ಅರಣ್ಯಕಾಂಡ 31:54 - ಕನ್ನಡ ಸತ್ಯವೇದವು J.V. (BSI)54 ಸಹಸ್ರಾಧಿಪತಿಗಳೂ ಶತಾಧಿಪತಿಗಳೂ ಕೊಟ್ಟ ಚಿನ್ನವನ್ನು ಮೋಶೆಯೂ ಮಹಾಯಾಜಕ ಎಲ್ಲಾಜಾರನೂ ತೆಗೆದುಕೊಂಡು ಇಸ್ರಾಯೇಲ್ಯರ ವಿಷಯದಲ್ಲಿ ಯೆಹೋವನಿಗೆ ಜ್ಞಾಪಕಕೊಡುವದಕ್ಕಾಗಿ ದೇವದರ್ಶನದ ಗುಡಾರದೊಳಗೆ ತಂದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201954 ಸಹಸ್ರಾಧಿಪತಿಗಳೂ, ಶತಾಧಿಪತಿಗಳೂ, ಕೊಟ್ಟ ಚಿನ್ನವನ್ನು ಮೋಶೆಯೂ, ಮಹಾಯಾಜಕ ಎಲ್ಲಾಜಾರನೂ ತೆಗೆದುಕೊಂಡು ಇಸ್ರಾಯೇಲರ ವಿಷಯದಲ್ಲಿ ಯೆಹೋವನಿಗೆ ಜ್ಞಾಪಕ ಮಾಡುವುದಕ್ಕಾಗಿ ದೇವದರ್ಶನದ ಗುಡಾರದೊಳಗೆ ತಂದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)54 ಆದರೆ ಸಹಸ್ರಾಧಿಪತಿಗಳು ಮತ್ತು ಶತಾಧಿಪತಿಗಳು ಕೊಟ್ಟ ಚಿನ್ನವನ್ನು ಮೋಶೆ ಮತ್ತು ಮಹಾಯಾಜಕ ಎಲ್ಲಾಜಾರನು ಸ್ವೀಕರಿಸಿ ಅದನ್ನು ಇಸ್ರಯೇಲರಿಗೋಸ್ಕರ ಸ್ಮರಣಾರ್ಥವಾಗಿ ಸರ್ವೇಶ್ವರನ ಸನ್ನಿಧಿಯಲ್ಲಿ ದೇವದರ್ಶನದ ಗುಡಾರದೊಳಗಿಟ್ಟರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್54 ಸಹಸ್ರಾಧಿಪತಿಗಳೂ ಶತಾಧಿಪತಿಗಳೂ ಕೊಟ್ಟ ಚಿನ್ನವನ್ನು ಮೋಶೆಯೂ ಯಾಜಕನಾದ ಎಲ್ಲಾಜಾರನೂ ತೆಗೆದುಕೊಂಡು ದೇವದರ್ಶನಗುಡಾರದಲ್ಲಿ ಇಟ್ಟರು. ಇಸ್ರೇಲರ ವಿಷಯದಲ್ಲಿ ಜ್ಞಾಪಕಾರ್ಥವಾಗಿ ಇದು ಯೆಹೋವನ ಸನ್ನಿಧಿಯಲ್ಲಿ ಇಡಲ್ಪಟ್ಟಿತು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ54 ಆಗ ಮೋಶೆಯೂ, ಯಾಜಕನಾದ ಎಲಿಯಾಜರನೂ ಸಹಸ್ರಾಧಿಪತಿಗಳ ಮತ್ತು ಶತಾಧಿಪತಿಗಳ ಕೈಯಿಂದ ಬಂಗಾರವನ್ನು ತೆಗೆದುಕೊಂಡು, ಯೆಹೋವ ದೇವರ ಸಮ್ಮುಖದಲ್ಲಿ ಇಸ್ರಾಯೇಲರಿಗೆ ಜ್ಞಾಪಕಕ್ಕಾಗಿ ದೇವದರ್ಶನ ಗುಡಾರದೊಳಗೆ ತಂದರು. ಅಧ್ಯಾಯವನ್ನು ನೋಡಿ |