Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅರಣ್ಯಕಾಂಡ 32:22 - ಕನ್ನಡ ಸತ್ಯವೇದವು J.V. (BSI)

22 ತರುವಾಯ ನೀವು ತಿರಿಗಿ ಬಂದು ಆತನ ದೃಷ್ಟಿಯಲ್ಲೂ ಇಸ್ರಾಯೇಲ್ಯರ ದೃಷ್ಟಿಯಲ್ಲೂ ನಿರ್ದೋಷಿಗಳಾಗಿರುವಿರಿ, ಮತ್ತು ಈ ಪ್ರದೇಶವು ಯೆಹೋವನ ಸನ್ನಿಧಿಯಲ್ಲೇ ನಿಮಗೆ ಸ್ವಾಸ್ತ್ಯವಾಗಿರುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

22 ಯುದ್ಧಮಾಡಿ ತರುವಾಯ ನೀವು ತಿರುಗಿ ಬಂದು ಆತನ ದೃಷ್ಟಿಯಲ್ಲೂ, ಇಸ್ರಾಯೇಲರ ದೃಷ್ಟಿಯಲ್ಲೂ ನಿರ್ದೋಷಿಗಳಾಗಿರುವಿರಿ ಮತ್ತು ಈ ದೇಶವು ಯೆಹೋವನ ಸನ್ನಿಧಿಯಲ್ಲೇ ನಿಮಗೆ ಸ್ವತ್ತಾಗಿರುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

22 ತರುವಾಯ ನೀವು ಹಿಂದಿರುಗಿ ಬರಬಹುದು. ಆಗ ಸರ್ವೇಶ್ವರನ ಮುಂದೆ, ಇಸ್ರಯೇಲರ ಮುಂದೆ ನಿರ್ದೋಷಿಗಳಾಗುವಿರಿ, ಮಾತ್ರವಲ್ಲ ಈ ಪ್ರದೇಶ ಸರ್ವೇಶ್ವರನ ಸನ್ನಿಧಿಯಲ್ಲೇ ನಿಮಗೆ ಸೇರಿದ ಸೊತ್ತಾಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

22 ದೇಶವು ಯೆಹೋವ ದೇವರ ಮುಂದೆ ವಶವಾದ ತರುವಾಯ, ನೀವು ಯೆಹೋವ ದೇವರ ಮತ್ತು ಇಸ್ರಾಯೇಲರ ದೃಷಿಯಲ್ಲಿ ನಿರಪರಾಧಿಗಳಾಗಿದ್ದು, ಈ ದೇಶವು ಯೆಹೋವ ದೇವರ ಮುಂದೆ ನಿಮ್ಮ ಸೊತ್ತಾಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅರಣ್ಯಕಾಂಡ 32:22
17 ತಿಳಿವುಗಳ ಹೋಲಿಕೆ  

ಆಗ ರೂಬೇನ್ಯರೂ ಗಾದ್ಯರೂ ಮನಸ್ಸೆಕುಲದ ಅರ್ಧಜನರೂ ಕಾನಾನ್ ದೇಶದ ಶೀಲೋವಿನಲ್ಲಿದ್ದ ಇಸ್ರಾಯೇಲ್ಯರನ್ನು ಬಿಟ್ಟು ಯೆಹೋವನ ಆಜ್ಞೆಗನುಸಾರವಾಗಿ ಮೋಶೆಯಿಂದ ತಮಗೆ ಸಿಕ್ಕಿದ ಸ್ವಾಸ್ತ್ಯವಾದ ಗಿಲ್ಯಾದ್ ದೇಶಕ್ಕೆ ಹೋದರು.


ಈಗ ನಿಮ್ಮ ದೇವರಾದ ಯೆಹೋವನು ತನ್ನ ವಾಗ್ದಾನಕ್ಕನುಸಾರವಾಗಿ ನಿಮ್ಮ ಸಹೋದರರಿಗೆ ವಿಶ್ರಾಂತಿಯನ್ನು ದಯಪಾಲಿಸಿದ್ದದರಿಂದ ಆತನ ಸೇವಕನಾದ ಮೋಶೆಯು ಯೊರ್ದನಿನ ಆಚೆಯಲ್ಲಿ ನಿಮಗೆ ಕೊಟ್ಟ ಸ್ವಾಸ್ತ್ಯದಲ್ಲಿರುವ ನಿಮ್ಮ ನಿಮ್ಮ ನಿವಾಸಗಳಿಗೆ ಹೋಗಬಹುದು.


ಅನಂತರ ನಿಮ್ಮಂತೆ ನಿಮ್ಮ ಸಹೋದರರಿಗೂ ಯೆಹೋವನಿಂದ ವಿಶ್ರಾಂತಿ ದೊರಕಿದಾಗ ನಿಮ್ಮಲ್ಲಿ ಪ್ರತಿಯೊಬ್ಬನೂ ನಾನು ಕೊಟ್ಟ ಸ್ವಾಸ್ತ್ಯಕ್ಕೆ ತಿರಿಗಿ ಬರಬಹುದು ಎಂದು ಆಜ್ಞಾಪಿಸಿದೆನು.


ಮನಸ್ಸೆಕುಲದ ಉಳಿದ ಅರ್ಧಜನರಿಗೂ ರೂಬೇನ್ಯರಿಗೂ ಗಾದ್ಯರಿಗೂ ಮೋಶೆಯಿಂದ ಯೊರ್ದನಿನ ಆಚೆಯಲ್ಲೇ ಸ್ವಾಸ್ತ್ಯವು ದೊರಕಿತು. ಯೆಹೋವನ ಸೇವಕನಾದ ಮೋಶೆಯು ಅವರಿಗೆ ಕೊಟ್ಟ ಪ್ರಾಂತಗಳು ಯಾವವಂದರೆ -


ನಿಮ್ಮ ದೇವರಾದ ಯೆಹೋವನು ಕೊಡುವ ದೇಶವನ್ನು ನಿಮ್ಮ ಸಹೋದರರು ಸ್ವಾಧೀನಮಾಡಿಕೊಂಡು ಅವರೂ ನಿಮ್ಮಂತೆ ವಿಶ್ರಾಂತಿಹೊಂದಿದನಂತರ ಯೆಹೋವನ ಸೇವಕನಾದ ಮೋಶೆಯು ನಿಮಗೆ ಯೊರ್ದನ್ ಹೊಳೆಯ ಪೂರ್ವದಿಕ್ಕಿನಲ್ಲಿ ಸ್ವಾಸ್ತ್ಯವಾಗಿ ಕೊಟ್ಟ ದೇಶಕ್ಕೆ ತಿರಿಗಿ ಬಂದು ಅದನ್ನು ಅನುಭವಿಸಬಹುದು ಎಂಬದೇ.


ಜನಾಂಗಗಳನ್ನು ಅವರ ಮುಂಗಡೆಯಿಂದ ಓಡಿಸಿಬಿಟ್ಟು ಅವರ ದೇಶವನ್ನು ಇಸ್ರಾಯೇಲ್ ಗೋತ್ರಗಳಿಗೆ ಸ್ವಾಸ್ತ್ಯವಾಗಿರುವಂತೆ ಹಂಚಿಕೊಟ್ಟು ಆ ಜನಾಂಗಗಳ ಬೀಡಾರಗಳಲ್ಲಿ ಅವರನ್ನು ನೆಲೆಗೊಳಿಸಿದನು.


ತುಸು ಹೊತ್ತಾದ ಮೇಲೆ ಈ ವರ್ತಮಾನವು ದಾವೀದನಗೆ ಮುಟ್ಟಿತು. ಆಗ ಅವನು - ನೇರನ ಮಗನಾದ ಅಬ್ನೇರನ ವಧೆಯಲ್ಲಿ ನಾನೂ ನನ್ನ ರಾಜ್ಯವೂ ಯೆಹೋವನ ಮುಂದೆ ಸದಾ ನಿರ್ದೋಷಿಗಳು.


ದೇಶವೆಲ್ಲಾ ವಶವಾದ ಮೇಲೆ ಇಸ್ರಾಯೇಲ್ ಸಮೂಹದ ಎಲ್ಲಾ ಜನರೂ ಶೀಲೋವಿನಲ್ಲಿ ಕೂಡಿ ಬಂದು ದೇವದರ್ಶನದ ಗುಡಾರವನ್ನು ನಿಲ್ಲಿಸಿದರು.


ಯೆಹೋವನು ಮೋಶೆಯ ಮೂಲಕ ವಾಗ್ದಾನ ಮಾಡಿದ್ದ ಪ್ರದೇಶವನ್ನೆಲ್ಲಾ ಯೆಹೋಶುವನು ಹಿಡಿದುಕೊಂಡು ಇಸ್ರಾಯೇಲ್ ಕುಲಭಾಗಗಳಿಗನುಸಾರವಾಗಿ ಹಂಚಿಕೊಟ್ಟನು. ಯುದ್ಧವು ನಿಂತು ದೇಶದಲ್ಲೆಲ್ಲಾ ಸಮಾಧಾನವುಂಟಾಯಿತು.


ಇಸ್ರಾಯೇಲ್ ದೇವರಾದ ಯೆಹೋವನು ಅವರ ಪಕ್ಷದಲ್ಲಿ ಯುದ್ಧಮಾಡಿದ್ದರಿಂದ ಯೆಹೋಶುವನು ಈ ಎಲ್ಲಾ ರಾಜರನ್ನೂ ರಾಜ್ಯಗಳನ್ನೂ ಏಕಕಾಲದಲ್ಲಿಯೇ ವಶಮಾಡಿಕೊಂಡನು.


ಯೆಹೋವನು ಅದನ್ನೂ ಅದರ ಅರಸನನ್ನೂ ಇಸ್ರಾಯೇಲ್ಯರ ಕೈಗೆ ಕೊಟ್ಟನು. ಅವರು ಅದರಲ್ಲಿದ್ದ ಜನರಲ್ಲಿ ಒಬ್ಬನನ್ನೂ ಉಳಿಸದೆ ಎಲ್ಲರನ್ನೂ ಕತ್ತಿಯಿಂದ ಸಂಹರಿಸಿದರು. ಯೆರಿಕೋವಿನ ಅರಸನಿಗಾದ ಗತಿಯೇ ಇದರ ಅರಸನಿಗೂ ಆಯಿತು.


ಅವರಲ್ಲಿ ಯಾರಾದರೂ ಮನೆಬಿಟ್ಟು ಬೀದಿಗೆ ಬಂದರೆ ರಕ್ತಾಪರಾಧವು ಅವರ ತಲೆಯ ಮೇಲೆಯೇ ಇರುವದು; ನಾವು ನಿರ್ದೋಷಿಗಳು. ಆದರೆ ನಿನ್ನೊಡನೆ ಮನೆಯಲ್ಲಿದ್ದವರ ಮೇಲೆ ಕೈ ಹಾಕುವದಾದರೆ ಆ ರಕ್ತಾಪರಾಧವು ನಮ್ಮ ತಲೆಯ ಮೇಲಿರುವದು;


ನಿಮಗೆ ಸ್ವದೇಶವಾಗಿರುವದಕ್ಕೋಸ್ಕರ ನಾನು ಕೊಡುವ ಕಾನಾನ್ ದೇಶಕ್ಕೆ ನೀವು ಬಂದ ನಂತರ ಆ ದೇಶದ ಯಾವ ಮನೆಯ ಗೋಡೆಗಳಲ್ಲಿ ನಾನು ಕುಷ್ಠದ ಗುರುತನ್ನು ಉಂಟುಮಾಡುವೆನೋ


ಯೊರ್ದನ್ ಹೊಳೆಯ ಆಚೆಗೆ ಹೋಗಿ ಯೆಹೋವನು ತನ್ನ ವೈರಿಗಳನ್ನು ಹೊರಡಿಸಿಬಿಟ್ಟು ಆ ದೇಶವನ್ನು ಸ್ವಾಧೀನಮಾಡಿಕೊಳ್ಳುವ ತನಕ ಆತನ ಮುಂದೆ ಯುದ್ಧಮಾಡುವದಾದರೆ


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು