ಅರಣ್ಯಕಾಂಡ 32:11 - ಕನ್ನಡ ಸತ್ಯವೇದವು J.V. (BSI)11-12 ಐಗುಪ್ತದೇಶದೊಳಗಿಂದ ಬಂದ ಈ ಜನರೊಳಗೆ ಕೆನಿಜ್ಜೀಯನಾದ ಯೆಫುನ್ನೆಯ ಮಗ ಕಾಲೇಬನೂ ನೂನನ ಮಗನಾದ ಯೆಹೋಶುವನೂ ಇವರಿಬ್ಬರೇ ಹೊರತಾಗಿ ಯಾರೂ ನನ್ನನ್ನು ಪೂರ್ಣಮನಸ್ಸಿನಿಂದ ಅನುಸರಿಸದೆ ಹೋದದರಿಂದ ಅವರೊಳಗೆ ಇಪ್ಪತ್ತು ವರುಷ ಮೊದಲುಗೊಂಡು ಹೆಚ್ಚಾದ ವಯಸ್ಸಿನವರಲ್ಲಿ ಅವರಿಬ್ಬರೇ ಹೊರತಾಗಿ ಒಬ್ಬನಾದರೂ ನಾನು ಅಬ್ರಹಾಮ್ ಇಸಾಕ್ ಯಾಕೋಬರಿಗೆ ಪ್ರಮಾಣಪೂರ್ವಕವಾಗಿ ಕೊಟ್ಟ ದೇಶವನ್ನು ನೋಡುವದೇ ಇಲ್ಲ ಎಂದು ಖಂಡಿತವಾಗಿ ಹೇಳಿದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201911 ‘ಐಗುಪ್ತ ದೇಶದೊಳಗಿಂದ ಬಂದ ಈ ಜನರೊಳಗೆ ಯಾರೂ ನನ್ನನ್ನು ಪೂರ್ಣಮನಸ್ಸಿನಿಂದ ಅನುಸರಿಸದೆ ಹೋದುದರಿಂದ ನಾನು ಅಬ್ರಹಾಮ್, ಇಸಾಕ್, ಯಾಕೋಬರಿಗೆ ಪ್ರಮಾಣ ಪೂರ್ವಕವಾಗಿ ಕೊಟ್ಟ ದೇಶವನ್ನು, ಅವರೊಳಗೆ ಇಪ್ಪತ್ತು ವರ್ಷ ಮೊದಲುಗೊಂಡು ಹೆಚ್ಚಿನ ವಯಸ್ಸಿನವರಲ್ಲಿ ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)11 ‘ಈಜಿಪ್ಟ್ ದೇಶದಿಂದ ಹೊರಬಂದ ಈ ಜನರಲ್ಲಿ ಕೆನಿಜ್ಜೀಯನಾದ ಯೆಫುನ್ನೆಯ ಮಗ ಕಾಲೇಬನು ಮತ್ತು ನೂನನ ಮಗ ಯೆಹೋಶುವನು ಇವರಿಬ್ಬರೇ ಹೊರತಾಗಿ ಯಾರೂ ನನ್ನನ್ನು ಪೂರ್ಣಮನಸ್ಸಿನಿಂದ ಅನುಸರಿಸದೆ ಹೋದರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್11-12 ‘ಈಜಿಪ್ಟಿನಿಂದ ಬಂದ ಈ ಜನರಲ್ಲಿ ಮತ್ತು ಇಪ್ಪತ್ತು ವರ್ಷ ಮೊದಲುಗೊಂಡು ಅದಕ್ಕಿಂತ ಹೆಚ್ಚು ವಯಸ್ಸಾದ ನಿಮ್ಮವರೆಲ್ಲಾ ಕೆನಿಜ್ಜೀಯನಾದ ಯೆಫುನ್ನೆಯ ಮಗ ಕಾಲೇಬನ ಮತ್ತು ನೂನನ ಮಗನಾದ ಯೆಹೋಶುವನ ಹೊರತು ಯಾರೂ ನನ್ನನ್ನು ನಿಜವಾಗಿಯೂ ಅನುಸರಿಸದೆ ಹೋದದ್ದರಿಂದ, ನಾನು ಅಬ್ರಹಾಮ್, ಇಸಾಕ್, ಯಾಕೋಬರಿಗೆ ಪ್ರಮಾಣಪೂರ್ವಕವಾಗಿ ಕೊಟ್ಟ ದೇಶವನ್ನು ಅವರಿಬ್ಬರೇ ಹೊರತು ಬೇರೆ ಯಾರೂ ನೋಡುವುದೇ ಇಲ್ಲ’ ಎಂದು ಖಂಡಿತವಾಗಿ ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ11 ಅವರು ನನ್ನನ್ನು ಪೂರ್ಣಮನಸ್ಸಿನಿಂದ ಹಿಂಬಾಲಿಸದೆ ಇರುವುದರಿಂದ, ನಾನು ಅಬ್ರಹಾಮ್, ಇಸಾಕ್, ಯಾಕೋಬರಿಗೆ ಪ್ರಮಾಣ ಮಾಡಿದ ದೇಶವನ್ನು ಈಜಿಪ್ಟಿನೊಳಗಿಂದ ಹೊರಬಂದ ಇಪ್ಪತ್ತು ವರ್ಷವೂ ಅದಕ್ಕಿಂತ ಅಧಿಕವಾದ ಪ್ರಾಯವುಳ್ಳ ಜನರಲ್ಲಿ ಅಧ್ಯಾಯವನ್ನು ನೋಡಿ |