Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅರಣ್ಯಕಾಂಡ 34:8 - ಕನ್ನಡ ಸತ್ಯವೇದವು J.V. (BSI)

8 ಆ ಪರ್ವತದಿಂದ ಹಮಾತಿನ ದಾರಿಗೂ ಗುರುತು ಹಾಕಿಕೊಳ್ಳಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ಹೋರ್ ಪರ್ವತದಿಂದ ಹಮಾತಿನವರೆಗೂ ಮತ್ತು ಅಲ್ಲಿಂದ ಚೆದಾದಿನ ಹತ್ತಿರಕ್ಕೆ ಇರುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

8 ಆ ಪರ್ವತದಿಂದ ಹಮಾತಿನ ದಾರಿಗೂ ಗುರುತು ಹಾಕಿಕೊಳ್ಳಬೇಕು. ಅದರ ಮೂಲೆ ಚೆದಾದಿನ ಹತ್ತಿರ ಇರುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

8 ಹೋರ್ ಬೆಟ್ಟದಿಂದ ಅದು ಲೆಬೊಹಮಾತಿಗೆ ಹೋಗಿ ಅಲ್ಲಿಂದ ಚೆದಾದಿಗೆ ಹೋಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

8 ಸಾಲು ಮಾಡಿಕೊಂಡು ಹೋರ್ ಪರ್ವತದಿಂದ ನೀವು ಲೆಬೊ ಹಮಾತಿನ ಪ್ರದೇಶದವರೆಗೆ ಸಾಲು ಮಾಡಿರಿ. ಮೇರೆಯು ಚೆದಾದಿಗೆ ಹೊರಟು

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅರಣ್ಯಕಾಂಡ 34:8
12 ತಿಳಿವುಗಳ ಹೋಲಿಕೆ  

ಅವರು ಬೆಟ್ಟವನ್ನು ಹತ್ತಿ ಚಿನ್ ಅರಣ್ಯದಿಂದ ಹಮಾತಿನ ದಾರಿಯಲ್ಲಿರುವ ರೆಹೋಬಿನವರೆಗೆ ಆ ದೇಶವನ್ನು ಸಂಚರಿಸಿ ನೋಡಿದರು.


ಇಸ್ರಾಯೇಲ್‍ದೇವರಾದ ಯೆಹೋವನು ತನ್ನ ಸೇವಕನೂ ಗತ್‍ಹೇಫೆರಿನವನಾದ ಅವಿುತ್ತೈಯ ಮಗನೂ ಆದ ಯೋನಾ ಎಂಬ ಪ್ರವಾದಿಯ ಮುಖಾಂತರವಾಗಿ ಮುಂತಿಳಿಸಿದಂತೆ ಹಮಾತಿನ ದಾರಿಯಿಂದ ಅರಾಬಾ ತಗ್ಗಿನ ಸಮುದ್ರದವರೆಗಿದ್ದ ಇಸ್ರಾಯೇಲ್ಯರ ಮೇರೆಯನ್ನು ತಿರಿಗಿ ತೆಗೆದುಕೊಂಡವನು ಇವನೇ.


ಕಸ್ದೀಯರ ಸೈನಿಕರು ಅವರನ್ನು ಹಿಂದಟ್ಟುತ್ತಾ ಯೆರಿಕೋವಿನ ಬೈಲಿನಲ್ಲಿ ಚಿದ್ಕೀಯನನ್ನು ತಗಲಿ ಹಿಡಿದು ಹಮಾತ್ ಸೀಮೆಯ ರಿಬ್ಲದಲ್ಲಿದ್ದ ನೆಬೂಕದ್ನೆಚ್ಚರನೆಂಬ ಬಾಬೆಲಿನ ಅರಸನ ಬಳಿಗೆ ತೆಗೆದುಕೊಂಡು ಬಂದರು; ಆ ಬಾಬೆಲಿನ ಅರಸನು ಅಲ್ಲಿ ಚಿದ್ಕೀಯನಿಗೆ ಶಿಕ್ಷೆಯನ್ನು ವಿಧಿಸಿ


ದಾವೀದನು ಹದದೆಜೆರನ ಸೈನ್ಯವನ್ನು ಸೋಲಿಸಿದನೆಂಬ ವರ್ತಮಾನವು ಹಮಾತಿನ ಅರಸನಾದ ತೋವಿಗೆ ಮುಟ್ಟಿತು.


ಅದರ ಮೂಲೆ ಚೆದಾದಿನ ಹತ್ತಿರವಿರುವದು. ಆಮೇಲೆ ಅದು ಜಿಫ್ರೋನಿಗೆ ಹೋಗಿ ಹಚರೇನಾನಿನ ಬಳಿಯಲ್ಲಿ ಮುಗಿಯಬೇಕು.


ಈ ಪ್ರಕಾರ ಸೊಲೊಮೋನನೂ ಹಮಾತಿನ ದಾರಿಯಿಂದ ಐಗುಪ್ತದ ಹಳ್ಳದವರೆಗಿರುವ ಪ್ರಾಂತಗಳಿಂದ ಮಹಾ ಸಮೂಹವಾಗಿ ಕೂಡಿಬಂದಿದ್ದ ಎಲ್ಲಾ ಇಸ್ರಾಯೇಲ್ಯರೂ ಎರಡು ವಾರ ಅಂದರೆ ಹದಿನಾಲ್ಕು ದಿವಸಗಳವರೆಗೆ ನಮ್ಮ ದೇವರಾದ ಯೆಹೋವನ ಸನ್ನಿಧಿಯಲ್ಲಿ ಹಬ್ಬಮಾಡಿದರು.


ಕರ್ಕೆಮೀಷಿನ ಗತಿಯು ಕಲ್ನೋವಿಗೂ ಆಯಿತಲ್ಲವೆ, ಅರ್ಪದಿಗೆ ಆದ ಪಾಡು ಹಮಾತಿಗೂ ಬಂತಷ್ಟೆ; ದಮಸ್ಕದ ಅವಸ್ಥೆಯು ಸಮಾರ್ಯಕ್ಕೂ ಸಂಭವಿಸಿತಲ್ಲಾ.


ಸೇನಾಧೀಶ್ವರದೇವರಾದ ಯೆಹೋವನು ಇಂತೆನ್ನುತ್ತಾನೆ - ಇಸ್ರಾಯೇಲ್ ವಂಶದವರೇ, ಇಗೋ, ನಾನು ನಿಮಗೆ ವಿರುದ್ಧವಾಗಿ ಒಂದು ಜನಾಂಗವನ್ನು ಎಬ್ಬಿಸುವೆನು; ಅದು ಹಮಾತಿನ ದಾರಿಯಿಂದ ಅರಾಬಾ ತಗ್ಗಿನ ತೊರೆಯ ತನಕ ನಿಮ್ಮನ್ನು ಜಜ್ಜಿಬಿಡುವದು.


ಚೆಮಾರಿಯರೂ ಹಮಾತಿಯರೂ ಕಾನಾನನಿಂದ ಹುಟ್ಟಿದರು.


ಆಗ ದಾವೀದನು ದೇವಮಂಜೂಷವನ್ನು ಕಿರ್ಯತ್ಯಾರೀವಿುನಿಂದ ತರುವದಕ್ಕೋಸ್ಕರ ಐಗುಪ್ತದ ಶೀಹೋರ್ ಹಳ್ಳದಿಂದ ಹಮಾತಿನ ದಾರಿಯವರೆಗೂ ವಾಸಿಸುತ್ತಿದ್ದ ಎಲ್ಲಾ ಇಸ್ರಾಯೇಲ್ಯರನ್ನೂ ಕೂಡಿಸಿ


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು