Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅರಣ್ಯಕಾಂಡ 5:2 - ಕನ್ನಡ ಸತ್ಯವೇದವು J.V. (BSI)

2 ಎಲ್ಲಾ ಕುಷ್ಠರೋಗಿಗಳನ್ನೂ ಮೇಹಸ್ರಾವವುಳ್ಳವರನ್ನೂ ಹೆಣದ ಸೋಂಕಿನಿಂದ ಅಶುದ್ಧರಾದವರನ್ನೂ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 “ಕುಷ್ಠರೋಗಿಗಳನ್ನು, ಸಾಂಕ್ರಾಮಿಕವಾದ ಚರ್ಮರೋಗ ಇರುವವರನ್ನು, ಮೇಹಸ್ರಾವವುಳ್ಳವರನ್ನು ಹಾಗು ಹೆಣದ ಸೋಂಕಿನಿಂದ ಅಶುದ್ಧರಾದವರನ್ನು ಪಾಳೆಯದಿಂದ ಹೊರಡಿಸಬೇಕೆಂದು ಇಸ್ರಾಯೇಲರಿಗೆ ಆಜ್ಞಾಪಿಸು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

2 “ಕುಷ್ಠರೋಗಿಗಳಂಥ ಎಲ್ಲ ಅಂಟುರೋಗಿಗಳನ್ನು ಮೇಹಸ್ರಾವವುಳ್ಳವರನ್ನು ಹಾಗೂ ಹೆಣದ ಸೋಂಕಿನಿಂದ ಅಶುದ್ಧರಾದವರನ್ನು ಪಾಳೆಯದಿಂದ ಹೊರಡಿಸಬೇಕೆಂದು ಇಸ್ರಯೇಲರಿಗೆ ಆಜ್ಞಾಪಿಸು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

2 “ಭಯಂಕರವಾದ ಚರ್ಮರೋಗವುಳ್ಳವರನ್ನೂ ದೈಹಿಕಸ್ರಾವವುಳ್ಳವರನ್ನೂ ಹೆಣದ ಸೋಂಕಿನಿಂದ ಅಶುದ್ಧರಾದವರನ್ನೂ ಪಾಳೆಯದಿಂದ ಹೊರಗಿಡಬೇಕೆಂದು ಇಸ್ರೇಲರಿಗೆ ಆಜ್ಞಾಪಿಸು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

2 “ಚರ್ಮರೋಗವಿರುವವರೆಲ್ಲರನ್ನು, ಮೇಹಸ್ರಾವವುಳ್ಳವರೆಲ್ಲರನ್ನು ಮತ್ತು ಹೆಣದ ಸೋಂಕಿನಿಂದ ಅಶುದ್ಧರಾದವರೆಲ್ಲರನ್ನು ಪಾಳೆಯದೊಳಗಿಂದ ಹೊರಗೆ ಕಳುಹಿಸಬೇಕೆಂದು ಇಸ್ರಾಯೇಲರಿಗೆ ಆಜ್ಞಾಪಿಸು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅರಣ್ಯಕಾಂಡ 5:2
15 ತಿಳಿವುಗಳ ಹೋಲಿಕೆ  

ಯೆಹೋವನು ಮೋಶೆಗೆ ಹೇಳಿದ್ದೇನಂದರೆ - ನೀನು ಆರೋನನ ಮಕ್ಕಳಾದ ಯಾಜಕರಿಗೆ ಹೀಗೆ ಆಜ್ಞಾಪಿಸಬೇಕು - ಕುಲದಲ್ಲಿ ಸತ್ತವರಿಗೋಸ್ಕರ ಯಾವ ಯಾಜಕನೂ ತನ್ನನ್ನು ಅಪವಿತ್ರಮಾಡಿಕೊಳ್ಳಬಾರದು.


ಆ ರೋಗದ ಗುರುತುಗಳು ಅವನಲ್ಲಿ ಇರುವ ದಿನಗಳೆಲ್ಲಾ ಅವನು ಅಶುದ್ಧನಾಗಿರುವನು. ಅವನು ಅಶುದ್ಧನಾದದರಿಂದ ಪ್ರತ್ಯೇಕವಾಗಿಯೇ ವಾಸವಾಗಿರಬೇಕು; ಅವನ ನಿವಾಸವು ಪಾಳೆಯದ ಹೊರಗೆ ಇರಬೇಕು.


ಅದಕ್ಕೆ ಯೆಹೋವನು - ತಂದೆ ಮುಖದ ಮೇಲೆ ಉಗುಳಿದರೆ ಆಕೆ ಹೇಗೂ ಏಳು ದಿವಸ ನಾಚಿಕೆಯಿಂದ ಮರೆಯಾಗುವದಿಲ್ಲವೇ; ಹಾಗಾದರೆ ಆಕೆ ಏಳು ದಿವಸ ಪಾಳೆಯದ ಹೊರಗೆ ಇರಬೇಕು; ತರುವಾಯ ನೀನು ಆಕೆಯನ್ನು ಪಾಳೆಯದೊಳಗೆ ಸೇರಿಸಿಕೊಳ್ಳಬಹುದು ಎಂದು ಉತ್ತರಕೊಟ್ಟನು.


ನೀವಾದರೋ ಏಳುದಿನದವರೆಗೂ ಪಾಳೆಯದ ಹೊರಗೆ ಇರಬೇಕು. ಮನುಷ್ಯ ಪ್ರಾಣತೆಗೆದವರೂ ಶವಸೋಂಕಿದವರೂ ನಿಮ್ಮವರಾದರೂ ಸೆರೆಯವರಾದರೂ ಮೂರನೆಯ ಮತ್ತು ಏಳನೆಯ ದಿನಗಳಲ್ಲಿ ದೋಷಪರಿಹಾರ ಮಾಡಿಕೊಳ್ಳಬೇಕು.


ಊರುಬಾಗಲಿನ ಹತ್ತಿರ ನಾಲ್ಕು ಮಂದಿ ಕುಷ್ಠರೋಗಿಗಳಿದ್ದರು. ಅವರು ತಮ್ಮೊಳಗೆ - ನಾವು ಸಾಯುವ ತನಕ ಇಲ್ಲೇ ಕೂತಿರಬೇಕೋ?


ಯಾಜಕನು ನೋಡುವಾಗ ಆ ಮಚ್ಚೆ ದೇಹದ ಚರ್ಮದಲ್ಲಿ ಹರಡಿಕೊಂಡಿದ್ದರೆ ಅದು ಕುಷ್ಠವೆಂದು ತಿಳಿದು ಅವನನ್ನು ಅಶುದ್ಧನೆಂದು ನಿರ್ಣಯಿಸಬೇಕು.


ಆಗ ಶುದ್ಧಮಾಡಿಸಿಕೊಳ್ಳುವವನು ತನ್ನ ಬಟ್ಟೆಗಳನ್ನು ಒಗೆದುಕೊಂಡು ಸರ್ವಾಂಗಕ್ಷೌರಮಾಡಿಸಿಕೊಂಡು ಸ್ನಾನ ಮಾಡಿದ ಮೇಲೆ ಶುದ್ಧನಾಗುವನು; ತರುವಾಯ ಅವನು ಪಾಳೆಯದೊಳಗೆ ಬರಬಹುದು; ಆದರೂ ಏಳು ದಿನಗಳ ತನಕ ತನ್ನ ಡೇರೆಯ ಹೊರಗೇ ಇರಬೇಕು.


ಯಾವನಾದರೂ ಆ ದಿನದಲ್ಲಿ ಉಪವಾಸ ಮಾಡದೆಹೋದರೆ ಅವನು ಕುಲದಿಂದ ತೆಗೆದು ಹಾಕಲ್ಪಡಬೇಕು.


ಯೆಹೋವನು ಮೋಶೆಗೆ ಹೇಳಿದ್ದೇನಂದರೆ -


ಯಾರಲ್ಲಿ ಕುಷ್ಠದ ಗುರುತು ಕಾಣಬಂತೋ ಅವನು ತನ್ನ ಬಟ್ಟೆಗಳನ್ನು ಹರಿದುಕೊಂಡು ತಲೆಯನ್ನು ಕೆದರಿಕೊಂಡು ಬಾಯಿಯನ್ನು ಬಟ್ಟೆಯಿಂದ ಮುಚ್ಚಿಕೊಂಡು - ನಾನು ಅಶುದ್ಧನು ಅಶುದ್ಧನು ಎಂದು ಕೂಗಿಕೊಳ್ಳಬೇಕು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು