Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅರಣ್ಯಕಾಂಡ 4:32 - ಕನ್ನಡ ಸತ್ಯವೇದವು J.V. (BSI)

32 ಇವುಗಳ ಗದ್ದಿಗೇಕಲ್ಲುಗಳನ್ನೂ ಗೂಟಗಳನ್ನೂ ಹಗ್ಗಗಳನ್ನೂ ಎಲ್ಲಾ ಉಪಕರಣಗಳನ್ನೂ ಹೊರಬೇಕು; ಇವುಗಳಿಗೆ ಸಂಬಂಧಪಟ್ಟ ಎಲ್ಲಾ ಕೆಲಸವನ್ನು ಅವರು ಮಾಡಬೇಕು. ಅವರವರ ಹೊರೆಗಳನ್ನೆಲ್ಲಾ ನೀವು ಹೆಸರು ಹೇಳಿ ಗೊತ್ತುಮಾಡಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

32 ಅಂಗಳದ ಕಂಬಗಳನ್ನು, ಇವುಗಳ ಗದ್ದಿಗೆಕಲ್ಲುಗಳನ್ನೂ, ಗೂಟಗಳನ್ನೂ, ಹಗ್ಗಗಳನ್ನೂ ಎಲ್ಲಾ ಉಪಕರಣಗಳನ್ನೂ ಹೊರಬೇಕು; ಇವುಗಳಿಗೆ ಸಂಬಂಧಪಟ್ಟ ಎಲ್ಲಾ ಕೆಲಸವನ್ನು ಅವರು ಮಾಡಬೇಕು. ಅವರವರ ಜವಾಬ್ದಾರಿಗಳನ್ನೆಲ್ಲಾ ನೀವು ಹೆಸರು ಹೇಳಿ ಗೊತ್ತುಮಾಡಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

32 ಅವರು ಗುಡಾರದ ಚೌಕಟ್ಟುಗಳನ್ನು, ಅಗುಳಿಗಳನ್ನು, ಕಂಬಗಳನ್ನು, ಗದ್ದಿಗೆ ಕಲ್ಲುಗಳನ್ನು, ಗೂಟಗಳನ್ನು, ಹಗ್ಗಗಳನ್ನು ಮತ್ತು ಅವುಗಳ ಎಲ್ಲ ಉಪಕರಣಗಳನ್ನು ಹೊರಬೇಕು. ಅವರವರ ಹೊರೆಗಳನ್ನೆಲ್ಲ ನೀವೇ ಹೆಸರಿಸಿ ಗೊತ್ತುಮಾಡಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

32 ಅಂಗಳದ ಸ್ತಂಭಗಳು ಮತ್ತು ಅವುಗಳ ಗದ್ದಿಗೇಕಲ್ಲುಗಳು, ಅಗುಳಿಗಳು, ಹಗ್ಗಗಳು ಮತ್ತು ಅವರ ಕೆಲಸಕ್ಕೆ ಬೇಕಾದ ಎಲ್ಲಾ ಉಪಕರಣಗಳು. ಅವರು ವರ್ಗಾಯಿಸಬೇಕಾದ ಮತ್ತು ಕಾವಲುಕಾಯಬೇಕಾದ ವಸ್ತುಗಳನ್ನು ನೀನು ಹೆಸರೆಸರಾಗಿ ಅವರಿಗೆ ವಹಿಸಿಕೊಡಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

32 ಸುತ್ತಲಿರುವ ಅಂಗಳದ ಕಂಬಗಳ ಆಧಾರಗಳೂ ಅದರ ಗದ್ದಿಗೇ ಕಲ್ಲುಗಳೂ ಅದರ ಗೂಟಗಳೂ ಅವುಗಳ ಹಗ್ಗಗಳೂ ಅವುಗಳ ಎಲ್ಲಾ ಸಲಕರಣೆಗಳ ಪ್ರಕಾರವಾಗಿಯೂ ಅವುಗಳ ಸಮಸ್ತ ಸೇವೆಯ ಪ್ರಕಾರವಾಗಿಯೂ ಅವರು ಹೊರುವುದಕ್ಕೆ ಕೊಟ್ಟ ಅಪ್ಪಣೆಯ ಸಲಕರಣೆಗಳನ್ನು ನೀವು ಹೆಸರೆಸರಾಗಿ ಎಣಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅರಣ್ಯಕಾಂಡ 4:32
12 ತಿಳಿವುಗಳ ಹೋಲಿಕೆ  

ದೇವದರ್ಶನದ ಗುಡಾರವನ್ನು ಮಾಡುವದರಲ್ಲಿ ಉಪಯೋಗಿಸಿದ ಪದಾರ್ಥಗಳ ಲೆಕ್ಕ. ಮೋಶೆಯ ಆಜ್ಞೆಯ ಮೇರೆಗೆ ಮಹಾಯಾಜಕನಾದ ಆರೋನನ ಮಗ ಈತಾಮಾರನು ಲೇವಿಯರ ಕೈಯಿಂದ ಲೆಕ್ಕ ಮಾಡಿಸಿದ್ದು.


ಇನ್ನು ಕೆಲವರು ದೇವಾಲಯದ ಎಲ್ಲಾ ಸಾಮಾನುಗಳ ಮೇಲ್ವಿಚಾರಕರೂ ಗೋದಿಹಿಟ್ಟು, ದ್ರಾಕ್ಷಾರಸ, ಎಣ್ಣೆ, ಧೂಪ, ಪರಿಮಳದ್ರವ್ಯ ಇವುಗಳ ಪಾರುಪತ್ಯಗಾರರು ಆಗಿದ್ದರು.


ಮೋಶೆ ದೇವದರ್ಶನದ ಗುಡಾರವನ್ನು ಎತ್ತಿ ನಿಲ್ಲಿಸಿ ಅದನ್ನೂ ಅದರ ಸಾಮಾನುಗಳನ್ನೂ ಯಜ್ಞವೇದಿಯನ್ನೂ ವೇದಿಯ ಉಪಕರಣಗಳನ್ನೂ ಅಭಿಷೇಕಿಸಿ ಪ್ರತಿಷ್ಠಿಸಿದಾಗ


ಅವರು ದೇವದರ್ಶನದ ಗುಡಾರದ ಸಾಮಾನುಗಳನ್ನು ಕಾಯಬೇಕು; ಇಸ್ರಾಯೇಲ್ಯರಿಗೋಸ್ಕರ ದೇವಸ್ಥಾನದ ಪರಿಚರ್ಯವನ್ನು ನಡಿಸಬೇಕು.


ಕಂಬಗಳ ಗದ್ದಿಗೇಕಲ್ಲುಗಳು ತಾಮ್ರದವುಗಳು; ಕಂಬಗಳ ಕೊಂಡಿಗಳೂ ಕಟ್ಟುಗಳೂ ಬೆಳ್ಳಿಯವು; ಅವುಗಳ ಬೋದಿಗೆಗಳು ಬೆಳ್ಳಿಯ ತಗಡುಗಳಿಂದ ಹೊದಿಸಲ್ಪಟ್ಟವು. ಅಂಗಳದ ಎಲ್ಲಾ ಕಂಬಗಳಿಗೂ ಬೆಳ್ಳಿಯ ಕಟ್ಟುಗಳಿದ್ದವು.


ನಾನು ನಿನಗೆ ತೋರಿಸುವ ಮಾದರಿಯ ಪ್ರಕಾರವೇ ಗುಡಾರವನ್ನೂ ಅದರಲ್ಲಿರುವ ಎಲ್ಲಾ ಸಾಮಾನುಗಳನ್ನೂ ಮಾಡಿಸಬೇಕು.


ದೇವದರ್ಶನದ ಗುಡಾರದ ವಿಷಯದಲ್ಲಿ ಅವರು ಮಾಡಬೇಕಾದ ಕೆಲಸ ಯಾವದಂದರೆ - ಅವರು ಗುಡಾರದ ಚೌಕಟ್ಟುಗಳನ್ನೂ ಅಗುಳಿಗಳನ್ನೂ ಕಂಬಗಳನ್ನೂ ಗದ್ದಿಗೇಕಲ್ಲುಗಳನ್ನೂ ಅಂಗಳದ ಕಂಬಗಳನ್ನೂ


ದೇವದರ್ಶನದ ಗುಡಾರದ ವಿಷಯದಲ್ಲಿ ಮೆರಾರೀಯರು ಮಾಡಬೇಕಾದ ಕೆಲಸ ಇದೇ. ಅವರು ಮಹಾಯಾಜಕ ಆರೋನನ ಮಗನಾದ ಈತಾಮಾರನ ಕೈ ಕೆಳಗೆ ಅದನ್ನು ನಡಿಸಬೇಕು.


ಮೆರಾರೀಯರಿಗೋಸ್ಕರ ಅವರ ಕೆಲಸಕ್ಕೆ ತಕ್ಕ ಹಾಗೆ ನಾಲ್ಕು ಬಂಡಿ ನಾಲ್ಕು ಜೋಡಿ ಎತ್ತುಗಳನ್ನೂ ಮಹಾಯಾಜಕನಾದ ಆರೋನನ ಮಗ ಈತಾಮಾರನ ಕೈಗೆ ಒಪ್ಪಿಸಿದನು.


ಗುಡಾರಕ್ಕೆ ಅಂಗಳವನ್ನು ಏರ್ಪಡಿಸಬೇಕು. ಆ ಅಂಗಳದ ತೆಂಕಣ ಕಡೆಯಲ್ಲಿ ತೆರೆಗಳು ಇರಬೇಕು. ಆ ತೆರೆಗಳು ಹುರಿನಾರಿನ ಬಟ್ಟೆಯಿಂದ ಉಂಟಾಗಿ ನೂರು ಮೊಳ ಉದ್ದವಾಗಿರಬೇಕು.


ಮೆರಾರೀ ವಂಶದವರ ವಶಕ್ಕೆ ಕೊಟ್ಟವುಗಳು ಯಾವವಂದರೆ - ಗುಡಾರದ ಚೌಕಟ್ಟುಗಳೂ ಅಗುಳಿಗಳೂ ಕಂಬಗಳೂ ಗದ್ದಿಗೇಕಲ್ಲುಗಳೂ ಇವುಗಳ ಉಪಕರಣಗಳೂ


ಯೆಹೋವನು ಮೋಶೆಗೆ ಆಜ್ಞಾಪಿಸಿದ ಮೇರೆಗೆ ಅವನಿಂದ ಪ್ರತಿಯೊಬ್ಬನಿಗೆ ಅವನವನ ಕೆಲಸವೂ ಹೊರೆಯೂ ಗೊತ್ತು ಮಾಡಲ್ಪಟ್ಟಿತು. ಹೀಗೆ ಯೆಹೋವನ ಆಜ್ಞೆಯ ಮೇರೆಗೆ ಲೆಕ್ಕವಾಯಿತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು