Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅರಣ್ಯಕಾಂಡ 35:31 - ಕನ್ನಡ ಸತ್ಯವೇದವು J.V. (BSI)

31 ಮರಣಶಿಕ್ಷೆಗೆ ಪಾತ್ರನಾದ ಕೊಲೆಪಾತಕನನ್ನು ಉಳಿಸುವದಕ್ಕೆ ಈಡನ್ನು ತೆಗೆದುಕೊಳ್ಳಕೂಡದು; ಅವನಿಗೆ ಮರಣಶಿಕ್ಷೆಯೇ ಆಗಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

31 “‘ಮರಣಶಿಕ್ಷೆಗೆ ಪಾತ್ರನಾದ ಕೊಲೆಪಾತಕನನ್ನು ಉಳಿಸುವುದಕ್ಕೆ ಈಡನ್ನು ತೆಗೆದುಕೊಳ್ಳಬಾರದು. ಅವನಿಗೆ ಮರಣಶಿಕ್ಷೆಯೇ ಆಗಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

31 ಮರಣಶಿಕ್ಷೆಗೆ ಪಾತ್ರನಾದ ಕೊಲೆಗಡುಕನನ್ನು ಉಳಿಸುವುದಕ್ಕೆ ಈಡನ್ನು ತೆಗೆದುಕೊಳ್ಳಕೂಡದು. ಅವನಿಗೆ ಮರಣಶಿಕ್ಷೆ ಆಗಲೇಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

31 “ಮರಣಶಿಕ್ಷೆಗೆ ಒಳಗಾಗಿರುವ ಕೊಲೆಪಾತಕನನ್ನು ಉಳಿಸಲು ನೀವು ಯಾವ ಈಡನ್ನೂ ತೆಗೆದುಕೊಳ್ಳಕೂಡದು. ಅವನಿಗೆ ಮರಣಶಿಕ್ಷೆಯೇ ಆಗಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

31 “ ‘ಸಾಯತಕ್ಕ ಕೊಲೆಪಾತಕನ ಪ್ರಾಣಕ್ಕೋಸ್ಕರ ಈಡನ್ನು ತೆಗೆದುಕೊಳ್ಳಬೇಡಿರಿ. ಏಕೆಂದರೆ ಅವನು ನಿಜವಾಗಿಯೂ ಸಾಯಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅರಣ್ಯಕಾಂಡ 35:31
13 ತಿಳಿವುಗಳ ಹೋಲಿಕೆ  

ದೇವರೇ, ನನ್ನ ರಕ್ಷಣಕರ್ತನೇ, ಪ್ರಾಣಹತ್ಯದ ಅಪರಾಧದಿಂದ ನನ್ನನ್ನು ಬಿಡಿಸು; ಆಗ ನನ್ನ ನಾಲಿಗೆಯು ಉತ್ಸಾಹದಿಂದ ನಿನ್ನ ಸತ್ಯಸಂಧತೆಯನ್ನು ಕೊಂಡಾಡುವದು.


ಆಗ ದಾವೀದನು ನಾತಾನನಿಗೆ - ನಾನು ಯೆಹೋವನಿಗೆ ವಿರುದ್ಧವಾಗಿ ಪಾಪಮಾಡಿದ್ದೇನೆ ಎಂದು ಹೇಳಿದನು. ನಾತಾನನು ಅವನಿಗೆ - ಯೆಹೋವನು ನಿನ್ನ ಪಾಪವನ್ನು ಕ್ಷವಿುಸಿದ್ದಾನೆ, ನೀನು ಸಾಯುವದಿಲ್ಲ;


ಕೊಲ್ಲಬೇಕೆಂಬ ಉದ್ದೇಶದಿಂದಲೇ ಮತ್ತೊಬ್ಬನನ್ನು ಮೋಸದಿಂದ ಕೊಂದವನನ್ನು ನನ್ನ ಯಜ್ಞವೇದಿಯ ಬಳಿಯಿಂದಲೂ ಎಳೆದು ಅವನಿಗೆ ಮರಣಶಿಕ್ಷೆಯನ್ನು ಕೊಡಬೇಕು.


ಮನುಷ್ಯನನ್ನು ಹೊಡೆದು ಕೊಂದವನಿಗೆ ಮರಣ ಶಿಕ್ಷೆಯಾಗಬೇಕು.


ಯಾವನಾದರೂ ಮನುಷ್ಯನನ್ನು ಕೊಲ್ಲುವಷ್ಟು ದೊಡ್ಡ ಕಲ್ಲನ್ನು ಕೈಯಲ್ಲಿ ಹಿಡಿದು ಮತ್ತೊಬ್ಬನನ್ನು ಹೊಡೆದು ಕೊಂದರೆ ಅವನು ನರಹತ್ಯಮಾಡಿದವನೇ; ಅವನಿಗೆ ಮರಣಶಿಕ್ಷೆಯಾಗಬೇಕು.


ಯಾವನಾದರೂ ಮತ್ತೊಬ್ಬನನ್ನು ಕೊಂದಾಗ ನೀವು ಸಾಕ್ಷಿಗಳನ್ನು ವಿಚಾರಿಸಿಕೊಂಡು ಅವನಿಗೆ ಮರಣಶಿಕ್ಷೆಯನ್ನು ವಿಧಿಸಬೇಕು. ಒಬ್ಬನೇ ಒಬ್ಬನ ಸಾಕ್ಷಿ ಮಾತ್ರ ಇದ್ದರೆ ಮರಣಶಿಕ್ಷೆಯನ್ನು ವಿಧಿಸಕೂಡದು.


ನೀವು ಆಶ್ರಯ ನಗರಕ್ಕೆ ಓಡಿ ಹೋದವನಿಂದ ಧನವನ್ನು ತೆಗೆದುಕೊಂಡು ಮಹಾಯಾಜಕನು ಜೀವದಿಂದಿರುವಾಗಲೇ ಸ್ವಸ್ಥಳಕ್ಕೆ ಹೋಗಗೊಡಿಸಕೂಡದು.


ಅವರು - ರಹಸ್ಯವಾಗಿ ನರಹತ್ಯ ಮಾಡಿದವನು ಶಾಪಗ್ರಸ್ತ ಎನ್ನಲಾಗಿ ಜನರೆಲ್ಲರೂ - ಹೌದು ಅನ್ನಬೇಕು.


ಅದಕ್ಕೆ ಅವರು - ಸೌಲನ ಸಂತಾನದವರಿಗೂ ನಮಗೂ ಇರುವ ವ್ಯಾಜ್ಯವು ಬೆಳ್ಳಿಬಂಗಾರದಿಂದ ತೀರಲಾರದು; ಇಸ್ರಾಯೇಲ್ಯರನ್ನು ಕೊಲ್ಲುವ ಅಧಿಕಾರವು ನಮಗಿಲ್ಲ ಎಂದು ಉತ್ತರ ಕೊಡಲು ಅರಸನು ಅವರಿಗೆ - ಏನು ಮಾಡಬೇಕು ಹೇಳಿರಿ, ಮಾಡುತ್ತೇನೆ ಅಂದನು.


ವ್ಯಭಿಚಾರಮಾಡುವಂಥ, ರಕ್ತಸುರಿಸುವಂಥ ಹೆಂಗಸರಿಗೆ ತಕ್ಕ ದಂಡನೆಗಳನ್ನು ನಾನು ನಿನಗೆ ವಿಧಿಸಿ ಕೋಪೋದ್ರೇಕದಿಂದಲೂ ರೋಷಾವೇಶದಿಂದಲೂ ನಿನ್ನ ರಕ್ತವನ್ನು ಸುರಿಸುವೆನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು