Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅರಣ್ಯಕಾಂಡ 33:4 - ಕನ್ನಡ ಸತ್ಯವೇದವು J.V. (BSI)

4 ಆ ಕಾಲದಲ್ಲಿ ಯೆಹೋವನು ಐಗುಪ್ತ್ಯರ ದೇವತೆಗಳನ್ನು ಶಿಕ್ಷಿಸಿ ಐಗುಪ್ತ್ಯರ ಚೊಚ್ಚಲುಮಕ್ಕಳನ್ನು ಸಂಹರಿಸಿದದರಿಂದ ಅವರು ಆ ಮಕ್ಕಳ ಶವಗಳನ್ನು ಸಮಾಧಿಮಾಡುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ಆ ಕಾಲದಲ್ಲಿ ಯೆಹೋವನು ಐಗುಪ್ತ್ಯರ ದೇವತೆಗಳನ್ನು ಶಿಕ್ಷಿಸಿ, ಐಗುಪ್ತ್ಯರ ಚೊಚ್ಚಲಮಕ್ಕಳನ್ನು ಸಂಹರಿಸಿದ್ದರಿಂದ ಅವರು ಆ ಮಕ್ಕಳ ಶವಗಳನ್ನು ಸಮಾಧಿಮಾಡುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

4 ಆ ಕಾಲದಲ್ಲಿ ಸರ್ವೇಶ್ವರ ಸ್ವಾಮಿ ಈಜಿಪ್ಟರ ದೇವತೆಗಳನ್ನು ದಂಡಿಸಿ ಈಜಿಪ್ಟರ ಚೊಚ್ಚಲು ಮಕ್ಕಳನ್ನು ಸಂಹರಿಸಿದ್ದರು. ಆ ಮಕ್ಕಳ ಶವಗಳನ್ನು ಸಮಾಧಿ ಮಾಡಲಾಗುತ್ತಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

4 ಈಜಿಪ್ಟಿನವರು ಯೆಹೋವನು ಕೊಂದುಹಾಕಿದ ತಮ್ಮ ಚೊಚ್ಚಲು ಮಕ್ಕಳನ್ನು ಹೂಳಿಡುತ್ತಿದ್ದರು. ಯೆಹೋವನು ಈಜಿಪ್ಟಿನ ದೇವರುಗಳನ್ನು ಶಿಕ್ಷಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

4 ಹೇಗೆಂದರೆ ಆ ಕಾಲದಲ್ಲಿ ಯೆಹೋವ ದೇವರು ಈಜಿಪ್ಟಿನವರ ಸಮಸ್ತ ಚೊಚ್ಚಲಿನವರನ್ನು ಹೊಡೆದು ಆ ಮಕ್ಕಳ ಶವಗಳನ್ನು ಹೂಣಿಟ್ಟರು, ಯೆಹೋವ ದೇವರು ಅವರ ದೇವರುಗಳಿಗೂ ಶಿಕ್ಷೆ ಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅರಣ್ಯಕಾಂಡ 33:4
8 ತಿಳಿವುಗಳ ಹೋಲಿಕೆ  

ಆ ರಾತ್ರಿ ನಾನು ಐಗುಪ್ತ ದೇಶದ ನಡುವೆ ಹಾದುಹೋಗಿ ಮನುಷ್ಯರಲ್ಲಾಗಲಿ ಪಶುಗಳಲ್ಲಾಗಲಿ ಚೊಚ್ಚಲಾಗಿರುವದನ್ನೆಲ್ಲಾ ಸಂಹರಿಸುವೆನು; ಐಗುಪ್ತ ದೇಶದ ಸಮಸ್ತ ದೇವತೆಗಳಿಗೂ ಶಿಕ್ಷೆಮಾಡುವೆನು; ನಾನು ಯೆಹೋವನು.


ಐಗುಪ್ತದ ವಿಷಯವಾದ ದೈವೋಕ್ತಿ. ಇಗೋ, ಯೆಹೋವನು ವೇಗಮೇಘವಾಹನನಾಗಿ ಐಗುಪ್ತಕ್ಕೆ ಬರುವನು; ಆತನು ಸಮ್ಮುಖನಾದಾಗ ಐಗುಪ್ತದ ವಿಗ್ರಹಗಳು ನಡುಗುವವು. ಐಗುಪ್ತ್ಯರ ಹೃದಯವು ತಮ್ಮೊಳಗೆ ಕರಗಿ ನೀರಾಗುವದು.


ಯೆಹೋವನು ಅವರಿಗೆ ಭಯಂಕರವಾಗುವನು; ಲೋಕದ ದೇವರುಗಳನ್ನೆಲ್ಲಾ ಕ್ಷಯಿಸಿಬಿಡುವನು; ಸಮಸ್ತ ಜನರು, ಅಂದರೆ ಸಮುದ್ರ ಪ್ರಾಂತದ ನಿವಾಸಿಗಳಾದ ಸಕಲ ಜನಾಂಗಗಳವರು ತಮ್ಮ ತಮ್ಮ ಸ್ಥಳಗಳಲ್ಲೇ ಆತನನ್ನು ಆರಾಧಿಸುವರು.


ಆತನು ತನ್ನ ಜನರನ್ನು ಅವರ ಕೈಯಿಂದ ಬಿಡಿಸಿ ಆ ಐಗುಪ್ತ್ಯರು ಯಾವ ವಿಷಯದಲ್ಲಿ ಗರ್ವಪಡುತ್ತಿದ್ದರೋ ಆ ವಿಷಯದಲ್ಲಿ ಅವರನ್ನು ತಗ್ಗಿಸಿದ್ದರಿಂದ ಯೆಹೋವನೇ ಎಲ್ಲಾ ದೇವರುಗಳಿಗಿಂತಲೂ ದೊಡ್ಡವನೆಂದು ಈಗ ತಿಳಿದುಕೊಂಡಿದ್ದೇನೆ ಅಂದನು.


ಆ ದೇಶದವರ ವೀರ್ಯಕ್ಕೆ ಪ್ರಥಮಫಲವಾಗಿದ್ದ ಚೊಚ್ಚಲ ಮಕ್ಕಳನ್ನು ಸಂಹರಿಸಿದನು.


ಇಸ್ರಾಯೇಲ್ಯರ ಚೊಚ್ಚಲಾದವರೆಲ್ಲರು ನನ್ನ ಸೊತ್ತಷ್ಟೆ; ಐಗುಪ್ತದೇಶದಲ್ಲಿದ್ದ ಚೊಚ್ಚಲಾದದ್ದನ್ನೆಲ್ಲಾ ನಾನು ಸಂಹಾರಮಾಡಿದಾಗ ಇಸ್ರಾಯೇಲ್ಯರಲ್ಲಿರುವ ಚೊಚ್ಚಲಾದ ಮನುಷ್ಯರನ್ನೂ ಪಶುಗಳನ್ನೂ ನನ್ನ ಸ್ವಂತಕ್ಕಾಗಿ ಪ್ರತಿಷ್ಠಿಸಿಕೊಂಡೆನಲ್ಲಾ; ಅವರು ನನ್ನವರೇ; ನಾನು ಯೆಹೋವನು ಎಂದು ಹೇಳಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು