ಅರಣ್ಯಕಾಂಡ 33:55 - ಕನ್ನಡ ಸತ್ಯವೇದವು J.V. (BSI)55 ನೀವು ದೇಶದ ನಿವಾಸಿಗಳನ್ನು ಹೊರಡಿಸಿಬಿಡದೆ ಹೋದರೆ ಅವರಲ್ಲಿ ನೀವು ಉಳಿಸಿದವರು ನಿಮಗೆ ಕಣ್ಣುಚುಚ್ಚುವ ಮುಳ್ಳುಗಳಂತೆಯೂ ಪಕ್ಕೆ ತಿವಿಯುವ ಶೂಲಗಳಂತೆಯೂ ಆಗಿ ನೀವು ವಾಸಿಸುವ ದೇಶದಲ್ಲಿ ನಿಮಗೆ ಕಂಟಕರಾಗಿರುವರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201955 ನೀವು ದೇಶದ ನಿವಾಸಿಗಳನ್ನು ಹೊರಡಿಸಿಬಿಡದೆ ಹೋದರೆ ಅವರಲ್ಲಿ ನೀವು ಉಳಿಸಿದವರು ನಿಮಗೆ ಕಣ್ಣುಚುಚ್ಚುವ ಮುಳ್ಳುಗಳಂತೆಯೂ, ಪಕ್ಕೆತಿವಿಯುವ ಶೂಲಗಳಂತೆಯೂ, ಆಗಿ ನೀವು ವಾಸಿಸುವ ದೇಶದಲ್ಲಿ ನಿಮಗೆ ಕಂಟಕರಾಗಿರುವರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)55 ನೀವು ಆ ನಾಡಿನ ನಿವಾಸಿಗಳನ್ನು ಹೊರಡಿಸದೆ ಹೋದರೆ ಅವರಲ್ಲಿ ನೀವು ಉಳಿಸಿದವರು ನಿಮಗೆ ಕಣ್ಣುಚುಚ್ಚುವ ಮುಳ್ಳುಗಳಂತೆ ಆಗುವರು; ಪಕ್ಕೆ ತಿವಿಯುವ ಶೂಲಗಳಂತೆ ಆಗುವರು; ನೀವು ವಾಸಿಸುವ ನಾಡಿನಲ್ಲಿ ನಿಮಗೆ ಕಂಠಕಪ್ರಾಯರಾಗುವರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್55 “ನೀವು ಆ ದೇಶದ ನಿವಾಸಿಗಳನ್ನು ಹೊರಡಿಸದೆ ಹೋದರೆ, ಅವರು ಉಳಿದುಕೊಂಡು ನಿಮ್ಮ ಕಣ್ಣುಗಳಲ್ಲಿ ಮರದ ಚೂರಿನಂತೆಯೂ ನಿಮ್ಮ ಪಕ್ಕೆಗಳಲ್ಲಿ ಮುಳ್ಳುಗಳಂತೆಯೂ ಇರುವರು. ನೀವು ವಾಸಿಸುವ ದೇಶದಲ್ಲಿ ನಿಮಗೆ ತೊಂದರೆ ಮಾಡುವರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ55 “ ‘ಆದರೆ ನೀವು ನಿಮ್ಮ ಮುಂದೆ ದೇಶದ ನಿವಾಸಿಗಳನ್ನು ಹೊರಡಿಸದಿದ್ದರೆ, ನೀವು ಉಳಿಸಿದವರು ನಿಮ್ಮ ಕಣ್ಣುಗಳಲ್ಲಿ ಮುಳ್ಳುಗಳಾಗಿಯೂ, ನಿಮ್ಮ ಪಕ್ಕೆಗಳಲ್ಲಿ ಕಂಟಕಗಳಾಗಿಯೂ ಇರುವರು. ನೀವು ವಾಸಿಸುವ ದೇಶದಲ್ಲಿ ಅವರು ನಿಮ್ಮನ್ನು ಶ್ರಮೆಪಡಿಸುವರು. ಅಧ್ಯಾಯವನ್ನು ನೋಡಿ |
ಈ ಕಾರಣದಿಂದಲೂ ನನಗೆ ತಿಳಿಸಲ್ಪಟ್ಟ ರಹಸ್ಯಗಳು ಬಹು ವಿಶೇಷವಾಗಿರುವದರಿಂದಲೂ ನಾನು ಹೊಗಳಿಕೊಳ್ಳದೆ ಸುಮ್ಮನಿರುತ್ತೇನೆ. ನಾನು ನನ್ನನ್ನು ಅತಿಶಯವಾಗಿ ಹೆಚ್ಚಿಸಿಕೊಳ್ಳಬಾರದೆಂದು ಒಂದು ಶೂಲ ನನ್ನ ಶರೀರದಲ್ಲಿ ನಾಟಿದೆಯೋ ಎಂಬಂತೆ ನನ್ನನ್ನು ಗುದ್ದುವದಕ್ಕೆ ಸೈತಾನನ ದೂತರಲ್ಲಿ ಒಬ್ಬನು ನನ್ನ ಬಳಿಗೆ ಕಳುಹಿಸಲ್ಪಟ್ಟನು; ನಾನು ಅತಿಶಯವಾಗಿ ಹೆಚ್ಚಿಸಿಕೊಳ್ಳಬಾರದೆಂತಲೇ ಇದಾಯಿತು.