Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅರಣ್ಯಕಾಂಡ 33:53 - ಕನ್ನಡ ಸತ್ಯವೇದವು J.V. (BSI)

53 ನಾನು ನಿಮಗೇ ಆ ದೇಶವನ್ನು ಸ್ವದೇಶವಾಗುವದಕ್ಕೆ ಕೊಟ್ಟದರಿಂದ ನೀವು ಅದನ್ನು ಸ್ವಾಧೀನಮಾಡಿಕೊಂಡು ಅದರಲ್ಲಿ ವಾಸಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

53 ನಾನು ನಿಮಗೆ ಆ ದೇಶವನ್ನು ಸ್ವದೇಶವಾಗುವುದಕ್ಕೆ ಕೊಟ್ಟದರಿಂದ ನೀವು ಅದನ್ನು ಸ್ವಾಧೀನಮಾಡಿಕೊಂಡು ಅದರಲ್ಲಿ ವಾಸಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

53 ನಾನು ಆ ನಾಡನ್ನು ನಿಮಗೆ ಸ್ವಂತ ನಾಡಾಗಲೆಂದು ಕೊಟ್ಟಿದ್ದೇನೆ. ಆದ್ದರಿಂದ ಅದನ್ನು ಸ್ವಾಧೀನಮಾಡಿಕೊಂಡು ಅದರಲ್ಲೇ ವಾಸಮಾಡಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

53 ನಾನು ನಿಮಗೆ ಆ ದೇಶವನ್ನು ಸ್ವದೇಶವಾಗುವುದಕ್ಕೆ ಕೊಟ್ಟಿದ್ದೇನೆ. ನೀವು ಅದನ್ನು ಸ್ವಾಧೀನಮಾಡಿಕೊಂಡು ಅದರಲ್ಲಿ ವಾಸಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

53 ನೀವು ಆ ದೇಶವನ್ನು ತೆಗೆದುಕೊಂಡು ಅದರಲ್ಲಿ ವಾಸಮಾಡಿರಿ. ಏಕೆಂದರೆ ಅದನ್ನು ಸ್ವಾಧೀನಪಡಿಸಿಕೊಳ್ಳುವುದಕ್ಕೆ ಆ ದೇಶವನ್ನು ನಿಮಗೆ ಕೊಟ್ಟಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅರಣ್ಯಕಾಂಡ 33:53
16 ತಿಳಿವುಗಳ ಹೋಲಿಕೆ  

ನಿಮ್ಮ ದೇವರಾದ ಯೆಹೋವನು ನಿಮಗೆ ಕೊಡುವ ದೇಶವನ್ನು ಸ್ವಾಧೀನ ಮಾಡಿಕೊಳ್ಳುವದಕ್ಕೆ ನೀವು ಯೊರ್ದನ್ ಹೊಳೆಯನ್ನು ದಾಟುತ್ತೀರಲ್ಲಾ.


ಯೆಹೋವನು ಇಸ್ರಾಯೇಲ್ಯರ ಪೂರ್ವಿಕರಿಗೆ ಪ್ರಮಾಣಪೂರ್ವಕವಾಗಿ ವಾಗ್ದಾನ ಮಾಡಿದ ದೇಶವನ್ನು ಇಸ್ರಾಯೇಲ್ಯರಿಗೆ ಕೊಟ್ಟನು. ಅವರು ಅದನ್ನು ಸ್ವತಂತ್ರಿಸಿಕೊಂಡು ಅದರಲ್ಲಿ ವಾಸಮಾಡಿದರು.


ಪರಾತ್ಪರನಾದ ದೇವರು ಜನಾಂಗಗಳನ್ನು ಬೇರೆ ಬೇರೆ ಮಾಡಿ ಅವರವರಿಗೆ ಸ್ವದೇಶಗಳನ್ನು ನೇವಿುಸಿಕೊಟ್ಟಾಗ ಇಸ್ರಾಯೇಲ್ಯರ ಸಂಖ್ಯೆಗೆ ತಕ್ಕಂತೆ ಆಯಾ ಜನಾಂಗಕ್ಕೆ ಒಂದೊಂದು ಪ್ರದೇಶವನ್ನು ಗೊತ್ತು ಮಾಡಿದ್ದೂ;


ನನ್ನ ಬದುಕನ್ನು ನಾನು ಬೇಕಾದ ಹಾಗೆ ಮಾಡಬಹುದಲ್ಲವೋ? ನಾನು ಒಳ್ಳೆಯವನಾಗಿರುವದು ನಿನ್ನ ಕಣ್ಣನ್ನು ಒತ್ತುತ್ತದೋ ಎಂದು ಹೇಳಿದನು.


ರಾಜ್ಯವು ನಿನ್ನಿಂದ ತೊಲಗಿದೆ, ನೀನು ಮನುಷ್ಯರೊಳಗಿಂದ ತಳ್ಳಲ್ಪಟ್ಟು ಕಾಡುಮೃಗಗಳೊಂದಿಗೆ ವಾಸಿಸುವಿ, ದನಗಳಂತೆ ಹುಲ್ಲುಮೇಯುವದೇ ನಿನಗೆ ಗತಿಯಾಗುವದು; ಪರಾತ್ಪರನು ಮನುಷ್ಯರ ರಾಜ್ಯದಲ್ಲಿ ರಾಜನಾಗಿ ಅದನ್ನು ತನಗೆ ಬೇಕಾದವರಿಗೆ ಒಪ್ಪಿಸುತ್ತಾನೆ ಎಂಬದು ನಿನ್ನ ತಿಳುವಳಿಕೆಗೆ ಬರುವದರೊಳಗೆ ಏಳು ವರುಷ ನಿನಗೆ ಹೀಗೆ ಕಳೆಯುವದು ಎಂದು ಆಕಾಶವಾಣಿಯಾಯಿತು.


ನೀನು ಮನುಷ್ಯರೊಳಗಿಂದ ತಳ್ಳಲ್ಪಟ್ಟು ಕಾಡುಮೃಗಗಳೊಂದಿಗೆ ವಾಸಿಸುವಿ, ದನಗಳಂತೆ ಹುಲ್ಲು ಮೇಯುವದೇ ನಿನಗೆ ಗತಿಯಾಗುವದು, ಆಕಾಶದ ಇಬ್ಬನಿಯು ನಿನ್ನನ್ನು ತೋಯಿಸುವದು; ಪರಾತ್ಪರನು ಮನುಷ್ಯರ ರಾಜ್ಯದಲ್ಲಿ ರಾಜನಾಗಿ ಅದನ್ನು ತನಗೆ ಬೇಕಾದವರಿಗೆ ಒಪ್ಪಿಸುತ್ತಾನೆ ಎಂಬದು ನಿನಗೆ ತಿಳಿದುಬರುವದರೊಳಗೆ ಏಳು ವರುಷ ನಿನಗೆ ಹೀಗೆ ಕಳೆಯುವದು.


ಇದು ಅನಿವಿುಷರ ತೀರ್ಮಾನ, ದೇವರ ತೀರ್ಪು; ಪರಾತ್ಪರನು ಮನುಷ್ಯರ ರಾಜ್ಯದಲ್ಲಿ ರಾಜನಾಗಿ ಅದರ ಆಳಿಕೆಯನ್ನು ತನಗೆ ಬೇಕಾದವರಿಗೆ ಒಪ್ಪಿಸಿ ಕನಿಷ್ಠರನ್ನೂ ಅದರ ಮೇಲೆ ನೇವಿುಸುತ್ತಾನೆಂಬದು ಜೀವಂತರಿಗೆ ತಿಳಿದುಬರಬೇಕೆಂದೇ ಈ ತೀರ್ಮಾನವಾಯಿತು ಎಂದು ಸಾರಿದನು.


ಪರಲೋಕವು ಯೆಹೋವನದು; ಭೂಲೋಕವನ್ನು ನರಸಂತಾನಕ್ಕೆ ಕೊಟ್ಟಿದ್ದಾನೆ.


ಆ ಜನಗಳು ನಮಗಿಂತ ಹೆಚ್ಚು ಮಂದಿ; ಅವರನ್ನು ಹೊರಡಿಸುವದು ನಮ್ಮಿಂದ ಹೇಗಾದೀತು ಅಂದುಕೊಳ್ಳುತ್ತೀರೋ? ಅವರಿಗೆ ಹೆದರಬೇಡಿರಿ;


ನಿಮ್ಮ ದೇವರಾದ ಯೆಹೋವನು ನಿಮಗೆ ಕೊಡುವ ದೇಶವನ್ನು ನೀವು ಸೇರಿ ಸ್ವಾಧೀನ ಮಾಡಿಕೊಂಡು ಅದರಲ್ಲಿ ವಾಸವಾಗಿರುವಾಗ - ಸುತ್ತಲಿರುವ ಎಲ್ಲಾ ಜನಾಂಗಗಳಂತೆ ನಾವೂ ಅರಸನನ್ನು ನೇವಿುಸಿಕೊಳ್ಳೋಣ ಎಂದು ಹೇಳಿಕೊಳ್ಳುವ ಪಕ್ಷಕ್ಕೆ


ನಿಮ್ಮ ದೇವರಾದ ಯೆಹೋವನು ತಾನೇ ಅವರನ್ನು ನಿಮ್ಮ ಕಣ್ಣುಮುಂದೆ ಹೊರಡಿಸಿಬಿಡುವನು. ಆತನ ವಾಗ್ದಾನದಂತೆ ಅವರ ದೇಶವನ್ನು ನೀವು ಸ್ವತಂತ್ರಿಸಿಕೊಳ್ಳುವಿರಿ.


ಆಮೇಲೆ ಆತನು ಅವನಿಗೆ - ಈ ದೇಶದ ಬಾಧ್ಯತೆಯನ್ನು ನಿನಗೆ ಕೊಡುವದಕ್ಕೋಸ್ಕರ ನಿನ್ನನ್ನು ಊರ್ ಎಂಬ ಕಲ್ದೀಯರ ಪಟ್ಟಣದಿಂದ ಬರಮಾಡಿದ ಯೆಹೋವನೇ ನಾನು ಎಂದು ಹೇಳಲು ಅವನು -


ಆ ಕಾಲದಲ್ಲಿ ನಾನು ನಿಮಗೆ - ನಿಮ್ಮ ದೇವರಾದ ಯೆಹೋವನು ಈ ಪ್ರದೇಶವನ್ನೇ ನಿಮಗೆ ಸ್ವಾಸ್ತ್ಯಕ್ಕಾಗಿ ಕೊಟ್ಟಿದ್ದಾನೆ. ಆದರೆ ನಿಮ್ಮ ಭಟರೆಲ್ಲರೂ ಯುದ್ಧಸನ್ನದ್ಧರಾಗಿ ನಿಮ್ಮ ಸಹೋದರರಾದ ಇಸ್ರಾಯೇಲ್ಯರ ಮುಂದೆ ಹೊರಟು ಹೊಳೇ ದಾಟಿ ಹೋಗಬೇಕು.


ನಿನ್ನನ್ನು ಕೈಬಿಡುವದಿಲ್ಲ, ತೊರೆಯುವದಿಲ್ಲ. ಸ್ಥಿರಚಿತ್ತನಾಗಿರು, ಧೈರ್ಯದಿಂದಿರು. ಯಾಕಂದರೆ ನಾನು ಈ ಜನರ ಪಿತೃಗಳಿಗೆ ಪ್ರಮಾಣಮಾಡಿ ಕೊಟ್ಟ ದೇಶವನ್ನು ಇವರಿಗೆ ನೀನೇ ಸ್ವಾಧೀನಪಡಿಸಬೇಕು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು