ದೇವರಾದ ಯೆಹೋವನ ಕಡೆಗೆ ತಿರುಗಿಕೊಳ್ಳಲೊಲ್ಲದೆ ಹಟಹಿಡಿದು ಮನಸ್ಸನ್ನು ಕಠಿನಮಾಡಿಕೊಂಡನು.


ಸ್ತುತಿಯಜ್ಞವನ್ನೇ ದೇವರಿಗೆ ಸಮರ್ಪಿಸಿರಿ; ಮಾಡಿದ ಹರಕೆಗಳನ್ನು ಪರಾತ್ಪರನಿಗೆ ಸಲ್ಲಿಸಿರಿ.


ದೇವಜನರ ಎಲ್ಲಾ ಸಭೆಗಳ ಮರ್ಯಾದೆಯ ಪ್ರಕಾರ ಸ್ತ್ರೀಯರು ಸಭೆಯ ಕೂಟಗಳಲ್ಲಿ ಸುಮ್ಮಗಿರಬೇಕು; ಮಾತಾಡುವದಕ್ಕೆ ಅವರಿಗೆ ಅಪ್ಪಣೆಯಿಲ್ಲ; ಅವರು ಅಧೀನದಲ್ಲಿರಬೇಕು; ಧರ್ಮಶಾಸ್ತ್ರದಲ್ಲಿಯೂ ಹೀಗೆ ಹೇಳಿಯದೆಯಲ್ಲಾ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು