Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅರಣ್ಯಕಾಂಡ 35:22 - ಕನ್ನಡ ಸತ್ಯವೇದವು J.V. (BSI)

22 ಆದರೆ ಒಬ್ಬನು ಯಾವ ದ್ವೇಷವೂ ಇಲ್ಲದೆ ಅಕಸ್ಮಾತ್ತಾಗಿ ನೂಕುವದರಿಂದಾಗಲಿ ಹಾನಿಮಾಡುವ ಸಮಯವನ್ನು ನೋಡಿಕೊಳ್ಳದೆ ಏನಾದರೂ ಎಸೆಯುವದರಿಂದಾಗಲಿ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

22 “‘ಆದರೆ ಒಬ್ಬನು ಯಾವ ದ್ವೇಷವೂ ಇಲ್ಲದೆ ಆಕಸ್ಮಾತ್ತಾಗಿ ನೂಕುವುದರಿಂದಾಗಲಿ, ಹಾನಿಮಾಡುವ ಸಮಯವನ್ನು ನೋಡಿಕೊಳ್ಳದೆ ಏನಾದರೂ ಎಸೆಯುವುದರಿಂದಾಗಲಿ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

22 “ಒಬ್ಬನು ಯಾವ ದ್ವೇಷವೂ ಇಲ್ಲದೆ, ಅಕಸ್ಮಾತ್ತಾಗಿ ನೂಕುವುದರಿಂದಾಗಲಿ, ಹೊಂಚು ಕಾಯದೆ ಏನನ್ನಾದರೂ ಎಸೆಯುವುದರಿಂದಾಗಲಿ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

22 “ಆದರೆ ಒಬ್ಬನು ಯಾವ ದ್ವೇಷವೂ ಇಲ್ಲದೆ ನಿರುದ್ದೇಶದಿಂದ ಎಸೆದ ಯಾವುದೋ ವಸ್ತುವಿನಿಂದ ಒಬ್ಬನನ್ನು ಕೊಂದರೆ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

22 “ ‘ಆದರೆ ಶತ್ರುತ್ವವಿಲ್ಲದೆ ಆಕಸ್ಮಿಕವಾಗಿ ಅವನನ್ನು ನೂಕುವುದರಿಂದಲಾದರೂ, ಸಮಯ ಸಾಧಿಸದೆ ಯಾವುದಾದರೊಂದು ವಸ್ತುವನ್ನು ಅವನ ಮೇಲೆ ಎಸೆದರೆ,

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅರಣ್ಯಕಾಂಡ 35:22
8 ತಿಳಿವುಗಳ ಹೋಲಿಕೆ  

ಕೈತಪ್ಪಿ ಮತ್ತೊಬ್ಬನನ್ನು ಕೊಂದವನು ಅವುಗಳಲ್ಲಿ ಒಂದಕ್ಕೆ ಓಡಿಹೋಗಿ ಸುರಕ್ಷಿತನಾಗಿರಬಹುದು.


ಆದರೆ ಕೊಲ್ಲಬೇಕೆಂಬ ಅಭಿಪ್ರಾಯವಿಲ್ಲದೆ ದೇವರ ಸಂಕಲ್ಪದಿಂದ ಹತ್ಯ ನಡೆದರೆ ಆ ಹತ್ಯ ಮಾಡಿದವನು ನಾನು ನೇವಿುಸುವ ಆಶ್ರಯಸ್ಥಳಕ್ಕೆ ಓಡಿಹೋಗಿ ಬದುಕಬಹುದು.


ಹತವಾದವನ ಸಮೀಪಬಂಧುವು ಕೊಂದವನನ್ನು ಹಿಂದಟ್ಟಿಕೊಂಡು ಅಲ್ಲಿಗೆ ಬಂದರೆ ಅವರು ಅವನನ್ನು ಅವನ ಕೈಗೆ ಒಪ್ಪಿಸಬಾರದು. ಯಾಕಂದರೆ ಅವನು ನೆರೆಯವನನ್ನು ಪೂರ್ವದ್ವೇಷವೇನೂ ಇಲ್ಲದೆ ಅಕಸ್ಮಾತ್ತಾಗಿ ಕೊಂದನು.


ನಿಮ್ಮಲ್ಲಿ ತಿಳಿಯದೆ ಅಕಸ್ಮಾತ್ತಾಗಿ ನರಹತ್ಯ ಮಾಡಿದವನು ಅಲ್ಲಿಗೆ ಓಡಿಹೋಗಲಿ. ಹತವಾದವನ ಸಮೀಪಬಂಧುವು ಮುಯ್ಯಿತೀರಿಸದಂತೆ ಅವು ನಿಮಗೆ ಆಶ್ರಯಸ್ಥಾನಗಳಾಗುವವು.


ದೃಷ್ಟಾಂತ - ಒಬ್ಬ ಮನುಷ್ಯನು ಕಟ್ಟಿಗೆಯನ್ನು ಕಡಿಯಬೇಕೆಂದು ಮತ್ತೊಬ್ಬನ ಜೊತೆಯಲ್ಲಿ ಅಡವಿಗೆ ಹೋಗಿ ಅಲ್ಲಿ ಒಂದು ಮರವನ್ನು ಕಡಿಯಬೇಕೆಂದು ಕೊಡಲಿಯಿಂದ ಹೊಡೆಯುತ್ತಿರುವಾಗ ಕೊಡಲಿಯು ಕಾವಿನಿಂದ ಜಾರಿ ಆ ಮತ್ತೊಬ್ಬನಿಗೆ ತಗಲಿದ್ದರಿಂದ ಅವನು ಸತ್ತರೆ ಹೊಡೆದವನು ಆ ಪಟ್ಟಣಗಳಲ್ಲಿ ಒಂದಕ್ಕೆ ಓಡಿಹೋಗಿ ಬದುಕಿಕೊಳ್ಳಬಹುದು.


ಯಾವನಾದರೂ ಮತ್ತೊಬ್ಬನನ್ನು ಹಗೆಮಾಡಿ ನೂಕುವದರಿಂದಾಗಲಿ ಸಮಯನೋಡಿಕೊಂಡು ಅವನ ಮೇಲೆ ಏನಾದರೂ ಎಸೆಯುವದರಿಂದಾಗಲಿ


ದ್ವೇಷದಿಂದ ಕೈಯಾರೆ ಹೊಡೆಯುವದರಿಂದಾಗಲಿ ಕೊಂದರೆ ಅವನು ನರಹತ್ಯ ಮಾಡಿದವನೇ; ಅವನಿಗೆ ಮರಣ ಶಿಕ್ಷೆಯಾಗಬೇಕು. ಹತವಾದವನ ಸಮೀಪಬಂಧುವು ಅವನನ್ನು ಎಲ್ಲಿ ಕಂಡರೂ ಕೊಲ್ಲಲಿ.


ಕೊಲ್ಲುವಷ್ಟು ದೊಡ್ಡ ಕಲ್ಲನ್ನು ತಿಳಿಯದೆ ಬೀಳಿಸುವದರಿಂದಾಗಲಿ ಮತ್ತೊಬ್ಬನು ಸತ್ತರೆ ಅವನು ಆ ಮನುಷ್ಯನಿಗೆ ವೈರಿಯಾಗಿರದೆಯೂ ಹಾನಿಯನ್ನು ಮಾಡಬೇಕೆಂಬ ಅಭಿಪ್ರಾಯವಿಲ್ಲದೆಯೂ ಇದ್ದ ಪಕ್ಷಕ್ಕೆ


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು