Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅರಣ್ಯಕಾಂಡ 4:12 - ಕನ್ನಡ ಸತ್ಯವೇದವು J.V. (BSI)

12 ದೇವಸ್ಥಾನದ ಸೇವೋಪಕರಣಗಳನ್ನೆಲ್ಲಾ ನೀಲಿಬಟ್ಟೆಯಲ್ಲಿ ಇಟ್ಟು ಕಡಲುಹಂದಿಯ ತೊಗಲನ್ನು ಹೊದಿಸಿ ಅಡ್ಡದಂಡಕ್ಕೆ ಕಟ್ಟಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

12 ದೇವಸ್ಥಾನದ ಸರ್ವ ಉಪಕರಣಗಳನ್ನೆಲ್ಲಾ ನೀಲಿಬಟ್ಟೆಯಲ್ಲಿ ಇಟ್ಟು, ಹಸನಾದ ತೊಗಲನ್ನು ಹೊದಿಸಿ ಅಡ್ಡ ದಂಡಕ್ಕೆ ಕಟ್ಟಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

12 ದೇವಸ್ಥಾನದ ಸೇವೋಪಕರಣಗಳನ್ನೆಲ್ಲಾ ನೀಲಿ ಬಟ್ಟೆಯಲ್ಲಿಟ್ಟು, ಹಸನಾದ ತೊಗಲನ್ನು ಹೊದಿಸಿ ಅಡ್ಡ ದಂಡಕ್ಕೆ ಕಟ್ಟಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

12 “ಬಳಿಕ ಆರಾಧನೆಗಾಗಿ ಪವಿತ್ರಸ್ಥಳದಲ್ಲಿ ಉಪಯೋಗಿಸಲ್ಪಡುವ ಎಲ್ಲಾ ವಿಶೇಷ ವಸ್ತುಗಳನ್ನು ಒಟ್ಟಾಗಿ ಸೇರಿಸಬೇಕು. ಅವುಗಳನ್ನು ನೀಲಿಬಟ್ಟೆಯಿಂದ ಮುಚ್ಚಬೇಕು. ಬಳಿಕ ಅವುಗಳಿಗೆ ಶ್ರೇಷ್ಠವಾದ ತೊಗಲನ್ನು ಹೊದಿಸಬೇಕು. ಅವರು ಈ ವಸ್ತುಗಳನ್ನು ಹೊರುವುದಕ್ಕಾಗಿ ಚೌಕಟ್ಟಿಗೆ ಕಟ್ಟಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

12 “ಪರಿಶುದ್ಧ ಸ್ಥಳದಲ್ಲಿ ಸೇವೆ ಮಾಡುವ ಸೇವೆಯ ಎಲ್ಲಾ ಸಲಕರಣೆಗಳನ್ನು ಅವರು ತೆಗೆದುಕೊಂಡು ನೀಲಿ ವಸ್ತ್ರದಿಂದ ಕಟ್ಟಿ, ಕಡಲುಹಂದಿಯ ಚರ್ಮಗಳ ಹೊದಿಕೆಯಿಂದ ಮುಚ್ಚಿ, ಅಡ್ಡ ದಂಡಕ್ಕೆ ಕಟ್ಟಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅರಣ್ಯಕಾಂಡ 4:12
16 ತಿಳಿವುಗಳ ಹೋಲಿಕೆ  

ಇನ್ನು ಕೆಲವರು ದೇವಾಲಯದ ಎಲ್ಲಾ ಸಾಮಾನುಗಳ ಮೇಲ್ವಿಚಾರಕರೂ ಗೋದಿಹಿಟ್ಟು, ದ್ರಾಕ್ಷಾರಸ, ಎಣ್ಣೆ, ಧೂಪ, ಪರಿಮಳದ್ರವ್ಯ ಇವುಗಳ ಪಾರುಪತ್ಯಗಾರರು ಆಗಿದ್ದರು.


ಚೊಕ್ಕಬಂಗಾರದ ಕತ್ತರಿ, ಬೋಗುಣಿ, ಧೂಪಾರತಿ, ಅಗ್ಗಿಷ್ಟಿಗೆ, ದೇವಾಲಯದ ಮಹಾಪರಿಶುದ್ಧಸ್ಥಳದೊಳಗಣ ಬಾಗಲಿನ ಬಂಗಾರಕದಗಳು, ಪರಿಶುದ್ಧಸ್ಥಳದ ಬಂಗಾರ ಕದಗಳು ಇವೇ.


ಅವನು ದೇವಾಲಯಕ್ಕೋಸ್ಕರ ಮಾಡಿಸಿದ ಒಳಗಿನ ಸಾಮಾನುಗಳು ಯಾವವಂದರೆ - ಬಂಗಾರದ ಧೂಪವೇದಿ, ನೈವೇದ್ಯವಾದ ರೊಟ್ಟಿಗಳನ್ನಿಡತಕ್ಕ ಮೇಜುಗಳು,


ಹೂರಾಮಾಬೀವನು ಅರಸನಾದ ಸೊಲೊಮೋನನ ಅಪ್ಪಣೆಯ ಮೇರೆಗೆ ಯೆಹೋವನ ಆಲಯಕ್ಕೋಸ್ಕರ ಅದರ ಎಲ್ಲಾ ಸಾಮಾನುಗಳನ್ನು ಒಪ್ಪಹಾಕಿದ ತಾಮ್ರದಿಂದ ಮಾಡಿ ತೀರಿಸಿದನು.


ಇದಲ್ಲದೆ ಹೂರಾಮನು ಹಂಡೆಗಳನ್ನೂ ಸಲಿಕೆಗಳನ್ನೂ ಬೋಗುಣಿಗಳನ್ನೂ ಮಾಡಿದನು. ಹೂರಾಮನು ಸೊಲೊಮೋನನ ಅಪ್ಪಣೆಯಂತೆ ದೇವಾಲಯಕ್ಕೋಸ್ಕರ ಮಾಡಿದ ಸಾಮಾನುಗಳು ಯಾವವಂದರೆ -


ಆಮೇಲೆ ಅವರು ದೀಪಸ್ತಂಭವನ್ನೂ ಅದಕ್ಕೆ ಸಂಬಂಧಪಟ್ಟ ಹಣತೆಗಳನ್ನೂ ಕತ್ತರಿಗಳನ್ನೂ ದೀಪದ ಕುಡಿತೆಗೆಯುವ ಬಟ್ಟಲುಗಳನ್ನೂ ಎಣ್ಣೆಯ ಪಾತ್ರೆಗಳನ್ನೂ ನೀಲಿಬಟ್ಟೆಯಿಂದ ಮುಚ್ಚಿಬಿಟ್ಟು


ಬಳಿಕ ಅವರು ಯೆಹೋವನ ಸಮ್ಮುಖದಲ್ಲಿರುವ ಮೇಜಿನ ಮೇಲೆ ನೀಲಿ ಬಟ್ಟೆಯನ್ನು ಹಾಸಿ ಅದರ ಮೇಲೆ ಮೇಜಿಗೆ ಸೇರಿದ ಹರಿವಾಣಗಳನ್ನೂ ಧೂಪಾರತಿಗಳನ್ನೂ ಹೂಜೆಗಳನ್ನೂ ಪಾನದ್ರವ್ಯಾರ್ಪಣೆಯ ಬಟ್ಟಲುಗಳನ್ನೂ ಇಡಬೇಕು. ಯಾವಾಗಲೂ ಇರಬೇಕಾದ ರೊಟ್ಟಿಗಳೂ ಅದರ ಮೇಲೆ ಇರಬೇಕು.


ಅವರು ದೇವದರ್ಶನದ ಗುಡಾರದ ಸಾಮಾನುಗಳನ್ನು ಕಾಯಬೇಕು; ಇಸ್ರಾಯೇಲ್ಯರಿಗೋಸ್ಕರ ದೇವಸ್ಥಾನದ ಪರಿಚರ್ಯವನ್ನು ನಡಿಸಬೇಕು.


ಗಂಗಾಳ, ಅದರ ಪೀಠ, ಅಲಂಕಾರವಾದ ದೀಕ್ಷಾವಸ್ತ್ರಗಳು ಅಂದರೆ ಮಹಾಯಾಜಕನಾದ ಆರೋನನಿಗೂ ಅವನ ಮಕ್ಕಳಿಗೂ ಬೇಕಾದ ಯಾಜಕವಸ್ತ್ರಗಳು,


ನಾನು ನಿನಗೆ ತೋರಿಸುವ ಮಾದರಿಯ ಪ್ರಕಾರವೇ ಗುಡಾರವನ್ನೂ ಅದರಲ್ಲಿರುವ ಎಲ್ಲಾ ಸಾಮಾನುಗಳನ್ನೂ ಮಾಡಿಸಬೇಕು.


ಹದಮಾಡಿರುವ ಕೆಂಪುಬಣ್ಣದ ಕುರಿದೊಗಲುಗಳೂ ಕಡಲು ಹಂದಿಯ ತೊಗಲುಗಳೂ ಜಾಲೀಮರವೂ


ಅದರ ಮೇಲೆ ಕಡಲುಹಂದಿಯ ತೊಗಲನ್ನೂ ನೀಲಿಬಟ್ಟೆಯನ್ನೂ ಹೊದಿಸಿ [ಮಂಜೂಷದ ಬಳೆಗಳಲ್ಲಿ] ಹೊರುವ ಕೋಲುಗಳನ್ನು ಸೇರಿಸಬೇಕು.


ತರುವಾಯ ಅವರು ಬಂಗಾರದ ವೇದಿಯ ಮೇಲೆ ನೀಲಿಬಟ್ಟೆಯನ್ನು ಹಾಸಿ ಕಡಲು ಹಂದಿಯ ತೊಗಲನ್ನು ಹೊದಿಸಿ ಹೊರುವ ಕೋಲುಗಳನ್ನು ಹಾಕಬೇಕು.


ಆಗ ಅವರು ಯಜ್ಞವೇದಿಯ ಬೂದಿಯನ್ನು ತೆಗೆದುಬಿಟ್ಟು ಆ ವೇದಿಯ ಮೇಲೆ ಧೂಮ್ರವರ್ಣದ ಬಟ್ಟೆಯನ್ನು ಹಾಸಿ


ಇದಲ್ಲದೆ ಅವರಲ್ಲಿ ಕೆಲವರು ಪೂಜಾಸಾಮಗ್ರಿಗಳನ್ನು ನೋಡಿಕೊಳ್ಳುವವರಾಗಿದ್ದರು. ಅವುಗಳನ್ನು ಕೊಡುವಾಗಲೂ ತಿರಿಗಿ ತೆಗೆದುಕೊಳ್ಳುವಾಗಲೂ ಲೆಕ್ಕಿಸುತ್ತಿದ್ದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು