Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅರಣ್ಯಕಾಂಡ 4:6 - ಕನ್ನಡ ಸತ್ಯವೇದವು J.V. (BSI)

6 ಅದರ ಮೇಲೆ ಕಡಲುಹಂದಿಯ ತೊಗಲನ್ನೂ ನೀಲಿಬಟ್ಟೆಯನ್ನೂ ಹೊದಿಸಿ [ಮಂಜೂಷದ ಬಳೆಗಳಲ್ಲಿ] ಹೊರುವ ಕೋಲುಗಳನ್ನು ಸೇರಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ಅದರ ಮೇಲೆ ಹಸನಾದ ತೊಗಲನ್ನೂ ಮತ್ತು ನೀಲಿ ಬಟ್ಟೆಯನ್ನೂ ಹೊದಿಸಿ, ಮಂಜೂಷದ ಬಳೆಗಳಲ್ಲಿ ಹೊರುವ ಕೋಲುಗಳನ್ನು ಸೇರಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

6 ಅದರ ಮೇಲೆ ಹಸನಾದ ತೊಗಲನ್ನು ಮತ್ತು ನೀಲಿ ಬಟ್ಟೆಯನ್ನು ಹೊದಿಸಬೇಕು. (ಮಂಜೂಷದ ಬಳೆಗಳಿಗೆ) ಹೊರುವ ಕೋಲುಗಳನ್ನು ಸಿಕ್ಕಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

6 ಬಳಿಕ ಅವರು ಇವುಗಳಿಗೆಲ್ಲ ಶ್ರೇಷ್ಠವಾದ ತೊಗಲಿನಿಂದ ಮಾಡಿದ ಹೊದಿಕೆಯನ್ನು ಹೊದಿಸಬೇಕು. ಆಮೇಲೆ ಅವರು ನೀಲಿಬಟ್ಟೆಯನ್ನು ತೊಗಲಿನ ಮೇಲೆ ಹಾಸಿ ಪವಿತ್ರ ಪೆಟ್ಟಿಗೆಯ ಬಳೆಗಳಲ್ಲಿ ಹೊರುವ ಕೋಲುಗಳನ್ನು ಸೇರಿಸಬೇಕು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

6 ಅದರ ಮೇಲೆ ಕಡಲುಹಂದಿಯ ಚರ್ಮದ ಹೊದಿಕೆಯನ್ನು ಹೊದಿಸಬೇಕು. ಅದರ ಮೇಲ್ಭಾಗದಲ್ಲಿ ಪೂರ್ಣವಾದ ನೀಲಿವಸ್ತ್ರವನ್ನು ಹಾಸಿ, ಕೋಲುಗಳನ್ನು ಅದರ ಸ್ಥಳದಲ್ಲಿ ಇಡಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅರಣ್ಯಕಾಂಡ 4:6
11 ತಿಳಿವುಗಳ ಹೋಲಿಕೆ  

ದೇವಮಂದಿರದೊಳಗೆ ನಡೆಯುವ ಸೇವೆಗೋಸ್ಕರ ಬೇಕಾದ ಅಲಂಕಾರವಸ್ತ್ರ ಅಂದರೆ ಆರೋನನಿಗೆ ಬೇಕಾದ ದೀಕ್ಷಾವಸ್ತ್ರ ಯಾಜಕಸೇವೆ ಮಾಡುವವರಾದ ಅವನ ಮಕ್ಕಳಿಗೆ ಬೇಕಾದ ವಸ್ತ್ರ ಇವುಗಳನ್ನೂ ತಂದರು.


ಯೆಹೋವನು ಮೋಶೆಗೆ ಆಜ್ಞಾಪಿಸಿದಂತೆ ಆ ನೀಲಿ ಧೂಮ್ರ ರಕ್ತವರ್ಣಗಳುಳ್ಳ ದಾರದಿಂದ ದೇವಮಂದಿರದ ಸೇವೆಗೆ ಅಲಂಕಾರವಾದ ವಸ್ತ್ರಗಳನ್ನೂ ಆರೋನನಿಗೆ ದೀಕ್ಷಾವಸ್ತ್ರಗಳನ್ನೂ ಮಾಡಿದರು.


ಪವಿತ್ರಸ್ಥಾನದ ಸೇವೆಗೆ ಬೇಕಾದ ಸುಂದರವಾದ ದೀಕ್ಷಾವಸ್ತ್ರಗಳು ಅಂದರೆ ಮಹಾಯಾಜಕನಾದ ಆರೋನನಿಗೂ ಅವನ ಮಕ್ಕಳಿಗೂ ಬೇಕಾದ ಯಾಜಕವಸ್ತ್ರಗಳು ಇವೇ ಅಂದನು.


ಅದಕ್ಕೆ ಸಂಬಂಧಪಟ್ಟ ಅಗ್ಗಿಷ್ಟಿಗೆಗಳು, ಮುಳ್ಳುಗಳು, ಸಲಿಕೆಗಳು, ಬೋಗುಣಿಗಳು ಮುಂತಾದ ಉಪಕರಣಗಳನ್ನೆಲ್ಲಾ ಮೇಲೆ ಇಟ್ಟು ಕಡಲುಹಂದಿಯ ತೊಗಲನ್ನು ಹೊದಿಸಿ ಹೊರುವ ಕೋಲುಗಳನ್ನು ಹಾಕಬೇಕು.


ಅವರು ದೇವದರ್ಶನದ ಗುಡಾರದ ಬಟ್ಟೆಗಳನ್ನು ಹೊರಬೇಕು; ಅಂದರೆ ಗುಡಾರವು, ಅದರ ಹೊದಿಕೆಯು, ಅದರ ಮೇಲಣ ಕಡಲುಹಂದಿಯ ತೊಗಲಿನ ಹೊದಿಕೆಯು,


ಮೋಶೆ ಈ ಧರ್ಮಶಾಸ್ತ್ರವನ್ನು ಬರೆದು ಯೆಹೋವನ ಆಜ್ಞಾಶಾಸನಗಳ ಮಂಜೂಷವನ್ನು ಹೊರುವ ಲೇವಿಯರಾದ ಯಾಜಕರ ಮತ್ತು ಹಿರಿಯರ ವಶಕ್ಕೆ ಕೊಟ್ಟು ಅವರಿಗೆ -


ನೀನು ಜಾಲೀಮರದಿಂದ ಒಂದು ಮಂಜೂಷವನ್ನು ಮಾಡಿಸಬೇಕು. ಅದು ಎರಡುವರೆ ಮೊಳ ಉದ್ದವೂ ಒಂದುವರೆ ಮೊಳ ಅಗಲವೂ ಒಂದುವರೆ ಮೊಳ ಎತ್ತರವೂ ಆಗಿರಬೇಕು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು