Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅರಣ್ಯಕಾಂಡ 31:3 - ಕನ್ನಡ ಸತ್ಯವೇದವು J.V. (BSI)

3 ಆಗ ಮೋಶೆಯು ಇಸ್ರಾಯೇಲ್ಯರಿಗೆ - ನೀವು ಒಂದೊಂದು ಕುಲದಿಂದ ಸಾವಿರ ಜನರ ಮೇರೆಗೆ ಭಟರನ್ನು ಯುದ್ಧಕ್ಕೆ ಸಿದ್ಧಮಾಡಿಕೊಳ್ಳಬೇಕು;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ಆಗ ಮೋಶೆಯು ಇಸ್ರಾಯೇಲರಿಗೆ, “ನಿಮ್ಮೊಳಗಿಂದ ಕೆಲವರು ಮಿದ್ಯಾನ್ಯರಿಗೆ ವಿರುದ್ಧವಾಗಿ ಯುದ್ಧಕ್ಕೆ ಸಿದ್ಧಮಾಡಿಕೊಳ್ಳಬೇಕು. ಯೆಹೋವನ ಪ್ರತಿದಂಡನೆಯನ್ನು ಅವರಿಗೆ ತೀರಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

3 ಆಗ ಮೋಶೆ ಇಸ್ರಯೇಲರಿಗೆ, “ನೀವು ಒಂದೊಂದು ಕುಲದಿಂದ ಸಾವಿರ ಜನರ ಮೇರೆಗೆ ಕಾಲಾಳುಗಳನ್ನು ಯುದ್ಧಕ್ಕೆ ಸಿದ್ಧಮಾಡಿಕೊಳ್ಳಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

3 ಆಗ ಮೋಶೆ ಇಸ್ರೇಲರಿಗೆ, “ಮಿದ್ಯಾನ್ಯರು ಯೆಹೋವನಿಗೆ ವಿರೋಧವಾಗಿ ಮಾಡಿದ ಕೃತ್ಯಗಳಿಗಾಗಿ ಅವರ ಮೇಲೆ ಆಕ್ರಮಣ ಮಾಡಿ ದಂಡಿಸಲು ನಿಮ್ಮಲ್ಲಿರುವ ಗಂಡಸರಲ್ಲಿ ಕೆಲವರನ್ನು ದಂಡೆಯಾತ್ರೆಗೆ ಆರಿಸಿಕೊಳ್ಳಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

3 ಆಗ ಮೋಶೆಯು ಜನರ ಸಂಗಡ ಮಾತನಾಡಿ, “ನಿಮ್ಮೊಳಗಿಂದ ಜನರು ಯುದ್ಧಕ್ಕೆ ಸಿದ್ಧಮಾಡಿಕೊಳ್ಳಲಿ. ಅವರು ಮಿದ್ಯಾನ್ಯರಿಗೆ ವಿರೋಧವಾಗಿ ಹೋಗಿ, ಯೆಹೋವ ದೇವರ ಪ್ರತೀಕಾರವನ್ನು ಅವರಿಗೆ ತೀರಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅರಣ್ಯಕಾಂಡ 31:3
12 ತಿಳಿವುಗಳ ಹೋಲಿಕೆ  

ಶತ್ರುಗಳ ಕತ್ತಿಯ ಮೂಲಕವಾಗಿ ನಿಮ್ಮನ್ನು ಸಂಹರಿಸುವೆನು; ನೀವು ನನ್ನ ನಿಬಂಧನವನ್ನು ಮೀರಿದದರಿಂದ ಆ ಕತ್ತಿಯು ಪ್ರತಿದಂಡನೆಮಾಡುವದು. ನೀವು ನಿಮ್ಮ ಪಟ್ಟಣಗಳಲ್ಲಿ ಕೂಡಿರುವಾಗ ನಿಮ್ಮಲ್ಲಿ ಅಂಟುರೋಗವುಂಟಾಗುವಂತೆ ಮಾಡುವೆನು; ಹೀಗೆ ನೀವು ಶತ್ರುಗಳ ಕೈಗೆ ಬೀಳುವಿರಿ.


ಆದರೆ ಆ ಯುದ್ಧದಿನವು ಸೇನಾಧೀಶ್ವರನಾದ ಯೆಹೋವನೆಂಬ ಕರ್ತನು ತನ್ನ ಶತ್ರುಗಳಿಗೆ ಮುಯ್ಯಿತೀರಿಸುವ ದಿನವಾಗಿದೆ; ಅದು ದಂಡನೆಯ ದಿವಸ; ಆಗ ಖಡ್ಗವು ನುಂಗಿ ನುಂಗಿ ತಣಿಯುವದು, ಅವರ ರಕ್ತವನ್ನು ತುಂಬಾ ಹೀರುವದು; ಸೇನಾಧೀಶ್ವರನಾದ ಯೆಹೋವನೆಂಬ ಕರ್ತನು ಬಡಗಲಲ್ಲಿ ಯೂಫ್ರೇಟೀಸ್ ನದಿಯ ಹತ್ತಿರ ಬಲಿಮಾಡಬೇಕೆಂದಿದ್ದಾನಲ್ಲಾ.


ಯೆಹೋವನು ಯೇಹುವಿಗೆ - ನೀನು ನನ್ನ ದೃಷ್ಟಿಗೆ ಸರಿಯಾದದ್ದನ್ನು ನಡಿಸಿ ನನ್ನ ಮೆಚ್ಚಿಕೆಯನ್ನು ಪಡೆದಿ; ಅಹಾಬನ ಮನೆಯವರನ್ನು ಕುರಿತು ನನ್ನ ಚಿತ್ತವನ್ನು ನೆರವೇರಿಸಿದಿ; ಆದದರಿಂದ ನಿನ್ನ ಸಂತಾನದವರು ನಾಲ್ಕನೆಯ ತಲೆಯವರೆಗೂ ಇಸ್ರಾಯೇಲ್ ಸಿಂಹಾಸನದ ಮೇಲೆ ಕೂತುಕೊಳ್ಳುವರು ಎಂದು ಹೇಳಿದನು.


ನೀನು ನಿನ್ನ ಯಜಮಾನನಾದ ಅಹಾಬನ ಮನೆಯವರನ್ನು ಸಂಹರಿಸಿಬಿಡು; ಆಗ ನನ್ನ ಸೇವಕರಾದ ಪ್ರವಾದಿಗಳೇ ಮೊದಲಾದ ಯೆಹೋವಭಕ್ತರ ರಕ್ತವನ್ನು ಸುರಿಸಿದ್ದಕ್ಕಾಗಿ ನಾನು ಈಜೆಬೆಲಳಿಗೆ ಮುಯ್ಯಿತೀರಿಸಿದಂತಾಗುವದು.


ಮೇರೋಜ್ ಊರನ್ನು ಶಪಿಸಿರೆಂದು ಯೆಹೋವನ ದೂತನು ಹೇಳುತ್ತಾನೆ. ಅದರ ನಿವಾಸಿಗಳು ಯೆಹೋವನ ಸಹಾಯಕ್ಕೆ ಬರಲಿಲ್ಲ; ಯುದ್ಧವೀರರ ಜೊತೆಯಲ್ಲಿ ಯೆಹೋವನ ಸಹಾಯಕ್ಕೆ ಬರಲಿಲ್ಲವಲ್ಲಾ; ಅವರನ್ನು ಶಪಿಸೇ ಶಪಿಸಿರಿ.


ಇಸ್ರಾಯೇಲ್ಯರಲ್ಲಿ ಸೇನಾನಾಯಕರು ಎದ್ದಿದ್ದಾರೆ; ಜನರು ಸ್ವೇಚ್ಫೆಯಿಂದ ಸೈನ್ಯದಲ್ಲಿ ಸೇರಿದ್ದಾರೆ, ಯೆಹೋವನನ್ನು ಕೊಂಡಾಡಿರಿ.


ಆ ಒಡಂಬಡಿಕೆ ಏನಂದರೆ, ಅವನಿಗೂ ಅವನ ತರುವಾಯ ಅವನ ಸಂತತಿಯವರಿಗೂ ಯಾಜಕತ್ವವು ಶಾಶ್ವತವಾಗಿಯೇ ಇರುವದೆಂದು ಮಾತುಕೊಡುತ್ತೇನೆ. ಅವನು ತನ್ನ ದೇವರ ಗೌರವವನ್ನು ಸ್ಥಾಪಿಸಿ ಇಸ್ರಾಯೇಲ್ಯರಿಗೋಸ್ಕರ ದೋಷಪರಿಹಾರವನ್ನು ಮಾಡಿದ್ದರಿಂದ ನಾನು ಅವನಿಗೆ ಈ ಮಾತನ್ನು ಕೊಟ್ಟಿದ್ದೇನೆ ಎಂದು ಹೇಳಿದನು.


ಯಾಹುವಿನ ಸಿಂಹಾಸನದ ಆಣೆ, ಅಮಾಲೇಕ್ಯರ ಮೇಲೆ ಯೆಹೋವನಿಗೆ ತಲತಲಾಂತರಕ್ಕೂ ಯುದ್ಧವಿರುವದು ಅಂದನು.


ಓಹೋ, ಬಾಬೆಲಿನಿಂದ ತಪ್ಪಿಸಿಕೊಂಡು ಓಡಿಹೋಗುವವರ ಶಬ್ದ! ನಮ್ಮ ದೇವರಾದ ಯೆಹೋವನು ತನ್ನ ಆಲಯವನ್ನು ನಾಶಮಾಡಿದವರಿಗೆ ಮುಯ್ಯಿತೀರಿಸಿದ್ದಾನೆ ಎಂಬ ಸಮಾಚಾರವನ್ನು ಚೀಯೋನಿನಲ್ಲಿ ಪ್ರಕಟಿಸುವದಕ್ಕೆ ಹೋಗುತ್ತಾರಲ್ಲಾ.


ಅವರು ವಿುದ್ಯಾನ್ಯರಿಗೆ ಯೆಹೋವನು ಆಜ್ಞಾಪಿಸಿದ ದಂಡನೆಯನ್ನು ಮಾಡಬೇಕು ಎಂದು ಅಪ್ಪಣೆಕೊಟ್ಟನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು