ಅರಣ್ಯಕಾಂಡ 31:50 - ಕನ್ನಡ ಸತ್ಯವೇದವು J.V. (BSI)50 ಆದಕಾರಣ ಯೆಹೋವನು ಕಾಪಾಡಿದ ನಮ್ಮ ಪ್ರಾಣಗಳಿಗೆ ಈಡಾಗಿ ಆತನಿಗೋಸ್ಕರ ಕಾಣಿಕೆಯಾಗಿ ನಮ್ಮಲ್ಲಿ ಒಬ್ಬೊಬ್ಬನು ತನಗೆ ಸಿಕ್ಕಿದ ಚಿನ್ನದ ಒಡವೆಗಳನ್ನು ಅಂದರೆ ತೋಳ್ಬಳೆ, ಕಡಗ, ಮುದ್ರೆಯುಂಗರ, ಮುರುವು, ಕಂಠಮಾಲೆ ಮುಂತಾದವುಗಳನ್ನು ತಂದಿದ್ದೇವೆ ಅಂದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201950 ಆದಕಾರಣ ಯೆಹೋವನು ಕಾಪಾಡಿದ ನಮ್ಮ ಪ್ರಾಣಗಳಿಗೆ ಈಡಾಗಿ ಆತನಿಗೋಸ್ಕರ ಪ್ರಾಯಶ್ಚಿತ್ತ ಕಾಣಿಕೆಯಾಗಿ ನಮ್ಮಲ್ಲಿ ಒಬ್ಬೊಬ್ಬನು ತನಗೆ ಸಿಕ್ಕಿದ ಚಿನ್ನದ ಒಡವೆಗಳಲ್ಲಿ ತೋಳ್ಬಳೆ, ಕಡಗ, ಮುದ್ರೆಯುಂಗರ, ಮುರುವು, ಕಂಠಮಾಲೆ ಮುಂತಾದವುಗಳನ್ನು ತಂದಿದ್ದೇವೆ” ಎಂದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)50 ಸರ್ವೇಶ್ವರ ಸ್ವಾಮಿ ನಮ್ಮ ಪ್ರಾಣಗಳನ್ನು ಕಾಪಾಡಿದ್ದಾರೆ. ಅದಕ್ಕೆ ಈಡಾಗಿ ಅವರಿಗೆ ಕಾಣಿಕೆಯಾಗಿ ನಮ್ಮಲ್ಲಿ ಒಬ್ಬೊಬ್ಬನು ತನಗೆ ಸಿಕ್ಕಿದ ಚಿನ್ನದ ಒಡವೆಗಳನ್ನು, ಅಂದರೆ ತೋಳ್ಬಳೆ, ಕಡಗ, ಮುದ್ರೆಯುಂಗುರ, ಮುರುವು, ಕಂಠಮಾಲೆ, ಮುಂತಾದುವುಗಳನ್ನು ತಂದಿದ್ದೇವೆ,” ಎಂದರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್50 ಆದಕಾರಣ ಯೆಹೋವನು ಕಾಪಾಡಿದ ನಮ್ಮ ಪ್ರಾಣಗಳಿಗೆ ಈಡಾಗಿ ಆತನಿಗೋಸ್ಕರ ಕಾಣಿಕೆಯಾಗಿ ನಮ್ಮಲ್ಲಿ ಒಬ್ಬೊಬ್ಬನು ತನಗೆ ಸಿಕ್ಕಿದ ಚಿನ್ನದ ಒಡವೆಗಳನ್ನು ಅಂದರೆ ತೋಳ್ಬಳೆ, ಕಡಗ, ಮುದ್ರೆಯುಂಗುರ, ಮುರುವು, ಕಂಠಮಾಲೆ ಮುಂತಾದವುಗಳನ್ನು ನಮ್ಮ ಶುದ್ಧೀಕರಣಕ್ಕಾಗಿ ಯೆಹೋವನಿಗೆ ತಂದಿದ್ದೇವೆ” ಅಂದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ50 ಆದ್ದರಿಂದ ಯೆಹೋವ ದೇವರ ಸಮ್ಮುಖದಲ್ಲಿ ನಮ್ಮ ಪ್ರಾಣಗಳಿಗೋಸ್ಕರ ಪ್ರಾಯಶ್ಚಿತ್ತಕ್ಕಾಗಿ ನಾವು ಒಬ್ಬೊಬ್ಬನಿಗೆ ಸಿಕ್ಕಿದಂಥ ಬಂಗಾರದ ವಸ್ತುಗಳಾದ ಸರಪಣಿಗಳನ್ನೂ, ಕಡಗಗಳನ್ನೂ, ಉಂಗುರಗಳನ್ನೂ, ವಾಲೆಗಳನ್ನೂ, ಪದಕಗಳನ್ನೂ ಯೆಹೋವ ದೇವರಿಗೆ ಕಾಣಿಕೆಯಾಗಿ ತಂದಿದ್ದೇವೆ,” ಎಂದು ಹೇಳಿದರು. ಅಧ್ಯಾಯವನ್ನು ನೋಡಿ |