Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅರಣ್ಯಕಾಂಡ 35:25 - ಕನ್ನಡ ಸತ್ಯವೇದವು J.V. (BSI)

25 ಹತ್ಯಮಾಡಿದವನನ್ನು ಆ ಸಮೀಪ ಬಂಧುವಿನ ಕೈಯಿಂದ ತಪ್ಪಿಸಿ ಅವನು ಓಡಿಹೋಗಿದ್ದ ಆಶ್ರಯನಗರಕ್ಕೆ ತಿರಿಗಿ ಸೇರಿಸಬೇಕು. ಪಟ್ಟಾಭಿಷೇಕಹೊಂದಿದ ಮಹಾಯಾಜಕನು ಜೀವದಿಂದಿರುವ ತನಕ ಅವನು ಆ ಪಟ್ಟಣದಲ್ಲೇ ವಾಸಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

25 ಸಭೆಯು ಹತ್ಯಮಾಡಿದವನನ್ನು ಆ ಸಮೀಪ ಬಂಧುವಿನ ಕೈಯಿಂದ ತಪ್ಪಿಸಿ ಅವನು ಓಡಿಹೋಗಿದ್ದ ಆಶ್ರಯನಗರಕ್ಕೆ ತಿರುಗಿ ಸೇರಿಸಬೇಕು. ಪಟ್ಟಾಭಿಷೇಕ ಹೊಂದಿದ ಮಹಾಯಾಜಕನು ಜೀವದಿಂದಿರುವ ತನಕ ಅವನು ಆ ಪಟ್ಟಣದಲ್ಲೇ ವಾಸಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

25 ಅವನು ಓಡಿಹೋಗಿದ್ದ ಆಶ್ರಯನಗರಕ್ಕೆ ತಿರುಗಿ ಸೇರಿಸಬೇಕು. ಪಟ್ಟಾಭಿಷೇಕ ಹೊಂದಿದ ಮಹಾಯಾಜಕನು ಜೀವದಿಂದಿರುವ ತನಕ ಅವನು ಆ ಪಟ್ಟಣದಲ್ಲೇ ವಾಸಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

25 ಕೊಂದವನು ಓಡಿಹೋಗಿದ್ದ ಆಶ್ರಯ ನಗರಕ್ಕೆ ಸಭೆಯವರು ಅವನನ್ನು ಮತ್ತೆ ಕರೆದುಕೊಂಡು ಹೋಗಿ ಕೊಲ್ಲಲ್ಪಟ್ಟವನ ಸಮೀಪಬಂಧುವಿನಿಂದ ರಕ್ಷಿಸಬೇಕು. ಅಭಿಷೇಕ ಹೊಂದಿದ ಮಹಾಯಾಜಕನು ಜೀವದಿಂದಿರುವ ತನಕ ಅವನು ಆ ಪಟ್ಟಣದಲ್ಲೇ ವಾಸಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

25 ಸಭೆಯು ಕೊಂದವನನ್ನು ರಕ್ತದ ಸೇಡು ತೀರಿಸುವವನ ಕೈಯಿಂದ ತಪ್ಪಿಸಿ, ಅವನು ಓಡಿ ಹೋದ ಆಶ್ರಯದ ಪಟ್ಟಣಕ್ಕೆ ತಿರುಗಿ ಸೇರಿಸಬೇಕು. ಅಲ್ಲೇ ಅವನು ಪರಿಶುದ್ಧ ಎಣ್ಣೆಯಿಂದ ಅಭಿಷೇಕ ಹೊಂದಿದ ಮಹಾಯಾಜಕನು ಸಾಯುವವರೆಗೂ ವಾಸಮಾಡಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅರಣ್ಯಕಾಂಡ 35:25
15 ತಿಳಿವುಗಳ ಹೋಲಿಕೆ  

ಅಭಿಷೇಕತೈಲವನ್ನು ಅವನ ತಲೆಯ ಮೇಲೆ ಅಭ್ಯಂಜನಮಾಡಿ ಅವನನ್ನು ಅಭಿಷೇಕಿಸಬೇಕು.


ಒಂದು ಸಭೆಯನ್ನು ಸೇರಿಸಿ ಅಂಥವನನ್ನು ವಿಚಾರಿಸಬೇಕು; ಮತ್ತು ಅವನು ಆಗಿನ ಮಹಾಯಾಜಕನ ಜೀವಮಾನವೆಲ್ಲಾ ಅದೇ ಪಟ್ಟಣದಲ್ಲಿರಬೇಕು. ಆಮೇಲೆ ತಾನು ಬಿಟ್ಟುಬಂದ ಪಟ್ಟಣದಲ್ಲಿರುವ ಮನೆಗೆ ಹಿಂದಿರುಗಿ ಹೋಗಬಹುದು ಎಂದು ಹೇಳು ಅಂದನು.


ಯಾಜಕರಲ್ಲಿ ಪ್ರಧಾನನು ಅಂದರೆ ಯಾವನು ತೈಲಾಭಿಷೇಕಹೊಂದಿ ದೀಕ್ಷಾವಸ್ತ್ರಗಳನ್ನು ಧರಿಸಿ ಪಟ್ಟಕ್ಕೆ ಬರುವನೋ ಅವನು [ದುಃಖಸೂಚನೆಗಾಗಿ] ತನ್ನ ತಲೆಯ ಕೂದಲನ್ನು ಕೆದರಿಕೊಳ್ಳಬಾರದು; ಬಟ್ಟೆಗಳನ್ನು ಹರಿದುಕೊಳ್ಳಬಾರದು.


ಅಭಿಷಿಕ್ತನಾದ ಯಾಜಕನೇ ದೋಷಿಯಾಗಿ ಜನರೆಲ್ಲರನ್ನೂ ಅಪರಾಧಕ್ಕೆ ಒಳಪಡಿಸಿದರೆ ತನ್ನ ದೋಷಪರಿಹಾರಕ್ಕಾಗಿ ಅವನು ಪೂರ್ಣಾಂಗವಾದ ಹೋರಿಯನ್ನು ಯೆಹೋವನಿಗೆ ಸಮರ್ಪಿಸಬೇಕು.


ಮಹಾಯಾಜಕನು ಜೀವದಿಂದಿರುವ ತನಕ ಅವನು ಆಶ್ರಯನಗರದೊಳಗೆ ಇರಬೇಕಾಗಿತ್ತು. ಮಾಹಾಯಾಜಕನು ತೀರಿಹೋದನಂತರ ಅವನು ತನ್ನ ಸ್ವಾಸ್ತ್ಯವಿರುವ ಸ್ಥಳಕ್ಕೆ ಹೋಗಬಹುದು.


ಅದರಲ್ಲಿ ಸ್ವಲ್ಪವನ್ನು ಆರೋನನ ತಲೆಯ ಮೇಲೆ ಹೊಯಿದು ಅವನನ್ನು ಅಭಿಷೇಕಿಸಿ ಪ್ರತಿಷ್ಠಿಸಿದನು.


ಸಭೆಯವರು ಹತ್ಯೆಮಾಡಿದವನಿಗೂ ಹತವಾದವನ ಸಮೀಪಬಂಧುವಿಗೂ ಈ ಸಂಗತಿಗಳಿಗೆ ಅನುಸಾರವಾಗಿ ನ್ಯಾಯ ತೀರಿಸಿ


ಆ ಹತ್ಯಮಾಡಿದವನು ಯಾವಾಗಲಾದರೂ ತಾನು ಓಡಿಹೋಗಿದ್ದ ಆಶ್ರಯ ನಗರದ ಮೇರೆಯ ಹೊರಗೆ ಹೋಗಿರುವಾಗ


ನಾವು ಸಾಯುವವರು; ನೆಲದ ಮೇಲೆ ಚೆಲ್ಲಲ್ಪಟ್ಟು ತಿರಿಗಿ ಕೂಡಿಸಲ್ಪಡಲಾರದ ನೀರಿನಂತಿದ್ದೇವೆ. ಮನುಷ್ಯರ ಪ್ರಾಣವನ್ನು ತೆಗೆಯುವದಕ್ಕೆ ದೇವರಿಗೆ ಇಷ್ಟವಿಲ್ಲ; ತಳ್ಳಲ್ಪಟ್ಟವನು ತಿರಿಗಿ ತನ್ನ ಬಳಿಗೆ ಬರುವ ಹಾಗೆ ಆತನು ಸದುಪಾಯಗಳನ್ನು ಕಲ್ಪಿಸುವವನಾಗಿರುತ್ತಾನೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು