Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅರಣ್ಯಕಾಂಡ 31:9 - ಕನ್ನಡ ಸತ್ಯವೇದವು J.V. (BSI)

9 ಇಸ್ರಾಯೇಲ್ಯರು ವಿುದ್ಯಾನ್ಯರ ಎಲ್ಲಾ ಹೆಂಗಸರನ್ನೂ ಮಕ್ಕಳನ್ನೂ ಸೆರೆಹಿಡಿದು ಎಲ್ಲಾ ದನಕುರಿಗಳನ್ನೂ ಆಸ್ತಿಯನ್ನೂ ಸೂರೆಮಾಡಿ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 ಇಸ್ರಾಯೇಲರು ಮಿದ್ಯಾನ್ಯರ ಎಲ್ಲಾ ಹೆಂಗಸರನ್ನೂ, ಮಕ್ಕಳನ್ನೂ ಸೆರೆಹಿಡಿದು ಎಲ್ಲಾ ದನಕುರಿಗಳನ್ನೂ, ಆಸ್ತಿಯನ್ನೂ ಸೂರೆಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

9 ಇಸ್ರಯೇಲರು ಮಿದ್ಯಾನರ ಎಲ್ಲಾ ಮಡದಿ ಮಕ್ಕಳನ್ನೂ ಸೆರೆಹಿಡಿದರು; ಎಲ್ಲಾ ದನಕುರಿಗಳನ್ನೂ ಆಸ್ತಿಪಾಸ್ತಿಯನ್ನೂ ಸೂರೆಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

9 ಇಸ್ರೇಲರು ಮಿದ್ಯಾನ್ಯರ ಹೆಂಗಸರನ್ನು ಮತ್ತು ಮಕ್ಕಳನ್ನು ಸೆರೆಹಿಡಿದರು. ಅವರು ಮಿದ್ಯಾನ್ಯರ ಎಲ್ಲಾ ಪಶುಗಳನ್ನು ಮತ್ತು ಇತರ ಅಮೂಲ್ಯವಾದ ವಸ್ತುಗಳನ್ನು ತೆಗೆದುಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

9 ಇಸ್ರಾಯೇಲರು ಮಿದ್ಯಾನ್ಯರ ಸ್ತ್ರೀಯರನ್ನೂ, ಅವರ ಮಕ್ಕಳನ್ನೂ ಸೆರೆಹಿಡಿದು, ಅವರ ಸಮಸ್ತ ಪಶುಗಳನ್ನೂ, ಅವರ ಸಮಸ್ತ ಹಿಂಡುಗಳನ್ನೂ, ಅವರ ಸಮಸ್ತ ಸಲಕರಣೆಗಳನ್ನೂ ಸುಲಿಗೆ ಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅರಣ್ಯಕಾಂಡ 31:9
9 ತಿಳಿವುಗಳ ಹೋಲಿಕೆ  

ಆದದರಿಂದ ಅವನ ದೇವರಾದ ಯೆಹೋವನು ಅವನನ್ನು ಅರಾಮ್ಯರ ಅರಸನ ಕೈಗೆ ಒಪ್ಪಿಸಿದನು; ಅರಾಮ್ಯರು ಅವನನ್ನು ಸೋಲಿಸಿ ಅವನ ಜನರಲ್ಲಿ ದೊಡ್ಡ ಗುಂಪನ್ನು ಸೆರೆಹಿಡಿದು ದಮಸ್ಕಕ್ಕೆ ಒಯ್ದರು. ಇದಲ್ಲದೆ ಅವನು ಇಸ್ರಾಯೇಲ್ ರಾಜನ ಕೈಗೂ ಒಪ್ಪಿಸಲ್ಪಟ್ಟು ಅವನಿಂದಲೂ ಪೂರ್ಣವಾಗಿ ಅಪಜಯಹೊಂದಿದನು.


ಹೆಂಗಸರನ್ನೂ ಮಕ್ಕಳನ್ನೂ ದನಗಳನ್ನೂ ಊರಲ್ಲಿರುವ ಆಸ್ತಿಯನ್ನೂ ನೀವು ಸ್ವಂತಕ್ಕೆ ತೆಗೆದುಕೊಳ್ಳಬಹುದು. ನಿಮ್ಮ ದೇವರಾದ ಯೆಹೋವನು ನಿಮಗೆ ವಶಪಡಿಸಿದ ಶತ್ರುಗಳ ಆಸ್ತಿಯನ್ನು ನೀವೇ ಅನುಭೋಗಿಸಬಹುದು.


ಹತವಾದವರಲ್ಲಿ ಎವೀ, ರೆಕೆಮ್, ಚೂರ್, ಹೂರ್, ರೆಬಾ ಎಂಬ ವಿುದ್ಯಾನ್ಯರ ಐದು ಮಂದಿ ರಾಜರು ಇದ್ದರು. ಅದಲ್ಲದೆ ಬೆಯೋರನ ಮಗನಾದ ಬಿಳಾಮನನ್ನು ಕಡಿದುಬಿಟ್ಟರು.


ಅವರು ಇದ್ದ ಎಲ್ಲಾ ಊರುಗಳನ್ನೂ ಪಾಳೆಯಗಳನ್ನೂ ಸುಟ್ಟುಬಿಟ್ಟರು.


ಅವರ ಮಕ್ಕಳನ್ನೂ ಹೆಂಡರನ್ನೂ ಸೆರೆಹಿಡಿದು ಮನೆಯಲ್ಲಿದ್ದದ್ದನ್ನೆಲ್ಲಾ ಬಾಚಿಕೊಂಡರು.


ಅದಲ್ಲದೆ ದಂಡಿನವರೆಲ್ಲರೂ ಸ್ವಂತಕ್ಕಾಗಿ ಲೂಟಿಯನ್ನು ಹಿಡುಕೊಂಡಿದ್ದರು.


ದನಕಾಯುವವರ ಗುಡಾರಗಳ ಮೇಲೆ ಬಿದ್ದು ಎಷ್ಟೋ ಒಂಟೆ ಕುರಿಗಳನ್ನು ಯೆರೂಸಲೇವಿುಗೆ ಹೊಡೆದುಕೊಂಡು ಬಂದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು