Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅರಣ್ಯಕಾಂಡ 36:9 - ಕನ್ನಡ ಸತ್ಯವೇದವು J.V. (BSI)

9 ಹೀಗೆ ಯಾವ ಸ್ವಾಸ್ತ್ಯವೂ ಒಂದು ಕುಲದಿಂದ ಬೇರೊಂದು ಕುಲಕ್ಕೆ ಹೋಗದೆ ಇಸ್ರಾಯೇಲ್ಯರ ಪ್ರತಿಯೊಂದು ಕುಲವು ತನ್ನ ಸ್ವಾಸ್ತ್ಯವನ್ನು ಹೊಂದಿಕೊಂಡೇ ಇರುವದು ಎಂದು ಆಜ್ಞಾಪಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 ಹೀಗೆ ಯಾವ ಸ್ವಾಸ್ತ್ಯವೂ ಒಂದು ಕುಲದಿಂದ ಬೇರೊಂದು ಕುಲಕ್ಕೆ ಹೋಗದೆ ಇಸ್ರಾಯೇಲರ ಪ್ರತಿಯೊಂದು ಕುಲವು ತನ್ನ ಸ್ವತ್ತನ್ನು ಹೊಂದಿಕೊಂಡೇ ಇರುವುದು” ಎಂದು ಆಜ್ಞಾಪಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

9 ಹೀಗೆ ಯಾವ ಸೊತ್ತು ಒಂದು ಕುಲದಿಂದ ಬೇರೊಂದು ಕುಲಕ್ಕೆ ಹೋಗದೆ ಇಸ್ರಯೇಲರ ಪ್ರತಿಯೊಂದು ಕುಲವೂ ತನ್ನ ಸೊತ್ತನ್ನು ಹೊಂದಿರುತ್ತದೆ,” ಎಂದು ಆಜ್ಞಾಪಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

9 ಹೀಗೆ ಯಾವ ಸ್ವಾಸ್ತ್ಯವೂ ಒಂದು ಕುಲದಿಂದ ಬೇರೊಂದು ಕುಲಕ್ಕೆ ಹೋಗದೆ ಇಸ್ರೇಲರ ಪ್ರತಿಯೊಂದು ಕುಲವು ತನ್ನ ಸ್ವಾಸ್ತ್ಯವನ್ನು ಹೊಂದಿಕೊಂಡೇ ಇರುವುದು” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

9 ಒಂದು ಸೊತ್ತು ಒಂದು ಗೋತ್ರದಿಂದ ಮತ್ತೊಂದು ಗೋತ್ರಕ್ಕೆ ಹಸ್ತಾಂತರಗೊಳ್ಳಬಾರದು ಆದರೆ ಇಸ್ರಾಯೇಲರ ಗೋತ್ರಗಳಲ್ಲಿ ಒಬ್ಬೊಬ್ಬನು ತನ್ನ ಸೊತ್ತಿಗೆ ತಾನೇ ಹೊಂದಿಕೊಳ್ಳಬೇಕು,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅರಣ್ಯಕಾಂಡ 36:9
6 ತಿಳಿವುಗಳ ಹೋಲಿಕೆ  

ಇದಕ್ಕಾಗಿ ಇಸ್ರಾಯೇಲ್ಯರಲ್ಲಿ ಸ್ವಾಸ್ತ್ಯವನ್ನು ಹೊಂದಿದ ಹೆಣ್ಣುಮಕ್ಕಳು ಸ್ವಕುಲದಲ್ಲಿಯೇ ಮದುವೆ ಮಾಡಿಕೊಳ್ಳಬೇಕು.


ಚಲ್ಪಹಾದನ ಹೆಣ್ಣುಮಕ್ಕಳಾದ ಮಹ್ಲಾ, ತಿರ್ಚಾ, ಹೊಗ್ಲಾ, ವಿುಲ್ಕಾ, ನೋವಾ ಎಂಬವರು ಯೆಹೋವನ ಆಜ್ಞಾನುಸಾರ ನಡೆದು ತಂದೆಯ ಅಣ್ಣತಮ್ಮಂದಿರ ಮಕ್ಕಳನ್ನು ಮದುವೆಮಾಡಿಕೊಂಡರು.


ಇಸ್ರಾಯೇಲ್ಯರ ಯಾವ ಸ್ವಾಸ್ತ್ಯವೂ ಒಂದು ಕುಲದಿಂದ ಬೇರೊಂದು ಕುಲಕ್ಕೆ ಹೋಗಬಾರದು. ಇಸ್ರಾಯೇಲ್ಯರೆಲ್ಲರೂ ತಮ್ಮ ತಮ್ಮ ಕುಲಗಳ ಸ್ವಾಸ್ತ್ಯವನ್ನು ಹೊಂದಿಕೊಂಡೇ ಇರಬೇಕು.


ಅವರನ್ನು ಅವರವರ ಸ್ವಾಸ್ತ್ಯಗಳಿಗೆ ಕಳುಹಿಸಿದನು.


ನನ್ನ ಅರಸನಾದ ಒಡೆಯನು ದಯವಿಟ್ಟು ತನ್ನ ಸೇವಕನ ಮಾತುಗಳನ್ನು ಲಾಲಿಸಬೇಕು. ನಿನ್ನನ್ನು ನನಗೆ ವಿರೋಧವಾಗಿ ಎಬ್ಬಿಸಿದವನು ಯೆಹೋವನೇ ಆಗಿರುವ ಪಕ್ಷದಲ್ಲಿ ಆತನಿಗೆ ಗಮಗವಿುಸುವ ನೈವೇದ್ಯವನ್ನು ಸಮರ್ಪಿಸಬೇಕು; ಮನುಷ್ಯರಾಗಿದ್ದರೆ ಈಗ ಅವರು ನನಗೆ ಯೆಹೋವನ ಸ್ವಾಸ್ತ್ಯದಲ್ಲಿ ಪಾಲುಸಿಕ್ಕದಂತೆ - ಹೋಗಿ ಅನ್ಯದೇವತೆಗಳನ್ನು ಸೇವಿಸು ಎಂದು ನನ್ನನ್ನು ತಳ್ಳಿಬಿಟ್ಟಿದ್ದಾರಾದದರಿಂದ ಯೆಹೋವನ ದೃಷ್ಟಿಯಲ್ಲಿ ಅವರು ಶಾಪಗ್ರಸ್ತರಾಗಿರಲಿ.


ಅದಕ್ಕೆ ನಾಬೋತನು - ನಾನು ಪಿತ್ರಾರ್ಜಿತ ಸ್ವಾಸ್ತ್ಯವನ್ನು ನಿನಗೆ ಮಾರದಂತೆ ಯೆಹೋವನು ನನ್ನನ್ನು ತಡೆಯಲಿ ಎಂದು ಉತ್ತರಕೊಟ್ಟನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು