8 ಇಸ್ರಾಯೇಲ್ಯರ ಸ್ವಾಸ್ತ್ಯದಲ್ಲಿ ಆಯಾ ಕುಲದ ಸ್ವಾಸ್ತ್ಯದ ಪ್ರಮಾಣಕ್ಕೆ ತಕ್ಕ ಹಾಗೆ ಅಂದರೆ ಹೆಚ್ಚಾದ ಮಂದಿಯುಳ್ಳವರಿಂದ ಹೆಚ್ಚಾಗಿಯೂ ಕಡಿಮೆಯಾದ ಮಂದಿಯುಳ್ಳವರಿಂದ ಕಡಿಮೆಯಾಗಿಯೂ ಲೇವಿಯರಿಗೋಸ್ಕರ ಊರುಗಳನ್ನು ಕೊಡಿಸಬೇಕು.
8 ಇಸ್ರಾಯೇಲರ ಸ್ವತ್ತಿನಲ್ಲಿ ಆಯಾ ಕುಲದ ಸ್ವತ್ತಿನ ಪ್ರಮಾಣಕ್ಕೆ ತಕ್ಕ ಹಾಗೆ ಹೆಚ್ಚಾದ ಜನರುಳ್ಳವರಿಂದ ಹೆಚ್ಚಾಗಿಯೂ, ಕಡಿಮೆಯಾದ ಜನರಿಂದ ಕಡಿಮೆಯಾಗಿಯೂ ಲೇವಿಯರಿಗೋಸ್ಕರ ಊರುಗಳನ್ನು ಕೊಡಿಸಬೇಕು.”
8 ನೀವು ಇತರ ಇಸ್ರೇಲರ ಆಸ್ತಿಯಿಂದ ಲೇವಿಯರಿಗೆ ಪಟ್ಟಣಗಳನ್ನು ಕೊಡುವಾಗ, ಪ್ರತಿಯೊಂದು ಕುಲವು ಹೊಂದಿರುವ ಭೂಮಿಗನುಸಾರವಾಗಿ ಕೊಡಬೇಕು. ದೊಡ್ಡಕುಲಗಳಿಂದ ಹೆಚ್ಚು ಪಟ್ಟಣಗಳನ್ನೂ ಚಿಕ್ಕಕುಲಗಳಿಂದ ಕೆಲವು ಪಟ್ಟಣಗಳನ್ನೂ ತೆಗೆದುಕೊಳ್ಳಿ.”
8 ನೀವು ಇಸ್ರಾಯೇಲರ ಸ್ವಾಧೀನದಿಂದ ಕೊಡುವ ಪಟ್ಟಣಗಳನ್ನು ಹೆಚ್ಚಾದವರ ಕಡೆಯಿಂದ ಹೆಚ್ಚಾಗಿ, ಕಡಿಮೆಯಾದವರ ಕಡೆಯಿಂದ ಕಡಿಮೆಯಾಗಿ ತೆಗೆದುಕೊಳ್ಳಬೇಕು. ಒಬ್ಬೊಬ್ಬನು ತಾನು ಹೊಂದುವ ಸೊತ್ತಿಗನುಸಾರವಾಗಿ ತನ್ನ ಪಟ್ಟಣಗಳೊಳಗಿಂದ ಲೇವಿಯರಿಗೆ ಕೊಡಬೇಕು,” ಎಂದು ಹೇಳಿದರು.
ನೀವು ಚೀಟುಹಾಕಿ ಆ ದೇಶವನ್ನು ನಿಮ್ಮನಿಮ್ಮ ಕುಟುಂಬಗಳಿಗೆ ಹಂಚಿಕೊಳ್ಳಬೇಕು. ಹೆಚ್ಚು ಮಂದಿಯುಳ್ಳ ಕುಟುಂಬಕ್ಕೆ ಹೆಚ್ಚಾಗಿಯೂ ಕಡಿಮೆಯಾದ ಕುಟುಂಬಕ್ಕೆ ಕಡಿಮೆಯಾಗಿಯೂ ಸ್ವಾಸ್ತ್ಯವು ದೊರಕಬೇಕು. ಒಂದೊಂದು ಕುಟುಂಬದ ಚೀಟು ಯಾವ ಯಾವ ಸ್ಥಳವನ್ನು ಸೂಚಿಸುವದೋ ಆ ಸ್ಥಳದಲ್ಲಿಯೇ ಆ ಕುಟುಂಬದ ಸ್ವಾಸ್ತ್ಯವಿರಬೇಕು. ಒಂದೊಂದು ಕುಲದ ಕುಟುಂಬಗಳು ಒಂದೇ ಪ್ರದೇಶದಲ್ಲಿರಬೇಕು.