ಅರಣ್ಯಕಾಂಡ 35:12 - ಕನ್ನಡ ಸತ್ಯವೇದವು J.V. (BSI)12 ಅವನು ಸಭೆಯವರಿಂದ ತೀರ್ಪುಹೊಂದುವದಕ್ಕಿಂತ ಮೊದಲೇ ಹತವಾದವನ ಸಮೀಪಬಂಧುವಿನಿಂದ ಸಾಯದಂತೆ ಆ ಆಶ್ರಯಸ್ಥಾನಗಳು ನಿಮ್ಮೊಳಗೆ ಇರಬೇಕು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201912 ಅವನು ಸಭೆಯವರಿಂದ ತೀರ್ಪು ಹೊಂದುವುದಕ್ಕಿಂತ ಮೊದಲೇ ಹತವಾದವನ ಸಮೀಪಬಂಧುವಿನಿಂದ ಸಾಯದಂತೆ ಆ ಆಶ್ರಯ ಪಟ್ಟಣಗಳು ನಿಮ್ಮೊಳಗೆ ಇರಬೇಕು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)12 ಅಂಥವನು ಸಭೆಯವರಿಂದ ತೀರ್ಪುಹೊಂದುವುದಕ್ಕಿಂತ ಮೊದಲೇ ಹತನಾದವನ ಸಮೀಪ ಬಂಧುವಿನಿಂದ ಸಾಯದಂತೆ ಈ ಆಶ್ರಯಧಾಮಗಳು ನಿಮ್ಮಲ್ಲಿ ಇರಬೇಕು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್12 ಕೊಂದವನು ನ್ಯಾಯ ವಿಚಾರಣಾಸಭೆಯ ಮುಂದೆ ನಿಂತುಕೊಳ್ಳುವುದಕ್ಕಿಂತ ಮೊದಲೇ ಕೊಲ್ಲಲ್ಪಟ್ಟವನ ಸಂಬಂಧಿಕನಿಂದ ಕೊಲ್ಲಲ್ಪಡದೆ ಸುರಕ್ಷಿತನಾಗಿರಲು ಆ ಆಶ್ರಯ ಸ್ಥಳಗಳು ನಿಮ್ಮ ಮಧ್ಯದಲ್ಲಿ ಇರಲೇಬೇಕು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ12 ಕೊಂದವನು ಸಭೆಯ ಮುಂದೆ ನ್ಯಾಯತೀರ್ಪಿಗೆ ನಿಲ್ಲುವವರೆಗೂ ಸೇಡು ತೀರಿಸುವವನ ದೆಸೆಯಿಂದ ಸಾಯದಂತೆ ಅವು ನಿಮಗೆ ಆಶ್ರಯದ ಪಟ್ಟಣಗಳಾಗಿರಬೇಕು. ಅಧ್ಯಾಯವನ್ನು ನೋಡಿ |
ಈಗ ನೋಡು, ಸಂಬಂಧಿಕರೆಲ್ಲಾ ನಿನ್ನ ದಾಸಿಯಾದ ನನಗೆ ವಿರೋಧವಾಗಿ ಎದ್ದು - ತಮ್ಮನನ್ನು ಕೊಂದವನೆಲ್ಲಿ? ಅವನನ್ನು ನಮಗೆ ಒಪ್ಪಿಸು; ತಮ್ಮನ ಪ್ರಾಣಕ್ಕಾಗಿ ಅವನ ಪ್ರಾಣವನ್ನೂ ತೆಗೆದುಬಿಟ್ಟು ನಿನ್ನನ್ನು ಬಾಧ್ಯಸ್ಥನಿಲ್ಲದ ಹಾಗೆ ಮಾಡಿಬಿಡುತ್ತೇವೆ ಅನ್ನುತ್ತಾರೆ. ಹೀಗೆ ಅವರು ನನಗುಳಿದಿರುವ ಒಂದು ಕೆಂಡವನ್ನೂ ಆರಿಸಿಬಿಟ್ಟು ನನ್ನ ಗಂಡನ ಹೆಸರನ್ನೂ ಸಂತಾನವನ್ನೂ ಭೂಲೋಕದ ಮೇಲಣಿಂದ ಅಳಿಸಬೇಕೆಂದಿದ್ದಾರೆ ಎಂದು ಉತ್ತರಕೊಟ್ಟಳು.