Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅರಣ್ಯಕಾಂಡ 32:3 - ಕನ್ನಡ ಸತ್ಯವೇದವು J.V. (BSI)

3 ಯೆಹೋವನು ಇಸ್ರಾಯೇಲ್ಯರಿಗೆ ಅಧೀನಪಡಿಸಿದ ಈ ಪ್ರದೇಶವು ಅಂದರೆ ಅಟಾರೋತ್, ದೀಬೋನ್, ಯಗ್ಜೇರ್, ನಿಮ್ರಾ, ಹೆಷ್ಬೋನ್, ಎಲೆಯಾಲೆ, ಸೆಬಾಮ್, ನೆಬೋ, ಬೆಯೋನ್ ಎಂಬ ಪಟ್ಟಣಗಳ ಪ್ರದೇಶವು ದನಕುರಿಗಳ ಮೇವಿಗೆ ತಕ್ಕ ಪ್ರದೇಶ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 “ಅಟಾರೋತ್, ದೀಬೋನ್, ಯಗ್ಜೇರ್, ನಿಮ್ರಾ, ಹೆಷ್ಬೋನ್, ಎಲೆಯಾಲೆ, ಸೆಬಾಮ್, ನೆಬೋ, ಬೆಯೋನ್,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

3 ಸರ್ವೇಶ್ವರ ಸ್ವಾಮಿ ಇಸ್ರಯೇಲರಿಗೆ ಅಧೀನಪಡಿಸಿರುವ ಈ ಪ್ರದೇಶ, ಅಂದರೆ ಅಟಾರೋತ್, ದೀಬೋನ್, ಯಗ್ಜೇರ್, ನಿಮ್ರಾ, ಹೆಷ್ಬೋನ್, ಎಲೆಯಾಲೆ, ಸೆಬಾಮ್, ನೆಬೋ, ಬಿಯೋನ್ ಎಂಬ ಪಟ್ಟಣಗಳನ್ನು ಒಳಗೊಂಡ ಈ ಪ್ರದೇಶ ದನಕುರಿಗಳ ಮೇವಿಗೆ ಹುಲುಸಾದ ಪ್ರದೇಶ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

3-4 “ಯೆಹೋವನು ಇಸ್ರೇಲರಿಗೆ ಅಧೀನಪಡಿಸಿದ ಈ ಪ್ರದೇಶವು ಅಂದರೆ, ಅಟಾರೋತ್, ದೀಬೋನ್, ಯಗ್ಜೇರ್, ನಿಮ್ರಾ, ಹೆಷ್ಬೋನ್, ಎಲೆಯಾಲೆ, ಸೆಬಾಮ್, ನೆಬೋ, ಬೆಯೋನ್ ಎಂಬ ಪಟ್ಟಣಗಳ ಪ್ರದೇಶವು ಪಶುಗಳ ಮೇವಿಗೆ ಒಳ್ಳೆಯ ಸ್ಥಳವಾಗಿದೆ. ನಿಮ್ಮ ದಾಸರಾದ ನಮಗೆ ಬಹಳ ಪಶುಗಳು ಇವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

3 “ಅಟಾರೋತ್, ದೀಬೋನ್, ಯಜ್ಜೇರ್, ನಿಮ್ರಾ, ಹೆಷ್ಬೋನ್, ಎಲೆಯಾಲೆ, ಸೆಬಾಮ್, ನೆಬೋ, ಬೆಯೋನ್ ಎಂಬವುಗಳು,

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅರಣ್ಯಕಾಂಡ 32:3
22 ತಿಳಿವುಗಳ ಹೋಲಿಕೆ  

ಹೆಷ್ಬೋನಿನಿಂದ ಎಲೆಯಾಲೆಯ ಮತ್ತು ಯಹಚಿನವರೆಗೆ ಅರಿಚಿಕೊಳ್ಳುತ್ತಾರೆ. ಚೋಯರಿನಿಂದ ಹೊರೊನಯಿವಿುನ ಮತ್ತು ಎಗ್ಲತ್ ಶೆಲಿಶೀಯದವರೆಗೆ ಕಿರಿಚಿಕೊಳ್ಳುತ್ತಾರೆ; ನಿಮ್ರೀಮ್ ಹಳ್ಳವೂ ಹಾಳಾಗಿದೆ.


ಮೇದೆಬದ ತಪ್ಪಲಸೀಮೆಗೆ ಸೇರಿದ ಹೆಷ್ಬೋನ್ ಪಟ್ಟಣವೂ ಅದೇ ಎತ್ತರವಾದ ಬೈಲಿನಲ್ಲಿರುವ ದೀಬೋನ್, ಬಾಮೋತ್‍ಬಾಳ್, ಬೇತ್ಬಾಳ್ಮೆಯೋನ್,


ಪಲಾಯನವಾದವರು ಬಲಗುಂದಿದವರಾಗಿ ಹೆಷ್ಬೋನಿನ ನೆರಳಿನಲ್ಲಿ ನಿಂತಿದ್ದಾರೆ; ಆದರೆ ಸೀಹೋನನ ರಾಜ್ಯಕ್ಕೆ ಸೇರಿದ ಹೆಷ್ಬೋನಿನಿಂದಲೂ ಅಗ್ನಿಜ್ವಾಲೆ ಹೊರಟು ಮೋವಾಬಿನ ಕೆನ್ನೆಯನ್ನೂ ಯುದ್ಧವೀರರ ನೆತ್ತಿಯನ್ನೂ ನುಂಗಿಬಿಟ್ಟಿದೆ.


ಸಿಬ್ಮದ ದ್ರಾಕ್ಷಾಲತೆಯೇ, ಯಜ್ಜೇರಿನ ನಿವಿುತ್ತ ಅಳುವದಕ್ಕಿಂತಲೂ ನಿನ್ನನ್ನು ಕಂಡು ಹೆಚ್ಚಾಗಿ ಅಳುವೆನು; ನಿನ್ನ ಶಾಖೆಗಳು ಸಮುದ್ರದಾಚೆಗೂ ಯಜ್ಜೇರಿನ ಸರೋವರದವರೆಗೂ ವ್ಯಾಪಿಸಿದ್ದವಲ್ಲಾ; ಈಗ ನಿನ್ನ ಹಣ್ಣುಹಂಪಲ ಮೇಲೆಯೂ ದ್ರಾಕ್ಷೆಯ ಸುಗ್ಗಿಯ ಮೇಲೆಯೂ ಸೂರೆಗಾರನು ಬಿದ್ದಿದ್ದಾನೆ.


ಮೋವಾಬಿನ ಕೀರ್ತಿಯು ಮಾಯವಾಯಿತು; ಶತ್ರುಗಳು ಹೆಷ್ಬೋನಿನಲ್ಲಿ ದೇಶಕ್ಕೆ ಕೇಡನ್ನು ಕಲ್ಪಿಸಿ - ಮೋವಾಬು ಇನ್ನು ಜನಾಂಗವೆನಿಸಿಕೊಳ್ಳದಂತೆ ಅದನ್ನು ನಿರ್ಮೂಲಮಾಡೋಣ ಬನ್ನಿರಿ ಎಂದು ಆಲೋಚಿಸಿಕೊಂಡಿದ್ದಾರೆ. ಮದ್ಮೆನೇ, ನೀನು ಸಹ ಸುಮ್ಮನಾಗುವಿ; ಖಡ್ಗವು ನಿನ್ನನ್ನು ಹಿಂದಟ್ಟುವದು.


ನಿಮ್ರೀಮ್ ಹೊಳೆಯು ಹಾಳಾಯಿತು, ಹಸಿಹುಲ್ಲು ಬಾಡಿತು, ಮೇವು ತೀರಿತು, ಯಾವ ಹಸುರೂ ಇಲ್ಲ.


ರಾಜ್ಯಜನಾಂಗಗಳನ್ನು ಅವರಿಗೆ ವಶಪಡಿಸಿ ಆ ರಾಜ್ಯಗಳನ್ನು ಅವರಿಗೆ ಸ್ವಾಸ್ತ್ಯವನ್ನಾಗಿ ಹಂಚಿಕೊಟ್ಟಿ. ಹೀಗೆ ಅವರು ಹೆಷ್ಬೋನಿನ ಅರಸನಾದ ಸೀಹೋನ್, ಬಾಷಾನಿನ ಅರಸನಾದ ಓಗ್ ಇವರ ಪ್ರಾಂತಗಳನ್ನು ಸ್ವಾಧೀನಪಡಿಸಿಕೊಂಡರು.


ಇಸ್ರಾಯೇಲ್ಯರು ಮುನ್ನೂರು ವರುಷಗಳಿಂದ ಹೆಷ್ಬೋನ್, ಅರೋಯೇರ್ ಎಂಬ ಪಟ್ಟಣಗಳಲ್ಲಿಯೂ ಅವುಗಳ ಗ್ರಾಮಗಳಲ್ಲಿಯೂ ಅರ್ನೋನ್ ತೀರದ ಎಲ್ಲಾ ಪಟ್ಟಣಗಳಲ್ಲಿಯೂ ವಾಸಿಸುತ್ತಿದ್ದಾರಲ್ಲಾ; ಇಷ್ಟು ದಿವಸಗಳವರೆಗೆ ನೀನು ಅದನ್ನು ಬಿಡಿಸಿಕೊಳ್ಳದೆ ಇದ್ದದ್ದೇಕೆ?


ಕಿರ್ಯಾತಯಿಮ್, ಸಿಬ್ಮಾ ಎಂಬ ಹೆಷ್ಬೋನಿನ ಉಪಗ್ರಾಮಗಳೂ ತಗ್ಗಿನಲ್ಲಿರುವ ಬೆಟ್ಟದ ಮೇಲಿನ ಚೆರೆತ್ ಶಹರ್,


ರೂಬೇನ್ ಕುಲದವರಿಗೂ ಗಾದ್ ಕುಲದವರಿಗೂ ಬಹಳ ದನಕುರಿಗಳಿದ್ದವು. ಅವರು ಯಗ್ಜೇರ್, ಗಿಲ್ಯಾದ್ ಎಂಬ ಪ್ರದೇಶಗಳನ್ನು ನೋಡಿದಾಗ ಅವು ದನಕುರಿಗಳ ಮೇವಿಗೆ ತಕ್ಕ ಸ್ಥಳವೆಂದು ತಿಳಿದುಕೊಂಡು


ಸೀಹೋನನ ಪಟ್ಟಣವಾದ ಹೆಷ್ಬೋನಿನಿಂದ ಅಗ್ನಿಜ್ವಾಲೆಹೊರಟು ಮೋವಾಬ್ಯರ ರಾಜಧಾನಿಯಾದ ಆರ್ ಎಂಬಪಟ್ಟಣವನ್ನೂ ಅರ್ನೋನ್ ಹೊಳೆಯ ಬಳಿಯಲ್ಲಿರುವ ಪೂಜಾಸ್ಥಳಗಳ ದೇವತೆಗಳನ್ನೂ ದಹಿಸಿಬಿಟ್ಟಿತು.


ನಾವು ಅವರನ್ನು ಬಾಣದಿಂದ ಹೊಡೆದೆವು; ಹೆಷ್ಬೋನಿನಿಂದ ದೀಬೋನಿನವರೆಗೂ ಎಲ್ಲಾ ನಾಶವಾಯಿತು. ಮೇದೆಬಾ ಊರಿನ ನೆರೆಯಲ್ಲಿರುವ ನೋಫಹದ ತನಕ ಹಾಳುಮಾಡಿ ಬಿಟ್ಟೆವು ಎಂಬದೇ.


ಅದಲ್ಲದೆ ಮೋಶೆ ಗೂಢಚಾರರ ಮೂಲಕ ಯಗ್ಜೇರನ್ನು ಪರೀಕ್ಷಿಸಿದ ಮೇಲೆ ಇಸ್ರಾಯೇಲ್ಯರು ಅದರ ಗ್ರಾಮಗಳನ್ನು ವಶಪಡಿಸಿಕೊಂಡು ಅಲ್ಲಿದ್ದ ಅಮೋರಿಯರನ್ನು ಹೊರಡಿಸಿಬಿಟ್ಟರು.


ಮೋಶೆ ಮತ್ತು ಮಹಾಯಾಜಕ ಎಲ್ಲಾಜಾರ್ ಇವರ ಬಳಿಗೂ ಸಮೂಹದ ಪ್ರಧಾನರ ಬಳಿಗೂ ಬಂದು -


ಮೋವಾಬನ್ನು ಕುರಿತದ್ದು. ಇಸ್ರಾಯೇಲಿನ ದೇವರೂ ಸೇನಾಧೀಶ್ವರನೂ ಆದ ಯೆಹೋವನು ಇಂತೆನ್ನುತ್ತಾನೆ - ಅಯ್ಯೋ, ನೆಬೋಊರಿನ ಗತಿಯನ್ನು ಏನು ಹೇಳಲಿ! ಅದು ಹಾಳಾಯಿತು; ಕಿರ್ಯಾತಯಿಮು ಶತ್ರುವಿನ ಕೈಗೆ ಸಿಕ್ಕಿ ಮಾನಭಂಗಹೊಂದಿದೆ, ವಿುಸ್ಗಾಬ್ ಕೆಡವಲ್ಪಟ್ಟು ಅವಮಾನಕ್ಕೆ ಗುರಿಯಾಗಿದೆ.


ಇಗೋ, ದೇಶಭೂಷಣಗಳಾದ ಮೋವಾಬಿನ ಗಡಿಯ ಪಟ್ಟಣಗಳು ಅಂದರೆ ಬೇತ್‍ಯೆಷೀಮೋತ್ ಬಾಳ್‍ಮೆಯೋನ್, ಕಿರ್ಯಾಥಯಿಮ್ ಎಂಬ ಪಟ್ಟಣಗಳು ಇರುವ ಕಡೆಯಲ್ಲಿ ನಾನು ಮೋವಾಬಿನ ಮೇರೆಯನ್ನು ಒಡೆದುಬಿಟ್ಟು


ಮಹನಯಿಮ್, ಹೆಷ್ಬೋನ್, ಯಗ್ಜೇರ್ ಎಂಬ ಗೋಮಾಳ ಸಹಿತವಾದ ನಾಲ್ಕು ಪಟ್ಟಣಗಳೂ ಸಿಕ್ಕಿದವು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು