Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅರಣ್ಯಕಾಂಡ 31:16 - ಕನ್ನಡ ಸತ್ಯವೇದವು J.V. (BSI)

16 ಪೆಗೋರದ ಬಾಳನ ಸಂಗತಿಯಲ್ಲಿ ಬಿಳಾಮನ ಆಲೋಚನೆಯನ್ನು ಅನುಸರಿಸಿ ಇಸ್ರಾಯೇಲ್ಯರನ್ನು ಯೆಹೋವನಿಗೆ ದ್ರೋಹಿಗಳನ್ನಾಗಿ ಮಾಡಿ ಸಮೂಹದವರಲ್ಲಿ ಘೋರವ್ಯಾಧಿಯುಂಟಾಗುವಂತೆ ಮಾಡಿದವರು ಇವರೇ ಅಲ್ಲವೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

16 ಪೆಗೋರದ ಬಾಳನ ಸಂಗತಿಯಲ್ಲಿ ಬಿಳಾಮನ ಆಲೋಚನೆಯನ್ನು ಅನುಸರಿಸಿ ಇಸ್ರಾಯೇಲರನ್ನು ಯೆಹೋವನಿಗೆ ದ್ರೋಹಿಗಳನ್ನಾಗಿ ಮಾಡಿ ಸಮೂಹದವರಲ್ಲಿ ಘೋರವ್ಯಾಧಿ ಉಂಟಾಗುವಂತೆ ಮಾಡಿದವರು ಇವರೇ ಅಲ್ಲವೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

16 ಪೆಗೋರದ ಬಾಳನ ವಿಷಯದಲ್ಲಿ ಬಿಳಾಮನ ದುರಾಲೋಚನೆಯನ್ನು ಅನುಸರಿಸಿ, ಇಸ್ರಯೇಲರನ್ನು ಸರ್ವೇಶ್ವರನಿಗೆ ದ್ರೋಹಿಗಳನ್ನಾಗಿಸಿ, ಸಮಾಜದವರಲ್ಲಿ ಘೋರ ವ್ಯಾಧಿಯುಂಟಾಗುವಂತೆ ಮಾಡಿದವರು ಅವರೇ ಅಲ್ಲವೆ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

16 ಬಿಳಾಮನ ಸಲಹೆಯನ್ನು ಅನುಸರಿಸಿ, ಯೆಹೋವನಿಗೆ ವಿರೋಧವಾಗಿ ಇಸ್ರೇಲರು ಪಾಪಮಾಡುವಂತೆ ಮಾಡಿ ಪೆಗೋರದ ಬಾಳನ ಸಂಗತಿಗೆ ಕಾರಣರಾದವರು ಇವರೇ ಅಲ್ಲವೇ? ಅದರ ಫಲವಾಗಿ ಭಯಂಕರವಾದ ಕಾಯಿಲೆಯು ಜನರಿಗೆ ಬಂದಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

16 ಇವರೇ ಬಿಳಾಮನ ಮಾತಿನಿಂದ ಪೆಯೋರನ ಕಾರ್ಯದಲ್ಲಿ ಯೆಹೋವ ದೇವರಿಗೆ ವಿರೋಧವಾಗಿ ದ್ರೋಹ ಮಾಡುವುದಕ್ಕೆ ಇಸ್ರಾಯೇಲರಿಗೆ ಕಾರಣವಾಗಿದ್ದರು. ಯೆಹೋವ ದೇವರ ಸಭೆಯೊಳಗೆ ಇವರಿಂದಲೇ ವ್ಯಾಧಿಯಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅರಣ್ಯಕಾಂಡ 31:16
11 ತಿಳಿವುಗಳ ಹೋಲಿಕೆ  

ಇವರು ನೀಟಾದ ಮಾರ್ಗವನ್ನು ಬಿಟ್ಟು ಬೆಯೋರನ ಮಗನಾದ ಬಿಳಾಮನ ಮಾರ್ಗವನ್ನು ಹಿಡಿದು ತಪ್ಪಿಹೋಗಿದ್ದಾರೆ. ಈ ಬಿಳಾಮನು ಅಧರ್ಮದಿಂದ ದೊರಕುವ ದ್ರವ್ಯವನ್ನು ಪ್ರೀತಿಸಿದನು;


ಆದರೂ ಕೆಲವು ವಿಷಯಗಳಲ್ಲಿ ನಿನ್ನ ಮೇಲೆ ತಪ್ಪುಹೊರಿಸಬೇಕಾಗುತ್ತದೆ; ವಿಗ್ರಹಕ್ಕೆ ನೈವೇದ್ಯಮಾಡಿದ ಪದಾರ್ಥಗಳನ್ನು ತಿನ್ನುವದರಲ್ಲಿಯೂ ಜಾರತ್ವ ಮಾಡುವದರಲ್ಲಿಯೂ ಇಸ್ರಾಯೇಲ್ಯರು ಮುಗ್ಗರಿಸಿ ಬೀಳಬೇಕೆಂದು ಬಿಳಾಮನು ಬಾಲಾಕನಿಗೆ ಹೇಳಿದ ದುರ್ಬೋಧನೆಯನ್ನು ಅವಲಂಬಿಸಿರುವವರು ನಿನ್ನಲ್ಲಿದ್ದಾರೆ.


ನಾವು ಪೆಗೋರದ ಸಂಗತಿಯಲ್ಲಿ ಅಪರಾಧಿಗಳಾದದ್ದು ಸಾಕಾಗಲಿಲ್ಲವೋ? ಅದರ ದೆಸೆಯಿಂದ ಯೆಹೋವನ ಸಭೆಗೆ ವ್ಯಾಧಿ ಬಂದರೂ ಅದು ಇನ್ನೂ ಶುದ್ಧವಾಗಲಿಲ್ಲ.


ಪೆಗೋರದ ಬಾಳನ ಸಂಗತಿಯಲ್ಲಿ ಯೆಹೋವನು ಮಾಡಿದ ಕಾರ್ಯವನ್ನು ನೀವು ನೋಡೇ ಇದ್ದೀರಷ್ಟೆ; ಪೆಗೋರದ ಬಾಳನನ್ನು ಅನುಸರಿಸಿದವರೆಲ್ಲರನ್ನೂ ನಿಮ್ಮ ದೇವರಾದ ಯೆಹೋವನು ನಿಮ್ಮಲ್ಲಿರದಂತೆ ನಾಶಮಾಡಿದನಲ್ಲಾ;


ಆಗಲಿ; ನಾನು ನನ್ನ ಸ್ವಜನರ ಬಳಿಗೆ ಹೋಗುತ್ತೇನೆ. ಆದರೆ ಕಡೆಗೆ ಆ ಜನರು ನಿನ್ನ ಜನರಿಗೆ ಏನು ಮಾಡುವರೋ ಅದನ್ನು ನಿನಗೆ ತಿಳಿಸುತ್ತೇನೆ;


ಸೂಳೆಯು ಆಳವಾದ ಹಳ್ಳ, ಜಾರಸ್ತ್ರೀಯು ಇಕ್ಕಟ್ಟಾದ ಗುಂಡಿ.


ಅವರು ಪೆಗೋರದ ಸಂಗತಿಯಲ್ಲಿಯೂ ತಮ್ಮ ಅಧಿಪತಿಯ ಮಗಳಾದ ಕೊಜ್ಬೀ ಎಂಬ ಸ್ವಕುಲ ಸ್ತ್ರೀಯ ಸಂಗತಿಯಲ್ಲಿಯೂ ನಿಮ್ಮನ್ನು ಮೋಸಗೊಳಿಸಿ ಹಿಂಸಿಸಿದರಲ್ಲಾ. (ಆ ಸ್ತ್ರೀಯು ಪೆಗೋರದ ಸಂಗತಿಯಿಂದ ಘೋರ ವ್ಯಾಧಿಯುಂಟಾದಾಗ ಹತವಾದಳು.)


ಆಗ ಮರಣಕ್ಕಿಂತ ಹೆಚ್ಚು ವಿಷವೊಂದು ಕಂಡುಬಂತು, ಯಾವದಂದರೆ, ಕೆಟ್ಟ ಹೆಂಗಸೇ. ಅವಳು ಬೋನು, ಅವಳ ಹೃದಯ ಬಲೆ, ಅವಳ ಕೈ ಪಾಶ; ದೇವರು ಒಲಿದವನು ಇವಳಿಂದ ತಪ್ಪಿಸಿಕೊಳ್ಳುವನು; ಪಾಪಿಯೋ ಅವಳ ಕೈಗೆ ಸಿಕ್ಕಿಬೀಳುವನು.


ಅವರ ಗತಿಯನ್ನು ಏನು ಹೇಳಲಿ; ಇವರು ಕಾಯಿನನ ಮಾರ್ಗವನ್ನು ಹಿಡಿದವರೂ ದ್ರವ್ಯಸಂಪಾದನೆಗೋಸ್ಕರ ಬಿಳಾಮನ ಭ್ರಾಂತಿಯಲ್ಲಿ ಪೂರ್ಣವಾಗಿ ಮುಣುಗಿದವರೂ ಕೋರಹನಂತೆ ಎದುರುಮಾತುಗಳನ್ನಾಡಿ ನಾಶವಾಗಿಹೋಗತಕ್ಕವರೂ ಆಗಿದ್ದಾರೆ.


ಹತವಾದವರಲ್ಲಿ ಎವೀ, ರೆಕೆಮ್, ಚೂರ್, ಹೂರ್, ರೆಬಾ ಎಂಬ ವಿುದ್ಯಾನ್ಯರ ಐದು ಮಂದಿ ರಾಜರು ಇದ್ದರು. ಅದಲ್ಲದೆ ಬೆಯೋರನ ಮಗನಾದ ಬಿಳಾಮನನ್ನು ಕಡಿದುಬಿಟ್ಟರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು