Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅರಣ್ಯಕಾಂಡ 33:2 - ಕನ್ನಡ ಸತ್ಯವೇದವು J.V. (BSI)

2 ಮೋಶೆ ಯೊಹೋವನ ಅಪ್ಪಣೆಯನ್ನು ಹೊಂದಿ ಇಸ್ರಾಯೇಲ್ಯರು ಪ್ರಯಾಣಗಳಲ್ಲಿ ಇಳುಕೊಂಡ ಸ್ಥಳಗಳ ಹೆಸರುಗಳನ್ನು ಬರೆದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 ಮೋಶೆ ಯೆಹೋವನ ಅಪ್ಪಣೆಯ ಪ್ರಕಾರ ಇಸ್ರಾಯೇಲರ ಪ್ರಯಾಣಗಳ ವಿವರಗಳನ್ನು ಬರೆದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

2 ಇಸ್ರಯೇಲರು ತಮ್ಮ ಪ್ರಯಾಣಗಳಲ್ಲಿ ತಂಗಿದ್ದ ಸ್ಥಳಗಳ ಹೆಸರುಗಳನ್ನು ಮೋಶೆ ಸರ್ವೇಶ್ವರನ ಅಪ್ಪಣೆಯನ್ನು ಪಡೆದು ಬರೆದಿಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

2 ಮೋಶೆ ಯೆಹೋವನ ಅಪ್ಪಣೆಯನ್ನು ಹೊಂದಿ ಇಸ್ರೇಲರು ಪ್ರಯಾಣಗಳಲ್ಲಿ ಇಳಿದುಕೊಂಡ ಸ್ಥಳಗಳ ಹೆಸರುಗಳನ್ನು ಬರೆದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

2 ಮೋಶೆಯು ಯೆಹೋವ ದೇವರ ಆಜ್ಞೆಯ ಪ್ರಕಾರ ಅವರ ಪ್ರಯಾಣದಲ್ಲಿ ತಂಗಿದ್ದ ಸ್ಥಳಗಳ ವಿವರಗಳನ್ನು ಬರೆದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅರಣ್ಯಕಾಂಡ 33:2
8 ತಿಳಿವುಗಳ ಹೋಲಿಕೆ  

ತರುವಾಯ ಯೆಹೋವನು ನನಗೆ - ನೀನು ಈ ಜನರ ಮುಂದುಗಡೆಯಲ್ಲಿ ಹೊರಡು; ನಾನು ಅವರ ಪಿತೃಗಳಿಗೆ ಪ್ರಮಾಣಮಾಡಿಕೊಟ್ಟ ದೇಶವನ್ನು ಇವರು ಸೇರಿ ಸ್ವಾಧೀನಮಾಡಿಕೊಳ್ಳಲಿ ಎಂದು ಆಜ್ಞಾಪಿಸಿದನು.


[ಹೋರೇಬಿನಿಂದ ಸೇಯೀರ್ ಬೆಟ್ಟಗಳ ಮಾರ್ಗವಾಗಿ ಕಾದೇಶ್‍ಬರ್ನೇಯದವರೆಗೆ ಹನ್ನೊಂದು ದಿನದ ದಾರಿ.]


ಯೆಹೋವನು ಮೋಶೆಯ ಮೂಲಕ ಆಜ್ಞಾಪಿಸಿದ ರೀತಿಯಲ್ಲಿ ಅವರು ಪ್ರಯಾಣ ಮಾಡಿದ್ದು ಇದು ಮೊದಲನೆಯ ಸಾರಿ.


ಎರಡನೆಯ ಸಾರಿ ಆರ್ಭಟವಾಗಿ ಊದಿಸುವಾಗ ತೆಂಕಣ ದಿಕ್ಕಿನ ದಂಡುಗಳು ಹೊರಡಬೇಕು. ಹೀಗೆ ಪ್ರಯಾಣಹೊರಡಬೇಕಾದಾಗ ಆರ್ಭಟವಾಗಿಯೇ ಊದಿಸಬೇಕು.


ಆಗ ಯೆಹೋವನು ಮೋಶೆಗೆ - ಭೂವಿುಯ ಮೇಲೆ ಅಮಾಲೇಕ್ಯರ ಹೆಸರೇ ಇಲ್ಲದಂತೆ ಮಾಡುವೆನು; ಈ ಮಾತನ್ನು ಜ್ಞಾಪಕಾರ್ಥವಾಗಿ ಪುಸ್ತಕದಲ್ಲಿ ಬರೆ, ಮತ್ತು ಯೆಹೋಶುವನಿಗೆ ಮಂದಟ್ಟು ಮಾಡಿಕೊಡು ಎಂದು ಹೇಳಿದನು.


ಮೋಶೆ ಆರೋನರ ಕೈಕೆಳಗೆ ಐಗುಪ್ತದೇಶದೊಳಗಿಂದ ಸೈನ್ಯಸೈನ್ಯವಾಗಿ ಹೊರಟ ಇಸ್ರಾಯೇಲ್ಯರ ಪ್ರಯಾಣಗಳ ವಿವರ.


ಮೊದಲನೆಯ ತಿಂಗಳಿನ ಹದಿನೈದನೆಯ ದಿನದಲ್ಲಿ ಅಂದರೆ ಪಸ್ಕಹಬ್ಬದ ಮರುದಿನದಲ್ಲಿ ಇಸ್ರಾಯೇಲ್ಯರು ಐಗುಪ್ತ್ಯರ ಎದುರಿನಲ್ಲೇ ಅಟ್ಟಹಾಸದಿಂದ ರಮ್ಸೇಸಿನಿಂದ ಹೊರಟರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು