Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅರಣ್ಯಕಾಂಡ 35:29 - ಕನ್ನಡ ಸತ್ಯವೇದವು J.V. (BSI)

29 ನೀವೂ ನಿಮ್ಮ ಸಂತತಿಯವರೂ ನಿಮ್ಮ ಎಲ್ಲಾ ನಿವಾಸಗಳಲ್ಲಿ ಈ ಮಾತುಗಳಿಗೆ ಅನುಸಾರವಾಗಿ ನ್ಯಾಯತೀರಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

29 “‘ನೀವೂ, ನಿಮ್ಮ ಸಂತತಿಯವರೂ ನಿಮ್ಮ ಎಲ್ಲಾ ವಾಸಸ್ಥಳಗಳಲ್ಲಿ ಈ ಮಾತುಗಳಿಗೆ ಅನುಸಾರವಾಗಿ ನ್ಯಾಯತೀರಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

29 ನೀವು ಮತ್ತು ನಿಮ್ಮ ಸಂತತಿಯವರು ಈ ವಿಧಿನಿಯಮಗಳಿಗನುಸಾರ ನಿಮ್ಮ ನಿವಾಸಗಳಲ್ಲೆಲ್ಲ ನ್ಯಾಯ ತೀರಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

29 ನೀವೂ ನಿಮ್ಮ ಸಂತತಿಯವರೂ ನಿಮ್ಮ ಎಲ್ಲಾ ನಿವಾಸಗಳಲ್ಲಿ ಈ ಕಟ್ಟಳೆಗೆ ಅನುಸಾರವಾಗಿ ನ್ಯಾಯತೀರಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

29 “ ‘ಹೀಗೆ ಇವು ನಿಮ್ಮ ಸಮಸ್ತ ನಿವಾಸಿಗಳಲ್ಲಿ ನಿಮ್ಮ ಸಂತತಿಗಳಿಗೆಲ್ಲಾ ನ್ಯಾಯದ ಕಟ್ಟಳೆಯಾಗಿರಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅರಣ್ಯಕಾಂಡ 35:29
5 ತಿಳಿವುಗಳ ಹೋಲಿಕೆ  

ಇವರೂ ಇಲ್ಲದಿದ್ದರೆ ಕುಲದವರಲ್ಲಿ ಸಮೀಪ ಬಂಧುವಿಗೆ ಕೊಡಬೇಕು; ಇವನೇ ಅದನ್ನು ಅನುಭೋಗಿಸಲಿ. ಯೆಹೋವನು ಮೋಶೆಗೆ ಅಪ್ಪಣೆಮಾಡಿದ ಈ ತೀರ್ಮಾನವು ಇಸ್ರಾಯೇಲ್ಯರಿಗೆ ನ್ಯಾಯವಿಧಿಯಾಗಿರಬೇಕು.


ಯೋಸೇಫನ ಕುಮಾರ ಮನಸ್ಸೆಯ ವಂಶದವರೊಳಗೆ ಮನಸ್ಸೆಗೆ ಹುಟ್ಟಿದ ಮಾಕೀರನ ಮರಿಮಗನೂ ಗಿಲ್ಯಾದನ ಮೊಮ್ಮಗನೂ ಹೇಫೆರನ ಮಗನೂ ಆದ ಚಲ್ಪಹಾದನ ಹೆಣ್ಣುಮಕ್ಕಳಾದ ಮಹ್ಲಾ, ನೋವಾ, ಹೊಗ್ಲಾ, ವಿುಲ್ಕಾ, ತಿರ್ಚಾಎಂಬವರು ಒಂದು ವಿಜ್ಞಾಪನೆಯನ್ನು ಮಾಡಿಕೊಳ್ಳುವದಕ್ಕೆ ಬಂದರು.


ಮಹಾಯಾಜಕನು ಜೀವದಿಂದಿರುವ ತನಕ ಅವನು ಆಶ್ರಯನಗರದೊಳಗೆ ಇರಬೇಕಾಗಿತ್ತು. ಮಾಹಾಯಾಜಕನು ತೀರಿಹೋದನಂತರ ಅವನು ತನ್ನ ಸ್ವಾಸ್ತ್ಯವಿರುವ ಸ್ಥಳಕ್ಕೆ ಹೋಗಬಹುದು.


ದೇವದರ್ಶನದ ಗುಡಾರದಲ್ಲಿ ಆಜ್ಞಾಶಾಸನಗಳ ಮಂಜೂಷದ ಮುಂದಿರುವ ತೆರೆಯ ಹೊರಗೆ ಆರೋನನೂ ಅವನ ಮಕ್ಕಳೂ ಸಾಯಂಕಾಲದಿಂದ ಉದಯದವರೆಗೂ ಯೆಹೋವನ ಸನ್ನಿಧಿಯಲ್ಲಿ ಆ ದೀಪವನ್ನು ಸರಿಪಡಿಸುತ್ತಿರಬೇಕು. ಇಸ್ರಾಯೇಲ್ಯರೂ ಅವರ ಸಂತತಿಯವರೂ ಈ ನಿಯಮವನ್ನು ಶಾಶ್ವತವಾಗಿ ಅನುಸರಿಸಬೇಕು.


ಲೇವಿಯರೇ ದೇವದರ್ಶನದ ಗುಡಾರದ ಪರಿಚರ್ಯವನ್ನು ಮಾಡಬೇಕು; ಅದರ ಸಂಬಂಧವಾಗಿ ಅವರು ಮಾಡುವ ಪಾಪದ ಫಲವನ್ನು ತಾವೇ ಅನುಭವಿಸಬೇಕು. ಇದು ನಿಮಗೂ ನಿಮ್ಮ ಸಂತತಿಯವರಿಗೂ ಶಾಶ್ವತ ನಿಯಮ. ಆದರೆ ಇಸ್ರಾಯೇಲ್ಯರ ಮಧ್ಯದಲ್ಲಿ ಲೇವಿಯರಿಗೆ ಸ್ವಂತವಾದ ಭೂಸ್ಥಿತಿಯುಂಟಾಗುವದಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು