Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅರಣ್ಯಕಾಂಡ 31:23 - ಕನ್ನಡ ಸತ್ಯವೇದವು J.V. (BSI)

23 ತವರ, ಸೀಸ ಮೊದಲಾದವುಗಳನ್ನು ಬೆಂಕಿದಾಟಿಸಿ ಶುದ್ಧಮಾಡಬೇಕು; ಅವುಗಳನ್ನು ಹೊಲೆ ಹೋಗಲಾಡಿಸುವ ನೀರಿನಿಂದಲೂ ಶುದ್ಧಮಾಡಬೇಕು. ಬೆಂಕಿಯನ್ನು ತಡೆಯಲಾರದ ವಸ್ತುಗಳನ್ನು ನೀರಿನಿಂದ ತೊಳೆದು ಶುದ್ಧಮಾಡಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

23 ಅವುಗಳನ್ನು ಹೊಲೆ ಹೋಗಲಾಡಿಸುವ ನೀರಿನಿಂದಲೂ ಶುದ್ಧಮಾಡಬೇಕು. ಬೆಂಕಿಯಿಂದ ಸುಡಲಾರದ ವಸ್ತುಗಳನ್ನು ನೀರಿನಿಂದ ತೊಳೆದು ಶುದ್ಧಮಾಡಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

23 ಅವುಗಳನ್ನು, ಹೊಲೆ ಹೋಗಲಾಡಿಸುವ ನೀರಿನಿಂದಲೂ ಶುದ್ಧಮಾಡಬೇಕು. ಬೆಂಕಿಯನ್ನು ತಡೆಯಲಾರದ ವಸ್ತುಗಳನ್ನು ನೀರಿನಿಂದ ತೊಳೆದು ಶುದ್ಧಮಾಡಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

23 ನೀವು ಬೆಂಕಿಯಿಂದ ದಾಟಿಸಬೇಕು. ಆಗ ಅವು ಶುದ್ಧವಾಗುವುವು. ಶುದ್ಧೀಕರಣದ ನೀರಿನಲ್ಲಿ ಅದ್ದಿ ಶುದ್ಧಮಾಡಬೇಕು. ಆಗ ಅವು ಶುದ್ಧವಾಗುವುವು. ಆದರೆ ಬೆಂಕಿ ತಾಳದ ಸಮಸ್ತವನ್ನು ನೀವು ನೀರಿನಿಂದ ತೊಳೆಯಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅರಣ್ಯಕಾಂಡ 31:23
20 ತಿಳಿವುಗಳ ಹೋಲಿಕೆ  

ಮತ್ತು ಶುದ್ಧನಾದವನೊಬ್ಬನು ಆ ಆಕಳಿನ ಬೂದಿಯನ್ನು ಕೂಡಿಸಿ ಪಾಳೆಯದ ಹೊರಗೆ ಶುದ್ಧವಾದ ಸ್ಥಳದಲ್ಲಿ ಇಡಬೇಕು. ಅದನ್ನು ಇಸ್ರಾಯೇಲ್ಯರ ಸಮೂಹದವರ ಉಪಯೋಗಕ್ಕಾಗಿ ನೀವು ಜೋಪಾನ ಮಾಡಬೇಕು. ಅದು ಹೊಲೆಗಳೆವ ನೀರನ್ನು ಸಿದ್ಧಪಡಿಸುವದಕ್ಕಾಗಿ ಅಲ್ಲೇ ಇಟ್ಟಿರಬೇಕು; ಅದು ದೋಷಪರಿಹಾರಕವಾದದ್ದು.


ಅಂಥ ಅಶುದ್ಧನಾದವನನ್ನು ಪವಿತ್ರಪಡಿಸಬೇಕಾದರೆ ಆ ದೋಷಪರಿಹಾರಕವಾದ ಬೂದಿಯಲ್ಲಿ ಸ್ವಲ್ಪವನ್ನು ಪಾತ್ರೆಯಲ್ಲಿ ಇಟ್ಟು ಅದರ ಮೇಲೆ ಸೆಲೇನೀರನ್ನು ಹಾಕಬೇಕು.


ಕ್ರಿಸ್ತನು ಬರುವ ದಿನವು ಬೆಂಕಿಯೊಡನೆ ಉದಯವಾಗಿ ಆ ಕೆಲಸವನ್ನು ಸ್ಪಷ್ಟವಾಗಿ ತೋರಿಸುವದು; ಅವನವನ ಕೆಲಸವೆಂಥದೋ ಆ ಬೆಂಕಿ ಶೋಧಿಸುವದು.


ನಾನಂತೂ ನಿಮ್ಮ ಮನಸ್ಸು ತಿರುಗಿಕೊಳ್ಳಬೇಕೆಂಬದಕ್ಕೆ ನಿಮಗೆ ನೀರಿನಲ್ಲಿ ಸ್ನಾನಮಾಡಿಸುತ್ತೇನೆ. ಆದರೆ ನನ್ನ ಹಿಂದೆ ಬರುವವನು ನನಗಿಂತ ಶಕ್ತನು; ಆತನ ಕೆರಗಳನ್ನು ಹೊರಲಿಕ್ಕೂ ನಾನು ಯೋಗ್ಯನಲ್ಲ; ಆತನು ಪವಿತ್ರಾತ್ಮನಲ್ಲಿಯೂ ಬೆಂಕಿಯಲ್ಲಿಯೂ ನಿಮಗೆ ಸ್ನಾನಮಾಡಿಸುವನು.


ನೀನು ಜಲರಾಶಿಯನ್ನು ಹಾದು ಹೋಗುವಾಗ ನಾನು ನಿನ್ನ ಸಂಗಡ ಇರುವೆನು; ನದಿಗಳನ್ನು ದಾಟುವಾಗ ಅವು ನಿನ್ನನ್ನು ಮುಣುಗಿಸವು; ಉರಿಯಲ್ಲಿ ನಡೆಯುವಾಗ ನೀನು ಕಂದದಿರುವಿ, ಜ್ವಾಲೆಯು ನಿನ್ನನ್ನು ದಹಿಸದು.


ನೀನು ಐಶ್ವರ್ಯವಂತನಾಗುವಂತೆ ಬೆಂಕಿಯಲ್ಲಿ ಪುಟಾಹಾಕಿದ ಚಿನ್ನವನ್ನೂ, ಲಜ್ಜಾಸ್ಪದವಾದ ನಿನ್ನ ಬೆತ್ತಲೆತನ ಕಾಣಿಸದಂತೆ ಹೊದ್ದುಕೊಳ್ಳುವದಕ್ಕಾಗಿ ಬಿಳೀವಸ್ತ್ರಗಳನ್ನೂ, ಕಣ್ಣುಕಾಣುವಂತೆ ನಿನ್ನ ಕಣ್ಣುಗಳಿಗೆ ಹಚ್ಚುವದಕ್ಕಾಗಿ ಅಂಜನವನ್ನೂ ನನ್ನಿಂದ ಕೊಂಡುಕೊಳ್ಳಬೇಕೆಂದು ನಿನಗೆ ಬುದ್ಧಿ ಹೇಳುತ್ತೇನೆ.


ಪ್ರಿಯರೇ, ನೀವು ಪರಿಶೋಧನೆಗಾಗಿ ಪುಟಕ್ಕೆ ಹಾಕಲ್ಪಟ್ಟದ್ದಕ್ಕೆ ಆಶ್ಚರ್ಯಪಡಬೇಡಿರಿ; ವಿಪರೀತವಾದ ಸಂಗತಿ ಸಂಭವಿಸಿತೆಂದು ಯೋಚಿಸಬೇಡಿರಿ.


ಆ ನೀರಿಗೆ ಅನುರೂಪವಾದ ದೀಕ್ಷಾಸ್ನಾನವು ಯೇಸು ಕ್ರಿಸ್ತನ ಪುನರುತ್ಥಾನದ ಮೂಲಕ ಈಗ ನಮ್ಮನ್ನು ರಕ್ಷಿಸುತ್ತದೆ; ಅದು ಮೈಕೊಳೆಯನ್ನು ಹೋಗಲಾಡಿಸುವಂಥದಲ್ಲ, ಒಳ್ಳೇ ಮನಸ್ಸಾಕ್ಷಿ ಬೇಕೆಂದು ದೇವರಿಗೆ ವಿಜ್ಞಾಪಿಸಿಕೊಳ್ಳುವಂಥದೇ.


ಬಂಗಾರವು ನಾಶವಾಗುವಂಥದಾಗಿದ್ದರೂ ಅದನ್ನು ಬೆಂಕಿಯಲ್ಲಿ ಪುಟಾಹಾಕಿ ಶೋಧಿಸುವದುಂಟಷ್ಟೆ. ಬಂಗಾರಕ್ಕಿಂತ ಅಮೂಲ್ಯವಾಗಿರುವ ನಿಮ್ಮ ನಂಬಿಕೆಯು ಈ ಕಷ್ಟಗಳಿಂದ ಶೋಧಿತವಾಗಿ ಯೇಸು ಕ್ರಿಸ್ತನು ಪ್ರತ್ಯಕ್ಷನಾಗುವಾಗ ನಿಮಗೆ ಕೀರ್ತಿ ಪ್ರಭಾವ ಮಾನಗಳನ್ನು ಉಂಟುಮಾಡುವದು.


ಆತನು ಅದನ್ನು ಪ್ರತಿಷ್ಠೆಪಡಿಸುವದಕ್ಕಾಗಿ ತನ್ನನ್ನು ಒಪ್ಪಿಸಿಕೊಟ್ಟನು.


ಆ ಮೂರನೆಯ ಭಾಗದವರನ್ನು ನಾನು ಬೆಂಕಿಗೆ ಹಾಕಿ ಬೆಳ್ಳಿಯಂತೆ ಶೋಧಿಸುವೆನು, ಬಂಗಾರದ ಹಾಗೆ ಶುದ್ಧಿಮಾಡುವೆನು; ಅವರು ನನ್ನ ಹೆಸರೆತ್ತಿ ಪ್ರಾರ್ಥಿಸುವರು, ನಾನು ಆಲಿಸುವೆನು; ನಾನು - ಇವರು ನನ್ನ ಜನರು ಅಂದುಕೊಳ್ಳುವೆನು, ಅವರು - ನಮ್ಮ ದೇವರಾದ ಯೆಹೋವನೇ ಅನ್ನುವರು.


ಅವರನ್ನು ಶುದ್ಧೀಕರಿಸಬೇಕಾದ ಕ್ರಮ ಹೇಗಂದರೆ - ನೀನು ಅವರ ಮೇಲೆ ದೋಷಪರಿಹಾರಕಜಲವನ್ನು ಚಿವಿುಕಿಸಬೇಕು; ಅವರು ಸರ್ವಾಂಗಕ್ಷೌರಮಾಡಿಸಿಕೊಂಡು ತಮ್ಮ ಬಟ್ಟೆಗಳನ್ನು ಒಗೆದುಕೊಂಡು ತಮ್ಮನ್ನು ಶುದ್ಧಮಾಡಿಕೊಳ್ಳಬೇಕು.


ಯಾವ ಬಟ್ಟೆಯ ಮೇಲಾಗಲಿ ತೊಗಲಿನ ಮೇಲಾಗಲಿ ವೀರ್ಯವು ಬಿದ್ದರೆ ಅದನ್ನು ನೀರಿನಿಂದ ತೊಳೆಯಬೇಕು. ಅದು ಸಾಯಂಕಾಲದವರೆಗೆ ಅಶುದ್ಧವಾಗಿರುವದು.


ಇವುಗಳ ಹೆಣವು ಯಾವ ವಸ್ತುವಿನ ಮೇಲೆ ಬೀಳುವದೋ ಆ ವಸ್ತುವು ಅಶುದ್ಧವಾಗಿರುವದು. ಅದು ಮರದ ವಸ್ತುವಾಗಲಿ ಬಟ್ಟೆಯಾಗಲಿ ಚರ್ಮವಾಗಲಿ ಗೋಣಿಯಾಗಲಿ ಅದು ಎಂಥದಾದರೂ ಯಾವ ಕೆಲಸಕ್ಕೆ ಉಪಯೋಗವಾಗಿದ್ದರೂ ಅದನ್ನು ನೀರಿನಲ್ಲಿ ನೆನಸಬೇಕು; ಅದು ಸಾಯಂಕಾಲದವರೆಗೂ ಅಶುದ್ಧವಾಗಿರುವದು; ತರುವಾಯ ಶುದ್ಧಿಯಾಗುವದು.


ಬೆಂಕಿಯನ್ನು ತಡೆಯುವ ಚಿನ್ನ, ಬೆಳ್ಳಿ, ತಾಮ್ರ, ಕಬ್ಬಿಣ,


ಏಳನೆಯ ದಿನದಲ್ಲಿ ನಿಮ್ಮ ಬಟ್ಟೆಗಳನ್ನು ಒಗೆದುಕೊಂಡ ನಂತರ ಶುದ್ಧರಾಗುವಿರಿ; ಆಮೇಲೆ ನೀವು ಪಾಳೆಯದೊಳಗೆ ಬರಬಹುದು ಎಂದು ಹೇಳಿದನು.


ಮೋಶೆ ಜನರ ಮಾತುಗಳನ್ನು ಯೆಹೋವನಿಗೆ ಅರಿಕೆಮಾಡಲಾಗಿ ಯೆಹೋವನು ಅವನಿಗೆ ಹೇಳಿದ್ದೇನಂದರೆ - ನೀನು ಜನರ ಬಳಿಗೆ ಹೋಗಿ ಈ ಹೊತ್ತು ನಾಳೆ ಅವರನ್ನು ಪರಿಶುದ್ಧಗೊಳಿಸು;


ಮೋಶೆ ಬೆಟ್ಟದಿಂದಿಳಿದು ಜನರ ಬಳಿಗೆ ಬಂದು ಅವರನ್ನು ಪರಿಶುದ್ಧಗೊಳಿಸಿದನು; ಅವರು ತಮ್ಮ ಬಟ್ಟೆಗಳನ್ನು ಮಡಿಮಾಡಿಕೊಂಡರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು