Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅರಣ್ಯಕಾಂಡ 31:28 - ಕನ್ನಡ ಸತ್ಯವೇದವು J.V. (BSI)

28 ಯುದ್ಧಕ್ಕೆ ಹೋದ ಭಟರಿಗೆ ಬರುವ ಭಾಗದಿಂದ ಮನುಷ್ಯ, ದನ, ಕತ್ತೆ, ಆಡು, ಕುರಿ ಇವುಗಳಲ್ಲಿ ನೀನು ಐನೂರರಲ್ಲಿ ಒಂದರ ಮೇರೆಗೆ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

28 ಯುದ್ಧಕ್ಕೆ ಹೋದ ಭಟರಿಗೆ ಬರುವ ಭಾಗದಿಂದ ಮನುಷ್ಯ, ದನ, ಕತ್ತೆ, ಆಡು, ಕುರಿ ಇವುಗಳಲ್ಲಿ ನೀನು ಐನೂರರಲ್ಲಿ ಒಂದರ ಮೇರೆಗೆ ಯೆಹೋವನಿಗೆ ಕಪ್ಪವನ್ನು ಎತ್ತಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

28 ಯುದ್ಧಕ್ಕೆ ಹೋಗಿದ್ದ ಸೈನಿಕರಿಗೆ ಬರುವ ಭಾಗದಿಂದ ಸೆರೆಯಾಳು, ದನ, ಕತ್ತೆ, ಆಡು, ಕುರಿ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

28 ಯುದ್ಧಕ್ಕೆ ಹೋದ ಸೈನಿಕರಿಗೆ ಬರುವ ಭಾಗದಿಂದ ಮನುಷ್ಯರನ್ನು, ದನಕರುಗಳನ್ನು, ಕತ್ತೆಗಳನ್ನು ಮತ್ತು ಕುರಿಗಳನ್ನು

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

28 ಜನರಿಂದಲೂ, ಪಶುಗಳಿಂದಲೂ, ಕತ್ತೆಗಳಿಂದಲೂ, ಕುರಿಗಳಿಂದಲೂ ಐನೂರರಲ್ಲಿ ಒಂದು ಪ್ರಾಣವನ್ನು ಯುದ್ಧಕ್ಕೆ ಹೊರಟ ಯುದ್ಧಭಟರ ಕಡೆಯಿಂದ ಯೆಹೋವ ದೇವರಿಗೆ ಕಪ್ಪವಾಗಿ ಎತ್ತಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅರಣ್ಯಕಾಂಡ 31:28
18 ತಿಳಿವುಗಳ ಹೋಲಿಕೆ  

ನೀನು ಲೇವಿಯರಿಗೆ ಹೀಗೆ ಆಜ್ಞಾಪಿಸಬೇಕು - ನಿಮ್ಮ ಸ್ವಂತಕ್ಕಾಗಿ ನಾನು ನೇವಿುಸಿರುವ ಹತ್ತನೆಯ ಪಾಲನ್ನು ನೀವು ಇಸ್ರಾಯೇಲ್ಯರಿಂದ ತೆಗೆದುಕೊಳ್ಳುವಾಗ ಅದರಲ್ಲಿ ಹತ್ತನೆಯ ಪಾಲನ್ನು ಪ್ರತ್ಯೇಕಿಸಿ ಯೆಹೋವನಿಗೆ ಸಮರ್ಪಿಸಬೇಕು.


ಇವುಗಳಲ್ಲಿ ಮೋಶೆಯು ಯೆಹೋವನ ಅಪ್ಪಣೆಯ ಪ್ರಕಾರ ಐವತ್ತರಲ್ಲಿ ಒಂದರ ಮೇರೆಗೆ ತೆಗೆದುಕೊಂಡು ಯೆಹೋವನ ಗುಡಾರವನ್ನು ನೋಡಿಕೊಳ್ಳುವ ಲೇವಿಯರಿಗೆ ಕೊಟ್ಟನು.


ವಿುಕ್ಕ ಇಸ್ರಾಯೇಲ್ಯರಿಗೆ ಬರುವ ಭಾಗದಿಂದ ಮನುಷ್ಯ, ದನ, ಕತ್ತೆ, ಆಡು, ಕುರಿ ಇವುಗಳಲ್ಲಿ ಐವತ್ತರಲ್ಲಿ ಒಂದರ ಮೇರೆಗೆ ತೆಗೆದುಕೊಂಡು ಯೆಹೋವನ ಗುಡಾರವನ್ನು ನೋಡಿಕೊಳ್ಳುವ ಲೇವಿಯರಿಗೆ ಕೊಡಬೇಕೆಂದು ಆಜ್ಞಾಪಿಸಿದನು.


ಅವರು - ಕೈಸರನದು ಅಂದರು. ಆಗ ಆತನು ಅವರಿಗೆ - ಹಾಗಾದರೆ ಕೈಸರನದನ್ನು ಕೈಸರನಿಗೆ ಕೊಡಿರಿ; ದೇವರದನ್ನು ದೇವರಿಗೆ ಕೊಡಿರಿ ಎಂದು ಹೇಳಿದನು.


ಯೆಹೋವನು ನಿನ್ನನ್ನು ವೈಭವಪಡಿಸಿರುವದನ್ನು ಕೇಳಿ ತಾರ್ಷೀಷಿನ ಹಡಗುಗಳು ನಿನ್ನ ದೇವರಾದ ಯೆಹೋವನ ನಾಮಮಹತ್ತಿನ ವಿಧಿಯೂ ಇಸ್ರಾಯೇಲಿನ ಸದಮಲಸ್ವಾವಿುಯ ಸನ್ನಿಧಿಯೂ ಆದ ಸ್ಥಾನಕ್ಕೆ ನಿನ್ನ ಮಕ್ಕಳನ್ನು ಅವರ ಬೆಳ್ಳಿ ಬಂಗಾರಗಳ ಸಮೇತ ದೂರದಿಂದ ತರುವದರಲ್ಲಿ ಮುಂದಾಗುತ್ತಿವೆ.


ಅವಳ ವ್ಯಾಪಾರವೂ ಆದಾಯವೂ ಅವಳಿಗೆ ನಿಧಿನಿಕ್ಷೇಪವಾಗದೆ ಯೆಹೋವನಿಗೇ ಮೀಸಲಾಗುವದು; ಆ ವ್ಯಾಪಾರವು ಯೆಹೋವನ ಸನ್ನಿಧಾನದಲ್ಲಿ ವಾಸಿಸುವವರಿಗೆ ಬೇಕಾದಷ್ಟು ಅನ್ನವನ್ನೂ ಶ್ರೇಷ್ಠವಾದ ಉಡುಪನ್ನೂ ಒದಗಿಸಲು ಅನುಕೂಲಿಸುವದು.


ಆ ಕಾಲದಲ್ಲಿ ಉನ್ನತರಾದ ನುಣುಪಿನ ಮೈಯವರೂ ಸರ್ವದಾ ಭಯಂಕರರೂ ಮಹಾಬಲದಿಂದ [ಶತ್ರುಗಳನ್ನು] ತುಳಿಯುವವರೂ ನದಿಗಳಿಂದ ವಿಂಗಡವಾಗಿರುವ ದೇಶದ ನಿವಾಸಿಗಳೂ ಆದ ಜನಾಂಗದವರು ಸೇನಾಧೀಶ್ವರನಾದ ಯೆಹೋವನ ನಾಮಮಹತ್ತಿರುವ ಚೀಯೋನ್ ಪರ್ವತಕ್ಕೆ ಆತನಿಗೋಸ್ಕರ ಕಾಣಿಕೆಯನ್ನು ತರುವರು.


ಅರಸನಾದ ದಾವೀದನು ಇವುಗಳನ್ನೂ ಎದೋಮ್ಯರು ಮೋವಾಬ್ಯರು ಅಮ್ಮೋನಿಯರು ಫಿಲಿಷ್ಟಿಯರು ಅಮಾಲೇಕ್ಯರು ಎಂಬೀ ಸುತ್ತಣ ಜನಾಂಗಗಳಿಂದ ಕಿತ್ತುಕೊಂಡ ಬೆಳ್ಳಿಬಂಗಾರವನ್ನೂ ಯೆಹೋವನಿಗೋಸ್ಕರ ಪ್ರತಿಷ್ಠಿಸಿದನು.


ಇಸ್ರಾಯೇಲ್ಯರು ಪಟ್ಟಣವನ್ನೂ ಅದರಲ್ಲಿರುವದೆಲ್ಲವನ್ನೂ ಬೆಂಕಿಯಿಂದ ಸುಟ್ಟರು. ಆದರೆ ಬೆಳ್ಳಿಬಂಗಾರವನ್ನೂ ತಾಮ್ರ ಕಬ್ಬಿಣಗಳ ಪಾತ್ರೆಗಳನ್ನೂ ಯೆಹೋವನ ಆಲಯದ ಭಂಡಾರಕ್ಕೆ ಕೊಟ್ಟರು.


ಎಲ್ಲಾ ಬೆಳ್ಳಿಬಂಗಾರವೂ ತಾಮ್ರ ಕಬ್ಬಿಣಗಳ ಪಾತ್ರೆಗಳೂ ಯೆಹೋವನ ಮೀಸಲಾಗಿದ್ದು ಆತನ ಭಂಡಾರಕ್ಕೆ ಸೇರತಕ್ಕವುಗಳು ಅಂದನು.


ಲೇವಿಯರು ದೇವದರ್ಶನದ ಗುಡಾರದ ಪರಿಚರ್ಯವನ್ನು ಮಾಡುವದಕ್ಕಾಗಿ ಇಸ್ರಾಯೇಲ್ಯರಿಂದ [ಸಕಲಪದಾರ್ಥಗಳ] ಹತ್ತನೆಯ ಪಾಲನ್ನು ಗೊತ್ತುಮಾಡಿಕೊಟ್ಟಿದ್ದೇನೆ.


ಪರಾತ್ಪರನಾದ ದೇವರು ನಿನ್ನ ಶತೃಗಳನ್ನು ನಿನ್ನ ಕೈಗೆ ಒಪ್ಪಿಸಿದ್ದಕ್ಕಾಗಿ ಆತನಿಗೆ ಸ್ತೋತ್ರ ಎಂದು ಹೇಳಿದನು. ಅಬ್ರಾಮನು ತಾನು ಗೆದ್ದು ತಂದಿದ್ದ ಎಲ್ಲಾ ವಸ್ತುಗಳಲ್ಲಿ ಹತ್ತನೆಯ ಒಂದು ಭಾಗವನ್ನು ಅವನಿಗೆ ಕೊಟ್ಟನು.


ಯೆಹೋವನಿಗೋಸ್ಕರ ಕಪ್ಪವನ್ನು ತೆಗೆದುಕೊಂಡು ಆತನಿಗೋಸ್ಕರ ಪ್ರತ್ಯೇಕಿಸಿ ಮಹಾಯಾಜಕ ಎಲ್ಲಾಜಾರನಿಗೆ ಒಪ್ಪಿಸಬೇಕು.


ಸಮೂಹಕ್ಕೋಸ್ಕರವೂ ಯೆಹೋವನು ಆದುಕೊಳ್ಳುವ ಸ್ಥಳದಲ್ಲಿ ಆತನ ಯಜ್ಞವೇದಿಗೋಸ್ಕರವೂ ಕಟ್ಟಿಗೆ ಒಡೆಯುವವರನ್ನಾಗಿಯೂ ನೀರು ತರುವವರನ್ನಾಗಿಯೂ ನೇವಿುಸಿದನು. ಅವರು ಇಂದಿನವರೆಗೂ ಅದೇ ಕೆಲಸ ಮಾಡುತ್ತಾರೆ.


ಯೆಹೋವನಿಗೋಸ್ಕರ ಆ ದಿವಸ ತಾವು ತಂದ ಕೊಳ್ಳೆಯಿಂದ ಏಳು ನೂರು ಹೋರಿಗಳನ್ನೂ ಏಳು ಸಾವಿರ ಕುರಿಗಳನ್ನೂ ಯಜ್ಞ ಮಾಡಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು