Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅರಣ್ಯಕಾಂಡ 5:14 - ಕನ್ನಡ ಸತ್ಯವೇದವು J.V. (BSI)

14 ಕೆಟ್ಟು ಹೋದಳೆಂಬ ಸಂಶಯವು ಗಂಡನಲ್ಲಿ ಹೊಕ್ಕರೆ ಮಾಡಬೇಕಾದದ್ದೇನಂದರೆ -

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

14 ಅಥವಾ ಅವಳು ಹಾಗೆ ಮಾಡದೆ ಅಶುದ್ಧಳಾಗದ ಸಂದರ್ಭದಲ್ಲಿಯೂ, ಆಕೆಯು ಕೆಟ್ಟುಹೋದಳೆಂಬ ಸಂಶಯ ಗಂಡನಿಗೆ ಬಂದರೆ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

14 ಅಥವಾ ಹಾಗೆ ಮಾಡದೆ ಕೆಟ್ಟುಹೋಗದೆ ಇದ್ದರೂ ಕೆಟ್ಟುಹೋದಳೆಂದು ಗಂಡನ ಸಂಶಯಕ್ಕೆ ಗುರಿಯಾಗಿರಬಹುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

14 ಆದರೆ ಗಂಡನು ಈರ್ಷೆ ಉಳ್ಳವನಾಗಿ ತನ್ನ ಹೆಂಡತಿ ತನ್ನನ್ನು ಅಶುದ್ಧಳನ್ನಾಗಿ ಮಾಡಿಕೊಂಡಿದ್ದಾಳೆ ಎಂದು ಸಂಶಯಪಡುವುದಾಗಿದ್ದರೆ ಅವಳು ಮಾಡಿಕೊಂಡಿರಲಿ ಮಾಡಿಕೊಂಡಿಲ್ಲದಿರಲಿ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

14 ಆಕೆ ಅಶುದ್ಧಳಾಗಿದ್ದಾಳೆಂದು ಆಕೆಯ ಮೇಲೆ ಅಸೂಯೆಗೊಂಡು ಸಂಶಯಪಟ್ಟರೆ, ಆಕೆ ಅಶುದ್ಧಳಾಗದಿದ್ದರೂ, ಆಕೆಯೊಡನೆ ಅಸೂಯೆ ಸಂಶಯ ಹೊಂದಿದರೆ, ಆಗ

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅರಣ್ಯಕಾಂಡ 5:14
5 ತಿಳಿವುಗಳ ಹೋಲಿಕೆ  

ನಿನ್ನ ಹೃದಯದ ಮೇಲೆ, ನಿನ್ನ ಕೈಯಲ್ಲಿ, ನನ್ನನ್ನು ಮುದ್ರೆಯನ್ನಾಗಿ ಧರಿಸಿಕೋ. ಪ್ರೀತಿಯು ಮರಣದಷ್ಟು ಬಲವಾಗಿದೆ, [ಪ್ರೀತಿದ್ರೋಹದಿಂದ ಹುಟ್ಟುವ] ಮತ್ಸರವು ಪಾತಾಳದಷ್ಟು ಕ್ರೂರ, ಅದರ ಜ್ವಾಲೆಯು ಬೆಂಕಿಯ ಉರಿ, ಅದು ಯೆಹೋವನ ರೋಷಾಗ್ನಿಯು.


ಏಕೆಂದರೆ ಮತ್ಸರವು ಪತಿಗೆ ಕ್ರೋಧವನ್ನು ಉಂಟುಮಾಡುತ್ತದೆ, ಮುಯ್ಯಿತೀರಿಸತಕ್ಕ ದಿನದಲ್ಲಿ ವ್ಯಭಿಚಾರಿಯನ್ನು ಉಳಿಸನು.


ಕರ್ತನನ್ನು ರೇಗಿಸಬೇಕೆಂದಿದ್ದೇವೋ? ಆತನಿಗಿಂತಲೂ ನಾವು ಬಲಿಷ್ಠರೇನು?


ಯೆಹೋವನು ಇಂತೆನ್ನುತ್ತಾನೆ - ಹೀಗಿರಲು ನನ್ನನ್ನು ಕಾದುಕೊಂಡಿರ್ರಿ, ನಾನು ಬೇಟೆಹಿಡಿಯಲಿಕ್ಕೆ ಏಳುವ ದಿನವನ್ನು ಎದುರುನೋಡಿರಿ; ಜನಾಂಗರಾಜ್ಯಗಳ ಮೇಲೆ ನನ್ನ ರೌದ್ರವನ್ನು, ಹೌದು, ನನ್ನ ಉಗ್ರಕೋಪವನ್ನೆಲ್ಲಾ ಹೊಯ್ದುಬಿಡುವದಕ್ಕಾಗಿ ಆ ಜನಾಂಗಗಳನ್ನು ಸೇರಿಸಿ ಆ ರಾಜ್ಯಗಳನ್ನು ಕೂಡಿಸಬೇಕೆಂದು ತೀರ್ಮಾನಿಸಿಕೊಂಡಿದ್ದೇನೆ; ಲೋಕವೆಲ್ಲಾ ನನ್ನ ರೋಷಾಗ್ನಿಗೆ ತುತ್ತಾಗುವದಷ್ಟೆ.


ಪಾತಿವ್ರತ್ಯವನ್ನು ಬಿಟ್ಟು ಜಾರತ್ವಮಾಡಿರುವಾಗಲೂ ಗಂಡನು ಹೆಂಡತಿಯ ವಿಷಯದಲ್ಲಿ ಸಂಶಯಪಡುವಾಗಲೂ ಅವನು ಅವಳನ್ನು ಯೆಹೋವನ ಮುಂದೆ ನಿಲ್ಲಿಸಬೇಕು; ಯಾಜಕನು ಅವಳ ವಿಷಯದಲ್ಲಿ ಈ ನಿಯಮದ ಪ್ರಕಾರ ಮಾಡಬೇಕು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು