Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅರಣ್ಯಕಾಂಡ 34:14 - ಕನ್ನಡ ಸತ್ಯವೇದವು J.V. (BSI)

14-15 ಬೇರೆ ಎರಡುವರೆ ಕುಲಗಳವರು ಅಂದರೆ ರೂಬೇನ್ಯರ ಕುಟುಂಬಗಳೂ ಗಾದ್ಯರ ಕುಟುಂಬಗಳೂ ಮನಸ್ಸೆ ಕುಲದವರಲ್ಲಿ ಅರ್ಧಜನರೂ ಯೊರ್ದನ್ ಹೊಳೆಯ ಈಚೆ ಯೆರಿಕೋ ಪಟ್ಟಣಕ್ಕೆ ಪೂರ್ವದಿಕ್ಕಿನಲ್ಲಿ ಸ್ವಾಸ್ತ್ಯವನ್ನು ಹೊಂದಿದ್ದಾರಷ್ಟೆ ಎಂದು ಅಪ್ಪಣೆಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

14 ರೂಬೇನ್ಯರ ಮಕ್ಕಳ ಗೋತ್ರವೂ, ಗಾದ್ಯರ ಮಕ್ಕಳ ಗೋತ್ರವೂ, ಮನಸ್ಸೆ ಕುಲದವರಲ್ಲಿ ಅರ್ಧಗೋತ್ರವೂ ತಮ್ಮ ಪೂರ್ವಿಕರ ಗೋತ್ರಗಳ ಪ್ರಕಾರವಾಗಿ ತಮ್ಮ ಸ್ವತ್ತನ್ನು ಹೊಂದಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

14-15 ಬೇರೆ ಎರಡುವರೆ ಕುಲಗಳವರು, ಅಂದರೆ ರೂಬೇನ್ಯರ ಕುಟುಂಬಗಳು, ಗಾದ್ಯರ ಕುಟುಂಬಗಳು ಹಾಗು ಮನಸ್ಸೆಕುಲದವರಲ್ಲಿ ಅರ್ಧಜನರು ಜೋರ್ಡನ್ ನದಿಯ ಈಚೆ ಜೆರಿಕೊ ಪಟ್ಟಣಕ್ಕೆ ಪೂರ್ವದಿಕ್ಕಿನಲ್ಲಿ ಸೊತ್ತನ್ನು ಹೊಂದಿದ್ದಾರೆ,” ಎಂದು ಅಪ್ಪಣೆಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

14-15 ಬೇರೆ ಎರಡೂವರೆ ಕುಲಗಳವರು ಅಂದರೆ ರೂಬೇನ್ ಕುಲ ಮತ್ತು ಗಾದ್ ಕುಲ ಮತ್ತು ಮನಸ್ಸೆಯ ಅರ್ಧಕುಲವು ಜೆರಿಕೊ ಪಟ್ಟಣದ ಆಚೆಯಲ್ಲಿರುವ ಜೋರ್ಡನ್ ನದಿಯ ಪೂರ್ವಭಾಗದಲ್ಲಿ ಈಗಾಗಲೇ ಸ್ವಾಸ್ತ್ಯವನ್ನು ಹೊಂದಿ ತಮ್ಮ ಕುಟುಂಬಗಳ ಪ್ರಕಾರ ಹಂಚಿಕೊಂಡಿದ್ದಾರೆ.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

14 ಏಕೆಂದರೆ ರೂಬೇನ್ಯರ ಮಕ್ಕಳ ಗೋತ್ರವೂ, ಗಾದನ ಮಕ್ಕಳ ಗೋತ್ರವೂ, ಮನಸ್ಸೆಯ ಅರ್ಧ ಗೋತ್ರವೂ ತಮ್ಮ ಪಿತೃಗಳ ಮನೆಯ ಪ್ರಕಾರವಾಗಿ ತಮ್ಮ ಸೊತ್ತನ್ನು ಪಡೆದುಕೊಂಡಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅರಣ್ಯಕಾಂಡ 34:14
8 ತಿಳಿವುಗಳ ಹೋಲಿಕೆ  

ಹೀಗೆ ಮೋಶೆಯು ಗಾದ್ಯರಿಗೂ ರೂಬೇನ್ಯರಿಗೂ ಯೋಸೇಫನ ಮಗನಾದ ಮನಸ್ಸೆಯ ಕುಲದವರಲ್ಲಿ ಅರ್ಧಜನರಿಗೂ ಅಮೋರಿಯರ ಅರಸನಾದ ಸೀಹೋನನ ರಾಜ್ಯವನ್ನೂ ಬಾಷಾನಿನ ಅರಸನಾದ ಓಗನ ರಾಜ್ಯವನ್ನೂ ಇವುಗಳ ಎಲ್ಲಾ ಊರುಗಳನ್ನೂ ಆ ಊರುಗಳಿಗೆ ಸೇರಿದ ಭೂವಿುಗಳನ್ನೂ ಕೊಟ್ಟನು.


ಆದರೆ ನೀವು ಹಾಗೆ ಮಾಡದೆಹೋದರೆ ಯೆಹೋವನಿಗೆ ವಿರುದ್ಧವಾಗಿ ಪಾಪಮಾಡಿದವರಾಗುವಿರಿ; ಮತ್ತು ನಿಮ್ಮ ಪಾಪವು ನಿಮ್ಮನ್ನು ಹಿಡಿಯುವ ತನಕ ಹುಡುಕಿಕೊಂಡೇ ಬರುವದು ಎಂದು ತಿಳಿದುಕೊಳ್ಳಿರಿ.


ಈಗ ನಿಮ್ಮ ಅನುಭವಕ್ಕೆ ಬಂದ ಪ್ರಕಾರ ನಿಮಗಿಂತ ಮಹಾಬಲಿಷ್ಠವಾದ ಜನಾಂಗಗಳನ್ನು ಹೊರಡಿಸಲೂ ಅವರ ದೇಶದಲ್ಲಿ ನಿಮ್ಮನ್ನು ಸೇರಿಸಿ ಆ ದೇಶವನ್ನು ನಿಮಗೇ ಸ್ವದೇಶವಾಗಿ ಕೊಡಲೂಬೇಕೆಂದು ಸಂಕಲ್ಪಿಸಿ ತಾನೇ ನಿಮ್ಮೊಂದಿಗಿದ್ದು ತನ್ನ ಅಪಾರ ಸಾಮರ್ಥ್ಯದಿಂದ ನಿಮ್ಮನ್ನು ಐಗುಪ್ತದೇಶದೊಳಗಿಂದ ಬರಮಾಡಿದನಲ್ಲಾ.


ಅವರು ದೇಶದ ಮೊದಲನೆಯ ಭಾಗವನ್ನು ತಮಗೋಸ್ಕರ ತೆಗೆದುಕೊಂಡರು; ಅಲ್ಲಿ ಪ್ರಧಾನನಿಗೆ ಯೋಗ್ಯವಾದ ಸ್ವಾಸ್ತ್ಯವು ದೊರಕಿತು. ಅವರು ಜನಾಧಿಪತಿಗಳ ಜೊತೆಯಲ್ಲಿ ಬಂದು ಇಸ್ರಾಯೇಲ್ಯರೊಡನೆ ಯೆಹೋವನ ಆಜ್ಞೆಯನ್ನು ನೆರವೇರಿಸಿ ಆತನ ನ್ಯಾಯವನ್ನು ಸ್ಥಾಪಿಸಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು