Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅರಣ್ಯಕಾಂಡ 32:33 - ಕನ್ನಡ ಸತ್ಯವೇದವು J.V. (BSI)

33 ಹೀಗೆ ಮೋಶೆಯು ಗಾದ್ಯರಿಗೂ ರೂಬೇನ್ಯರಿಗೂ ಯೋಸೇಫನ ಮಗನಾದ ಮನಸ್ಸೆಯ ಕುಲದವರಲ್ಲಿ ಅರ್ಧಜನರಿಗೂ ಅಮೋರಿಯರ ಅರಸನಾದ ಸೀಹೋನನ ರಾಜ್ಯವನ್ನೂ ಬಾಷಾನಿನ ಅರಸನಾದ ಓಗನ ರಾಜ್ಯವನ್ನೂ ಇವುಗಳ ಎಲ್ಲಾ ಊರುಗಳನ್ನೂ ಆ ಊರುಗಳಿಗೆ ಸೇರಿದ ಭೂವಿುಗಳನ್ನೂ ಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

33 ಹೀಗೆ ಮೋಶೆಯು ಗಾದ್ಯರಿಗೂ, ರೂಬೇನ್ಯರಿಗೂ, ಯೋಸೇಫನ ಮಗನಾದ ಮನಸ್ಸೆಯ ಕುಲದವರಲ್ಲಿ ಅರ್ಧಜನರಿಗೂ, ಅಮೋರಿಯರ ಅರಸನಾದ ಸೀಹೋನನ ರಾಜ್ಯವನ್ನೂ, ಬಾಷಾನಿನ ಅರಸನಾದ ಓಗನ ರಾಜ್ಯವನ್ನೂ, ಅವುಗಳ ಎಲ್ಲಾ ಊರುಗಳನ್ನೂ ಮತ್ತು ಆ ಊರುಗಳಿಗೆ ಸೇರಿದ ಭೂಮಿಗಳನ್ನೂ ಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

33 ಹೀಗೆ ಮೋಶೆ ಗಾದ್ಯರಿಗು, ರೂಬೇನ್ಯರಿಗು, ಹಾಗು ಜೋಸೆಫನ ಮಗನಾದ ಮನಸ್ಸೆಯ ಕುಲದ ಅರ್ಧ ಜನರಿಗು ಅಮೋರಿಯರ ಅರಸನಾದ ಸೀಹೋನನ ರಾಜ್ಯವನ್ನು, ಬಾಷಾನಿನ ಅರಸನಾದ ಓಗನ ರಾಜ್ಯವನ್ನು, ಅವುಗಳ ಎಲ್ಲ ಊರುಗಳನ್ನು ಮತ್ತು ಆ ಊರುಗಳಿಗೆ ಸೇರಿದ ಎಲ್ಲ ಭೂಮಿಗಳನ್ನು ಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

33 ಆಗ ಮೋಶೆಯು ಗಾದ್ ಮತ್ತು ರೂಬೇನ್ ಕುಲಗಳವರಿಗೆ ಮತ್ತು ಯೋಸೇಫನ ಮಗನಾದ ಮನಸ್ಸೆಯ ಅರ್ಧಕುಲದವರಿಗೆ ಅಮೋರಿಯರ ರಾಜನಾದ ಸೀಹೋನನ ರಾಜ್ಯವನ್ನೂ ಬಾಷಾನಿನ ರಾಜನಾದ ಓಗನ ರಾಜ್ಯವನ್ನೂ ಅವುಗಳ ಎಲ್ಲಾ ಊರುಗಳನ್ನೂ ಆ ಊರುಗಳಿಗೆ ಸೇರಿದ ಭೂಮಿಗಳನ್ನೂ ಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

33 ಹಾಗೆಯೇ ಮೋಶೆಯು ಗಾದನ ಮಕ್ಕಳಿಗೂ, ರೂಬೇನನ ಮಕ್ಕಳಿಗೂ, ಯೋಸೇಫನ ಮಗನಾದ ಮನಸ್ಸೆಯ ಅರ್ಧ ಗೋತ್ರಕ್ಕೂ, ಅಮೋರಿಯರ ಅರಸನಾದ ಸೀಹೋನನ ರಾಜ್ಯವನ್ನೂ, ಅರಸನಾದ ಓಗನ ರಾಜ್ಯವನ್ನೂ, ಬಾಷಾನಿನ ಅರಸನಾದ ಓಗನ ರಾಜ್ಯವನ್ನೂ, ಅದರ ಭೂಮಿಯನ್ನೂ, ಅದರ ಮೇರೆಗಳಲ್ಲಿ ಸುತ್ತಮುತ್ತಲ ಪಟ್ಟಣಗಳನ್ನೂ ಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅರಣ್ಯಕಾಂಡ 32:33
21 ತಿಳಿವುಗಳ ಹೋಲಿಕೆ  

ಯೆಹೋವನ ಸೇವಕನಾದ ಮೋಶೆಯು ಇಸ್ರಾಯೇಲ್ಯರ ಸಹಿತವಾಗಿ ಆ ಇಬ್ಬರನ್ನೂ ಸೋಲಿಸಿ ಅವರ ರಾಜ್ಯಗಳನ್ನು ರೂಬೇನ್ಯರಿಗೂ ಗಾದ್ಯರಿಗೂ ಮನಸ್ಸೆಕುಲದ ಅರ್ಧ ಜನರಿಗೂ ಸ್ವಾಸ್ತ್ಯವಾಗಿ ಕೊಟ್ಟನು.


ಈಗ ನಿಮ್ಮ ದೇವರಾದ ಯೆಹೋವನು ತನ್ನ ವಾಗ್ದಾನಕ್ಕನುಸಾರವಾಗಿ ನಿಮ್ಮ ಸಹೋದರರಿಗೆ ವಿಶ್ರಾಂತಿಯನ್ನು ದಯಪಾಲಿಸಿದ್ದದರಿಂದ ಆತನ ಸೇವಕನಾದ ಮೋಶೆಯು ಯೊರ್ದನಿನ ಆಚೆಯಲ್ಲಿ ನಿಮಗೆ ಕೊಟ್ಟ ಸ್ವಾಸ್ತ್ಯದಲ್ಲಿರುವ ನಿಮ್ಮ ನಿಮ್ಮ ನಿವಾಸಗಳಿಗೆ ಹೋಗಬಹುದು.


ನಾವು ಅವರನ್ನು ಸೋಲಿಸಿ ಅವರ ರಾಜ್ಯಗಳನ್ನು ಸ್ವಾಧೀನಮಾಡಿಕೊಂಡು ರೂಬೇನ್ಯರಿಗೂ ಗಾದ್ಯರಿಗೂ ಮನಸ್ಸೆ ಕುಲದವರಲ್ಲಿ ಅರ್ಧ ಜನರಿಗೂ ಸ್ವಾಸ್ತ್ಯವಾಗಿ ಕೊಟ್ಟೆವಷ್ಟೆ.


ಶ್ರೀಮಂತರೂ ಕುಟುಂಬ ಪ್ರಧಾನರೂ ಆದ ಅವನ ಗೋತ್ರಬಂಧುಗಳು ಎರಡು ಸಾವಿರದ ಏಳು ನೂರು ಮಂದಿ. ಅರಸನಾದ ದಾವೀದನು ರೂಬೇನ್ ಗಾದ್ ಅರ್ಧಮನಸ್ಸೆ ಕುಲಗಳವರ ಮೇಲೆ ಇವರನ್ನೇ ದೈವಿಕಕಾರ್ಯಗಳಲ್ಲಿಯೂ ರಾಜಕೀಯಕಾರ್ಯಗಳಲ್ಲಿಯೂ ಅಧಿಕಾರಿಗಳನ್ನಾಗಿ ನೇವಿುಸಿದನು.


ಮನಸ್ಸೆಯ ಅರ್ಧಕುಲದಿಂದ ದಾವೀದನ ಪಟ್ಟಾಭಿಷೇಕಕ್ಕೆ ಹೋಗಬೇಕೆಂದು ಹೆಸರುಹೆಸರಾಗಿ ನೇವಿುಸಲ್ಪಟ್ಟ ಹದಿನೆಂಟು ಸಾವಿರ ಮಂದಿ;


ರೂಬೇನ್ಯರು, ಗಾದ್ಯರು, ಮನಸ್ಸೆಕುಲದ ಅರ್ಧ ಜನರು ಇವರಲ್ಲಿ ರಣವೀರರೂ ಗುರಾಣಿ ಖಡ್ಗಗಳನ್ನು ಹಿಡಿಯುವವರೂ ಬಿಲ್ಲನ್ನು ಬೊಗ್ಗಿಸುವವರೂ ಯುದ್ಧನಿಪುಣರೂ ಆಗಿರುವ ನಾಲ್ವತ್ತನಾಲ್ಕು ಸಾವಿರದ ಏಳುನೂರ ಅರುವತ್ತು ಮಂದಿ ಸೈನಿಕರು ಹೋಗಿ


ಬೇರೆ ಎರಡುವರೆ ಕುಲಗಳವರು ಅಂದರೆ ರೂಬೇನ್ಯರ ಕುಟುಂಬಗಳೂ ಗಾದ್ಯರ ಕುಟುಂಬಗಳೂ ಮನಸ್ಸೆ ಕುಲದವರಲ್ಲಿ ಅರ್ಧಜನರೂ ಯೊರ್ದನ್ ಹೊಳೆಯ ಈಚೆ ಯೆರಿಕೋ ಪಟ್ಟಣಕ್ಕೆ ಪೂರ್ವದಿಕ್ಕಿನಲ್ಲಿ ಸ್ವಾಸ್ತ್ಯವನ್ನು ಹೊಂದಿದ್ದಾರಷ್ಟೆ ಎಂದು ಅಪ್ಪಣೆಕೊಟ್ಟನು.


ರೂಬೇನ್ ಕುಲದವರಿಗೂ ಗಾದ್ ಕುಲದವರಿಗೂ ಬಹಳ ದನಕುರಿಗಳಿದ್ದವು. ಅವರು ಯಗ್ಜೇರ್, ಗಿಲ್ಯಾದ್ ಎಂಬ ಪ್ರದೇಶಗಳನ್ನು ನೋಡಿದಾಗ ಅವು ದನಕುರಿಗಳ ಮೇವಿಗೆ ತಕ್ಕ ಸ್ಥಳವೆಂದು ತಿಳಿದುಕೊಂಡು


ನಾವು ಯೇಹೋವನ ಮುಂದೆ ಯುದ್ಧಸನ್ನದ್ಧರಾಗಿ ಕಾನಾನ್ ದೇಶಕ್ಕೆ ಹೊರಡುವೆವು; ಆಗ ಯೊರ್ದನ್ ಹೊಳೆಯ ಈಚೆಯೇ ನಮಗೆ ಸ್ವಾಸ್ತ್ಯವು ದೊರಕಬೇಕು ಅಂದರು.


ಇಸ್ರಾಯೇಲ್ಯರು ಯೊರ್ದನ್ ಹೊಳೆಯ ಪೂರ್ವದಿಕ್ಕಿನಲ್ಲಿ ಅರ್ನೋನ್ ತಗ್ಗು ಮೊದಲುಗೊಂಡು ಹೆರ್ಮೋನ್ ಪರ್ವತದವರೆಗಿದ್ದ ಪ್ರದೇಶವನ್ನೂ ತಗ್ಗಾದ ಪ್ರದೇಶದ ಪೂರ್ವಭಾಗವನ್ನೂ ಸ್ವಾಧೀನ ಮಾಡಿಕೊಂಡು ಅವುಗಳಲ್ಲಿದ್ದ ಅರಸರನ್ನು ಸಂಹರಿಸಿದರು.


ಉಳಿದ ಎರಡುವರೆ ಕುಲಗಳ ಜನರಿಗೆ ಯೊರ್ದನಿನ ಆಚೆಯಲ್ಲಿ ಮೋಶೆಯೇ ಸ್ವಾಸ್ತ್ಯವನ್ನು ಕೊಟ್ಟಿದ್ದನು.


ಅವರು ತಮ್ಮ ನಿವಾಸಗಳಿಗೆ ಹೋದರು. (ಮೋಶೆಯು ಮನಸ್ಸೆಕುಲದ ಅರ್ಧಜನರಿಗೆ ಬಾಷಾನಿನಲ್ಲಿ ಸ್ವಾಸ್ತ್ಯವನ್ನು ಕೊಟ್ಟಿದ್ದನು. ಉಳಿದ ಅರ್ಧಜನರಿಗೆ ಯೆಹೋಶುವನು ಯೊರ್ದನಿನ ಪಶ್ಚಿಮದಲ್ಲಿ ಬೇರೆ ಕುಲದವರೊಂದಿಗೆ ಪಾಲುಕೊಟ್ಟನು.) ಇದಲ್ಲದೆ ಯೆಹೋಶುವನು ಅವರನ್ನು ಆಶೀರ್ವದಿಸಿ ಸ್ವಸ್ಥಳಗಳಿಗೆ ಕಳುಹಿಸುವಾಗ ಅವರಿಗೆ -


ಕೆಲವರು ಯೊರ್ದನ್ ಹೊಳೆದಾಟಿ ಗಾದ್ಯರ ದೇಶಕ್ಕೂ ಗಿಲ್ಯಾದ್ ಪ್ರಾಂತಕ್ಕೂ ಹೊರಟು ಹೋದರು. ಸೌಲನು ಇನ್ನೂ ಗಿಲ್ಗಾಲಿನಲ್ಲೇ ಇದ್ದನು. ಅವನ ಸಂಗಡ ಇದ್ದವರು ಭಯದಿಂದ ನಡುಗುತ್ತಿದ್ದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು