ಅರಣ್ಯಕಾಂಡ 35:5 - ಕನ್ನಡ ಸತ್ಯವೇದವು J.V. (BSI)5 ನೀವು ಊರಿನ ಹೊರಗಡೆ ನಾಲ್ಕು ದಿಕ್ಕುಗಳಲ್ಲಿಯೂ ಎರಡೆರಡು ಸಾವಿರ ಮೊಳಗಳಷ್ಟು ಉದ್ದವಾಗಿ ಮೇರೆಗಳನ್ನು ಗೊತ್ತುಮಾಡಬೇಕು; ಆ ಭೂವಿುಯ ನಡುವೆಯಲ್ಲಿ ಊರು ಇರಬೇಕು. ವಿುಕ್ಕದ್ದು ಹುಲ್ಲುಗಾವಲು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20195 ನೀವು ಪಟ್ಟಣದ ಹೊರಗಡೆ ಪೂರ್ವ ದಿಕ್ಕಿನಲ್ಲಿ ಎರಡು ಸಾವಿರ ಮೊಳ, ದಕ್ಷಿಣದಲ್ಲಿ ಎರಡು ಸಾವಿರ ಮೊಳ, ಪಶ್ಚಿಮದಲ್ಲಿ ಎರಡು ಸಾವಿರ ಮೊಳ, ಉತ್ತರದಲ್ಲಿ ಎರಡು ಸಾವಿರ ಮೊಳ, ಅಳೆಯಬೇಕು. ಮಧ್ಯದಲ್ಲಿ ಪಟ್ಟಣಗಳಿರಬೇಕು. ಹೀಗೆ ಅವರ ಪಟ್ಟಣಗಳ ಉಪನಗರಗಳು ಇರಬೇಕು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)5 “ಊರಿನ ಹೊರಗಡೆ ನಾಲ್ಕು ದಿಕ್ಕುಗಳಲ್ಲೂ ಎರಡೆರಡು ಸಾವಿರ ಮೊಳಗಳಷ್ಟು ದೂರದಲ್ಲಿ ಎಲ್ಲೆಗಳನ್ನು ಗೊತ್ತುಮಾಡಬೇಕು. ಆ ಭೂಮಿಯ ನಡುವೆ ಊರಿರಬೇಕು. ಮಿಕ್ಕದ್ದು ಹುಲ್ಲುಗಾವಲಾಗಿರಬೇಕು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್5 ಪಟ್ಟಣದ ಹೊರಗೆ ಪ್ರತಿಯೊಂದು ದಿಕ್ಕಿನಲ್ಲಿ ಎರಡು ಸಾವಿರ ಮೊಳಗಳನ್ನು ಅಳೆದು ಪಟ್ಟಣಕ್ಕೆ ಗಡಿಯನ್ನು ಗೊತ್ತುಪಡಿಸಬೇಕು; ಪೂರ್ವದಿಕ್ಕಿನಲ್ಲಿ ಎರಡು ಸಾವಿರ ಮೊಳಗಳು; ದಕ್ಷಿಣದಿಕ್ಕಿನಲ್ಲಿ ಎರಡು ಸಾವಿರ ಮೊಳಗಳು; ಪಶ್ಚಿಮದಿಕ್ಕಿನಲ್ಲಿ ಎರಡು ಸಾವಿರ ಮೊಳಗಳು ಮತ್ತು ಉತ್ತರದಿಕ್ಕಿನಲ್ಲಿ ಎರಡು ಸಾವಿರ ಮೊಳಗಳು. ಇವುಗಳ ಮಧ್ಯದಲ್ಲಿ ಪಟ್ಟಣವಿರಬೇಕು. ಅದು ಅವರ ಪಟ್ಟಣಗಳಿಗೆ ಹುಲ್ಲುಗಾವಲುಗಳಾಗಿರುವುದು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ5 ನೀವು ಪಟ್ಟಣದ ಹೊರಗೆ ಪೂರ್ವದಲ್ಲಿ ಎರಡು ಸಾವಿರ ಮೊಳ, ದಕ್ಷಿಣದಲ್ಲಿ ಎರಡು ಸಾವಿರ ಮೊಳ, ಪಶ್ಚಿಮದಲ್ಲಿ ಎರಡು ಸಾವಿರ ಮೊಳ, ಉತ್ತರದಲ್ಲಿ ಎರಡು ಸಾವಿರ ಮೊಳ ಅಳೆಯಬೇಕು. ಮಧ್ಯದಲ್ಲಿ ಪಟ್ಟಣವಿರಬೇಕು. ಹೀಗೆ ಅವರ ಪಟ್ಟಣಗಳ ಉಪನಗರಗಳು ಇರಬೇಕು. ಅಧ್ಯಾಯವನ್ನು ನೋಡಿ |