Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅರಣ್ಯಕಾಂಡ 34:4 - ಕನ್ನಡ ಸತ್ಯವೇದವು J.V. (BSI)

4 ದಕ್ಷಿಣಕ್ಕೆ ತಿರುಗಿಕೊಂಡು ಅಕ್ರಬ್ಬೀಮ್ ಎಂಬ ಕಣಿವೆಯ ಮಾರ್ಗವಾಗಿ ಚಿನಿಗೆ ಬರಬೇಕು. ಅದರ ಮೂಲೆ ಕಾದೇಶ್ ಬರ್ನೇಯದ ದಕ್ಷಿಣ ಕಡೆಯಲ್ಲಿರಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ದಕ್ಷಿಣಕ್ಕೆ ತಿರುಗಿಕೊಂಡು ಅಕ್ರಬ್ಬೀಮ್ ಎಂಬ ಕಣಿವೆಯ ಮಾರ್ಗವಾಗಿ ಚಿನಿಗೆ ಬರಬೇಕು. ಅದರ ಮೂಲೆ ಕಾದೇಶ್ ಬರ್ನೇಯದ ದಕ್ಷಿಣದ ಕಡೆಯಲ್ಲಿರುವುದು. ಅಲ್ಲಿಂದ ಅದು ಹಚರದ್ದಾರಿಗೆ ಹೊರಟು ಅಚ್ಮೋನಿಗೆ ಹಾದು ಹೋಗಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

4 ಅದು ಅಲ್ಲಿಂದ ದಕ್ಷಿಣಕ್ಕೆ ತಿರುಗಿಕೊಂಡು ಅಕ್ರಬ್ಬೀಮ್ ಎಂಬ ಕಣಿವೆಯ ಮಾರ್ಗವಾಗಿ ಚಿನಿಗೆ ಬರುವುದು. ಅದರ ಮೂಲೆ ಕಾದೇಶ್ ಬರ್ನೆಯದ ದಕ್ಷಿಣ ಕಡೆಯಲ್ಲಿರುವುದು. ಅಲ್ಲಿಂದ ಹಚರದ್ದಾರ್, ಆಚ್ಮೋನ್ ಎಂಬ ಊರುಗಳ ಮೇಲೆ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

4 ಅಲ್ಲಿಂದ ಅದು ಅಕ್ರಬ್ಬೀಮ್ ಕಣಿವೆಗೆ ತಿರುಗಿಕೊಂಡು ಚಿನಿಗೆ ಮುಂದುವರಿಯುವುದು. ಅದರ ಪರಿಮಿತಿ ದಕ್ಷಿಣ ಕಾದೇಶ್ ಬರ್ನೇಯಾ. ಅಲ್ಲಿಂದ ಅದು ಹಚರದ್ದಾರ್‌ಗೆ ಹೋಗಿ ಅಚ್ಮೋನಿಗೆ ಮುಂದುವರಿಯುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

4 ನಿಮ್ಮ ಮೇರೆಯು ದಕ್ಷಿಣದಿಂದ ಅಕ್ರಬ್ಬೀಮ್ ದಿನ್ನೆಗೆ ತಿರುಗಿ, ಚಿನ್‌ಗೆ ಹಾದು, ಕಾದೇಶ್ ಬರ್ನೇಯಕ್ಕೆ ದಕ್ಷಿಣದಲ್ಲಿ ಮುಗಿದು, ಅಲ್ಲಿಂದ ಹಚರದ್ದಾರಿಗೆ ಹೊರಟು, ಅಚ್ಮೋನಿಗೆ ಹಾದು ಹೋಗಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅರಣ್ಯಕಾಂಡ 34:4
9 ತಿಳಿವುಗಳ ಹೋಲಿಕೆ  

ಆ ದೇಶವನ್ನು ನೋಡಿಕೊಂಡು ಬರುವದಕ್ಕೆ ನಾನು ಕಾದೇಶ್‍ಬರ್ನೇಯದಿಂದ ನಿಮ್ಮ ತಂದೆಗಳನ್ನು ಕಳುಹಿಸಿದಾಗ ಅವರೂ ಹಾಗೆಯೇ ಮಾಡಿದರಲ್ಲಾ;


ಅಮೋರಿಯರ ಮೇರೆಯು ಅಕ್ರಬ್ಬೀಮ್ ಕಣಿವೆಯಲ್ಲಿರುವ ಬಂಡೆಯಿಂದ ಮೇಲಕ್ಕೆ ವಿಸ್ತರಿಸಿಕೊಂಡಿರುವದು.


ನೀವು ಅಲ್ಲಿ ಸೇರಿದಾಗ ಎದೋಮ್ಯರ ಸರಹದ್ದಿನ ಬಳಿಯಲ್ಲಿರುವ ಚಿನ್ ಅರಣ್ಯವೇ ನಿಮ್ಮ ದಕ್ಷಿಣ ಮೇರೆಯಾಗಿರಬೇಕು. ಆ ಮೇರೆಯು ಮೂಡಣದಿಕ್ಕಿನಲ್ಲಿ ಲವಣ ಸಮುದ್ರದ ಕೊನೆಯಿಂದ ತೊಡಗಿ


ಮೊದಲನೆಯ ತಿಂಗಳಲ್ಲಿ ಇಸ್ರಾಯೇಲ್ಯರ ಸರ್ವಸಮೂಹದವರು ಚಿನ್ ಎಂಬ ಅರಣ್ಯಕ್ಕೆ ಬಂದು ಕಾದೇಶಿನಲ್ಲಿ ಇಳಿದುಕೊಂಡರು. ಅಲ್ಲಿ ವಿುರ್ಯಾಮಳು ತೀರಿಹೋದಳು; ಆಕೆಯ ಶವವನ್ನು ಸಮಾಧಿಮಾಡಿದರು.


ಅವರು ಬೆಟ್ಟವನ್ನು ಹತ್ತಿ ಚಿನ್ ಅರಣ್ಯದಿಂದ ಹಮಾತಿನ ದಾರಿಯಲ್ಲಿರುವ ರೆಹೋಬಿನವರೆಗೆ ಆ ದೇಶವನ್ನು ಸಂಚರಿಸಿ ನೋಡಿದರು.


ಎದೋಮ್ ಸೀಮೆಯೂ ಚಿನ್ ಅರಣ್ಯವೂ ಮೇರೆಯಾಗಿರುವ ಕಾನಾನ್ ದೇಶದ ದಕ್ಷಿಣ ಭಾಗವು ಯೆಹೂದ ಕುಲದ ಗೋತ್ರಗಳಿಗೆ ಸ್ವಾಸ್ತ್ಯವಾಗಿ ಸಿಕ್ಕಿತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು