Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅರಣ್ಯಕಾಂಡ 35:6 - ಕನ್ನಡ ಸತ್ಯವೇದವು J.V. (BSI)

6 ಮನುಷ್ಯ ಹತ್ಯಮಾಡಿದವರು ಆಶ್ರಯಕ್ಕಾಗಿ ಓಡಿಹೋಗುವದಕ್ಕೋಸ್ಕರ ನೀವು ನೇವಿುಸುವ ಆರು ಆಶ್ರಯ ನಗರಗಳನ್ನೂ ಬೇರೆ ನಾಲ್ವತ್ತೆರಡು ಪಟ್ಟಣಗಳನ್ನೂ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ಮನುಷ್ಯನನ್ನು ಹತ್ಯೆಮಾಡಿದವರು ಆಶ್ರಯಕ್ಕಾಗಿ ಓಡಿ ಹೋಗುವುದಕ್ಕೋಸ್ಕರ ನೀವು ನೇಮಿಸುವ ಆರು ಆಶ್ರಯನಗರಗಳನ್ನೂ, ಬೇರೆ ನಲ್ವತ್ತೆರಡು ಪಟ್ಟಣಗಳನ್ನೂ ಅಂತು ನಲ್ವತ್ತೆಂಟು ಪಟ್ಟಣಗಳನ್ನು ಲೇವಿಯರಿಗೆ ಕೊಡಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

6 ಮನುಷ್ಯಹತ್ಯೆ ಮಾಡಿದವರು ಆಶ್ರಯಕ್ಕಾಗಿ ಓಡಿಹೋಗಲು ನೀವು ನೇಮಿಸುವ ಆರು ಆಶ್ರಯನಗರಗಳನ್ನೂ ಬೇರೆ ನಾಲ್ವತ್ತೆರಡು ಪಟ್ಟಣಗಳನ್ನೂ, ಹೀಗೆ ನಾಲ್ವತ್ತೆಂಟು ಊರುಗಳನ್ನೂ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

6 ನೀವು ಲೇವಿಯರಿಗೆ ಕೊಡುವ ಆರು ಪಟ್ಟಣಗಳು ಆಶ್ರಯ ನಗರಗಳಾಗಿರುತ್ತವೆ. ಬೇರೊಬ್ಬನನ್ನು ಕೊಂದು ಸಂರಕ್ಷಣೆಗಾಗಿ ಓಡಿಹೋಗುವವರು ಈ ಪಟ್ಟಣಗಳಿಗೆ ಬಂದು ಸಂರಕ್ಷಣೆ ಪಡೆಯಲು ನೀವು ಅವಕಾಶ ಕೊಡಬೇಕು. ಇದಲ್ಲದೆ ಇತರ ನಲವತ್ತೆರಡು ಪಟ್ಟಣಗಳನ್ನು ನೀವು ಲೇವಿಯರಿಗೆ ಕೊಡಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

6 “ನೀವು ಲೇವಿಯರಿಗೆ ಕೊಡುವ ಪಟ್ಟಣಗಳೊಳಗೆ ಮನುಷ್ಯ ಹತ್ಯೆ ಮಾಡಿದವನು ಅಲ್ಲಿಗೆ ಓಡುವ ಹಾಗೆ ಆರು ಆಶ್ರಯದ ಪಟ್ಟಣಗಳನ್ನು ನೇಮಿಸಬೇಕು. ಅವುಗಳ ಹೊರತು ನೀವು ನಲವತ್ತೆರಡು ಪಟ್ಟಣಗಳನ್ನು ಕೊಡಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅರಣ್ಯಕಾಂಡ 35:6
18 ತಿಳಿವುಗಳ ಹೋಲಿಕೆ  

ಮಹಾಯಾಜಕನಾದ ಆರೋನನ ವಂಶದವರಿಗೆ ಮೇಲೆ ಹೇಳಿದ ಎರಡು ಕುಲಗಳಿಂದ ಹೆಬ್ರೋನೆಂಬ ಆಶ್ರಯ ನಗರ,


ಅವರು ಯೆಹೋವನ ಆಜ್ಞೆಯಂತೆ ಅವರಿಗೆ ತಮ್ಮ ಸ್ವಾಸ್ತ್ಯದಿಂದ ಕೆಳಗೆ ಬರೆದಷ್ಟು ಪಟ್ಟಣಗಳನ್ನೂ ಅವುಗಳಿಗೆ ಸೇರಿದ ಗೋಮಾಳಗಳನ್ನೂ ಕೊಟ್ಟುಬಿಟ್ಟರು.


ಯೆಹೋವನು ಕುಗ್ಗಿಹೋದವರಿಗೆ ಆಶ್ರಯವೂ ಆಪತ್ಕಾಲದಲ್ಲಿ ದುರ್ಗವೂ ಆಗಿರುವನು.


ಗಾದ್ಯರ ಸ್ವಾಸ್ತ್ಯದಿಂದ ಕೊಲೆಮಾಡಿದವನ ಆಶ್ರಯನಗರವಾಗಿರುವ ಗಿಲ್ಯಾದಿನ ರಾಮೋತ್,


ರೂಬೇನ್ಯರ ಸ್ವಾಸ್ತ್ಯದಿಂದ ಬೆಚೆರ್, ಯಹಚಾ,


ನಫ್ತಾಲಿ ಸ್ವಾಸ್ತ್ಯದಿಂದ ಕೊಲೆಮಾಡಿದವನ ಆಶ್ರಯನಗರವಾದ ಗಲಿಲಾಯದ ಕೆದೆಷ್, ಹಮ್ಮೋತ್‍ದೋರ್, ಕರ್ತಾನ್ ಎಂಬ ಗೋಮಾಳಸಹಿತವಾದ ಮೂರು ಪಟ್ಟಣಗಳೂ ದೊರಕಿದವು.


ಗೇರ್ಷೋನ್ಯರ ಕುಟುಂಬಗಳಿಗೆ ಅರ್ಧಮನಸ್ಸೆಯವರ ಸ್ವಾಸ್ತ್ಯದಿಂದ ಕೊಲೆಮಾಡಿದವನ ಆಶ್ರಯನಗರವಾದ ಬಾಷಾನಿನ ಗೋಲಾನ್, ಬೆಯೆಷ್ಟೆರಾ ಎಂಬ ಗೋಮಾಳ ಸಹಿತವಾದ ಎರಡು ಪಟ್ಟಣಗಳೂ


ಎಫ್ರಾಯೀಮ್ಯರ ಸ್ವಾಸ್ತ್ಯದಿಂದ ಬೆಟ್ಟದಲ್ಲಿರುವ ಶೆಕೆಮೆಂಬ ಆಶ್ರಯನಗರ,


ಆಶ್ರಯವನ್ನು ಹೊಂದಬೇಕೆಂದು ಓಡಿಬಂದು ನಮ್ಮ ಮುಂದೆ ಇಟ್ಟಿರುವ ನಿರೀಕ್ಷೆಯನ್ನು ಹಿಡಿದುಕೊಂಡವರಾದ ನಮಗೆ ಎರಡು ನಿಶ್ಚಲವಾದ ಆಧಾರಗಳು ಇರುವ ಕಾರಣ ಬಲವಾದ ಧೈರ್ಯವುಂಟಾಯಿತು.


ಎಲೈ ಕಷ್ಟಪಡುವವರೇ, ಹೊರೆಹೊತ್ತವರೇ, ನೀವೆಲ್ಲರೂ ನನ್ನ ಬಳಿಗೆ ಬನ್ನಿರಿ; ನಾನು ನಿಮಗೆ ವಿಶ್ರಾಂತಿಕೊಡುವೆನು.


ಹಗಲಿನ ಬಿಸಿಲಲ್ಲಿ ನೆರಳನ್ನೂ ಸಣ್ಣ ದೊಡ್ಡ ಮಳೆಗಳಲ್ಲಿ ಆಶ್ರಯವನ್ನೂ ಕೊಡುವ ಮಂಟಪವಿರುವದು.


ನೀವು ಊರಿನ ಹೊರಗಡೆ ನಾಲ್ಕು ದಿಕ್ಕುಗಳಲ್ಲಿಯೂ ಎರಡೆರಡು ಸಾವಿರ ಮೊಳಗಳಷ್ಟು ಉದ್ದವಾಗಿ ಮೇರೆಗಳನ್ನು ಗೊತ್ತುಮಾಡಬೇಕು; ಆ ಭೂವಿುಯ ನಡುವೆಯಲ್ಲಿ ಊರು ಇರಬೇಕು. ವಿುಕ್ಕದ್ದು ಹುಲ್ಲುಗಾವಲು.


ಆದರೆ ಕೊಲ್ಲಬೇಕೆಂಬ ಅಭಿಪ್ರಾಯವಿಲ್ಲದೆ ದೇವರ ಸಂಕಲ್ಪದಿಂದ ಹತ್ಯ ನಡೆದರೆ ಆ ಹತ್ಯ ಮಾಡಿದವನು ನಾನು ನೇವಿುಸುವ ಆಶ್ರಯಸ್ಥಳಕ್ಕೆ ಓಡಿಹೋಗಿ ಬದುಕಬಹುದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು