Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅರಣ್ಯಕಾಂಡ 5:21 - ಕನ್ನಡ ಸತ್ಯವೇದವು J.V. (BSI)

21 ಯೆಹೋವನು ನಿನ್ನ ತೊಡೆಗಳು ಕ್ಷೀಣವಾಗಿ ಹೋಗುವಂತೆಯೂ ಹೊಟ್ಟೆ ಉಬ್ಬುವಂತೆಯೂ ಮಾಡಿ ನಿನ್ನನ್ನು ನಿನ್ನ ಜನರ ಮಧ್ಯದಲ್ಲಿ ಶಾಪಗ್ರಸ್ತಳನ್ನಾಗಿ ನೇವಿುಸಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

21 “ಯೆಹೋವನು ನಿನ್ನ ತೊಡೆಗಳು ಕ್ಷೀಣವಾಗಿ ಹೋಗುವಂತೆ, ನಿನ್ನ ಹೊಟ್ಟೆಯು ಉಬ್ಬುವಂತೆ ಮಾಡಿ ನಿನ್ನನ್ನು ನಿನ್ನ ಜನರ ಮಧ್ಯದಲ್ಲಿ ಶಾಪಗ್ರಸ್ತಳನ್ನಾಗಿ ನೇಮಿಸಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

21 ಸರ್ವೇಶ್ವರನು ನಿನ್ನ ಜನನೇಂದ್ರಿಯಗಳು ಬತ್ತಿಹೋಗುವಂತೆ, ನಿನ್ನ ಹೊಟ್ಟೆ ಉಬ್ಬುವಂತೆ ಮಾಡಿ, ನೀನು ನಿನ್ನ ಜನರ ಮಧ್ಯೆ ಶಾಪಗ್ರಸ್ತಳನ್ನಾಗಿ ಮಾಡಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

21 ಆದ್ದರಿಂದ ನೀನು ಈ ವಿಶೇಷ ಜಲವನ್ನು ಕುಡಿಯುವಾಗ, ನಿನಗೆ ಹಾನಿಯುಂಟಾಗುವುದು. ನಿನಗೆ ಮಕ್ಕಳಾಗುವುದಿಲ್ಲ. ನೀನು ಬಸುರಾಗಿದ್ದರೆ, ನಿನ್ನ ಮಗು ಸಾಯುವುದು. ಆಗ ನಿನ್ನ ಜನರು ನಿನ್ನನ್ನು ದೂರಮಾಡಿ ನಿನ್ನ ವಿರುದ್ಧವಾಗಿ ಕೆಟ್ಟ ಸಂಗತಿಗಳನ್ನು ಹೇಳುವರು.’ “ಬಳಿಕ ಯಾಜಕನು ಆ ಸ್ತ್ರೀಗೆ ಪ್ರಮಾಣ ಮಾಡಲು ಹೇಳಬೇಕು. ಅವಳು, ‘ನಾನು ಸುಳ್ಳಾಡಿದ್ದರೆ, ಈ ಕೆಟ್ಟ ಸಂಗತಿಗಳು ನನಗೆ ಸಂಭವಿಸಲಿ’ ಎಂದು ಹೇಳಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

21 ಯೆಹೋವ ದೇವರು ನಿನ್ನ ತೊಡೆಯನ್ನು ಕ್ಷೀಣವಾಗುವಂತೆಯೂ ನಿನ್ನ ಹೊಟ್ಟೆಯನ್ನು ಉಬ್ಬುವಂತೆಯೂ ಮಾಡುವನು. ನಿನ್ನ ಜನರು ನಿನ್ನನ್ನು ಶಪಿಸುವರು, ತಿರಸ್ಕರಿಸುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅರಣ್ಯಕಾಂಡ 5:21
9 ತಿಳಿವುಗಳ ಹೋಲಿಕೆ  

ತಾವು ದೇವರ ಸೇವಕನಾದ ಮೋಶೆಯ ಮುಖಾಂತರ ಕೊಡಲ್ಪಟ್ಟ ದೇವರ ಧರ್ಮೋಪದೇಶವನ್ನು ಅನುಸರಿಸಿ ತಮ್ಮ ಕರ್ತನಾದ ಯೆಹೋವನ ಎಲ್ಲಾ ಆಜ್ಞಾನಿಯಮವಿಧಿಗಳನ್ನು ಕೈಕೊಂಡು ನಡೆಯುವದಾಗಿ ಆಣೆಯಿಟ್ಟು ಪ್ರಮಾಣಮಾಡಿದರು. ಹೇಗಂದರೆ -


ಆ ದಿವಸ ಸೌಲನು ಇಸ್ರಾಯೇಲ್ಯರನ್ನು ಕುರಿತು - ಶತ್ರುಗಳಿಗೆ ಮುಯ್ಯಿ ತೀರಿಸುವದಕ್ಕೋಸ್ಕರ ನಿಮ್ಮಲ್ಲಿ ಒಬ್ಬನಾದರೂ ಸಾಯಂಕಾಲದವರೆಗೆ ಊಟಮಾಡಬಾರದು; ಮಾಡಿದವನು ಶಾಪಗ್ರಸ್ತನಾಗಲಿ ಎಂದು ಆಣೆಯಿಟ್ಟಿದ್ದದರಿಂದ ಅಂದು ಅವರೆಲ್ಲರೂ ಬಹುವಾಗಿ ಬಳಲಿಹೋಗಿದ್ದರು. ಒಬ್ಬನಾದರೂ ಆಹಾರ ಪದಾರ್ಥವನ್ನು ರುಚಿನೋಡಲಿಲ್ಲ.


ಅದೇ ಸಮಯದಲ್ಲಿ ಯೆಹೋಶುವನು ಇಸ್ರಾಯೇಲ್ಯರಿಂದ ಪ್ರಮಾಣಮಾಡಿಸಿ ಅವರಿಗೆ - ಈ ಯೆರಿಕೋ ಪಟ್ಟಣವನ್ನು ಕಟ್ಟುವದಕ್ಕೆ ಕೈ ಹಚ್ಚುವ ಮನುಷ್ಯನು ಯೆಹೋವನ ದೃಷ್ಟಿಯಲ್ಲಿ ಶಾಪಗ್ರಸ್ತನಾಗಿರಲಿ. ಅಂಥವನು ಅದಕ್ಕೆ ಅಸ್ತಿವಾರ ಹಾಕುವಾಗ ತನ್ನ ಹಿರೀ ಮಗನನ್ನೂ ಬಾಗಲುಗಳನ್ನಿಡುವಾಗ ಕಿರೀ ಮಗನನ್ನೂ ಕಳೆದುಕೊಳ್ಳಲಿ ಎಂದು ಹೇಳಿದನು.


ಇವರ ಚರಿತ್ರೆಯನ್ನು ಬಾಬೆಲಿನಲ್ಲಿ ಸೆರೆಯಾಗಿರುವ ಯೆಹೂದ್ಯರೆಲ್ಲರು ಶಪಿಸುವ ಮಾತಾಗಿ ತೆಗೆದುಕೊಂಡು ಬಾಬೆಲಿನ ಅರಸನು ಬೆಂಕಿಯಲ್ಲಿ ಸುಟ್ಟುಬಿಟ್ಟ ಚಿದ್ಕೀಯನ ಮತ್ತು ಅಹಾಬನ ಗತಿಯನ್ನು ಯೆಹೋವನು ನಿನಗೆ ತರಲಿ ಎಂದು ಶಪಿಸುವರು;


ಆ ಮನುಷ್ಯನನ್ನು ನಾನರಿಯೆನು ಎಂದು ಹೇಳಿ ಶಾಪಹಾಕಿಕೊಳ್ಳುವದಕ್ಕೂ ಆಣೆಯಿಟ್ಟುಕೊಳ್ಳುವದಕ್ಕೂ ಪ್ರಾರಂಭಿಸಿದನು.


ಕರ್ತನಾದ ಯೆಹೋವನು ನಿಮ್ಮನ್ನು ಕೊಂದುಹಾಕುವನು, ನಿಮ್ಮ ಹೆಸರು ನನ್ನ ಆಪ್ತಜನರು ಶಪಿಸುವ ಶಾಪದ ಮಾತಾಗಿಯೇ ಉಳಿಯುವದು; ನಾನು ನನ್ನ ಸೇವಕರಿಗೆ ಹೊಸ ಹೆಸರನ್ನು ಕೊಡುವೆನು.


ಶಿಷ್ಟರ ಸ್ಮರಣೆಯು ಆಶೀರ್ವಾದಕ್ಕಾಸ್ಪದ; ದುಷ್ಟರ ನಾಮವು ನಿರ್ನಾಮ.


ನಿನಗಾದರೋ ಕರುಳುಬೇನೆಯೆಂಬ ಕಠಿನರೋಗವು ಬಂದು ಬಹುದಿನಗಳವರೆಗೂ ಇದ್ದು ಕಡೆಯಲ್ಲಿ ಅದರಿಂದ ನಿನ್ನ ಕರುಳುಗಳು ಹೊರಗೆ ಬೀಳುವವು ಎಂದು ತಿಳಿಸಿದನು.


ಅವಳು ದೋಷಿಯಾಗಿ ಗಂಡನಿಗೆ ದ್ರೋಹಮಾಡಿದವಳಾಗಿದ್ದರೆ ಕುಡಿದನಂತರ ಶಾಪಕರವಾದ ಆ ನೀರು ಅವಳೊಳಗೆ ಸೇರಿ ವಿಷವಾಗುವದರಿಂದ ಅವಳ ಹೊಟ್ಟೆ ಉಬ್ಬುವದು, ಅವಳ ತೊಡೆಗಳು ಕ್ಷೀಣವಾಗಿ ಹೋಗುವವು; ಆ ಸ್ತ್ರೀಯು ತನ್ನ ಜನರೊಳಗೆ ಶಾಪಗ್ರಸ್ತಳಾಗುವಳು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು