Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅರಣ್ಯಕಾಂಡ 5:22 - ಕನ್ನಡ ಸತ್ಯವೇದವು J.V. (BSI)

22 ಶಾಪವನ್ನುಂಟುಮಾಡುವ ಈ ನೀರು ನಿನ್ನೊಳಗೆ ಸೇರಿ ನಿನ್ನ ಹೊಟ್ಟೆ ಉಬ್ಬುವಂತೆಯೂ ತೊಡೆಗಳು ಕ್ಷೀಣವಾಗಿ ಹೋಗುವಂತೆಯೂ ಮಾಡುವದು ಎಂದು ಹೇಳಬೇಕು. ಅದಕ್ಕೆ ಆ ಸ್ತ್ರೀಯು - ಆಮೆನ್, ಹಾಗೆಯೇ ಆಗಲಿ ಎಂದು ಹೇಳಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

22 ಶಾಪವನ್ನುಂಟುಮಾಡುವ ಈ ನೀರು ನಿನ್ನೊಳಗೆ ಸೇರಿ ನಿನ್ನ ಹೊಟ್ಟೆಯು ಉಬ್ಬುವಂತೆ ನಿನ್ನ ತೊಡೆಗಳು ಕ್ಷೀಣವಾಗಿ ಹೋಗುವಂತೆ ನಿನ್ನ ಜನನೇಂದ್ರಿಯಗಳು ಬತ್ತಿ ಹೋಗುವಂತೆ ಮಾಡುವುದು.” ಅದಕ್ಕೆ ಆ ಸ್ತ್ರೀಯು, “ನಾನು ಅಪರಾಧಿಯಾಗಿದ್ದರೆ ಹಾಗೆಯೇ ಆಗಲಿ” ಎಂದು ಹೇಳಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

22 ಶಾಪತರುವ ಈ ನೀರು ನಿನ್ನೊಳಗೆ ಸೇರಿ ನಿನ್ನ ಹೊಟ್ಟೆ ಉಬ್ಬುವಂತೆ, ಜನನೇಂದ್ರಿಯಗಳು ಬತ್ತಿಹೋಗುವಂತೆ ಮಾಡಲಿ,” ಎಂದು ಹೇಳಬೇಕು. ಅದಕ್ಕೆ ಆ ಹೆಂಗಸು, “ಆಗಲಿ, ಹಾಗೆಯೇ ಆಗಲಿ,” ಎಂದು ಹೇಳಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

22 ಯಾಜಕನು, ‘ಹಾನಿಯನ್ನು ಉಂಟುಮಾಡುವ ಈ ನೀರನ್ನು ನೀನು ಕುಡಿಯಬೇಕು. ನೀನು ಪಾಪ ಮಾಡಿದ್ದರೆ ನಿನಗೆ ಮಕ್ಕಳಾಗುವುದಿಲ್ಲ ಮತ್ತು ನೀನು ಪಡೆಯುವ ಮಗು ಹುಟ್ಟುವ ಮೊದಲೇ ಸಾಯುವುದು’ ಎಂದು ಹೇಳಬೇಕು. ಅದಕ್ಕೆ ಸ್ತ್ರೀಯು, ‘ಹಾಗೆಯೇ ಆಗಲಿ’ ಎಂದು ಹೇಳಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

22 ಶಪಿಸುವಂಥ ಈ ನೀರು ನಿನ್ನೊಳಗೆ ಸೇರಿ ನಿನ್ನ ಹೊಟ್ಟೆ ಉಬ್ಬುವಂತೆ, ತೊಡೆಯನ್ನು ಕ್ಷೀಣವಾಗಿ ಹೋಗುವಂತೆ ನಿನ್ನ ಜನನೇಂದ್ರಿಯಗಳು ಬತ್ತಿಹೋಗುವಂತೆ ಮಾಡಲಿ ಎಂದು ಹೇಳಬೇಕು, ಈ ಪ್ರಕಾರ ಯಾಜಕನು ಆ ಸ್ತ್ರೀಯನ್ನು ಶಾಪದ ಪ್ರಮಾಣ ಮಾಡಿಸಬೇಕು.” “ ‘ಅದಕ್ಕೆ ಆ ಸ್ತ್ರೀಯು, “ಆಮೆನ್, ಆಮೆನ್,” ಎಂದು ಹೇಳಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅರಣ್ಯಕಾಂಡ 5:22
16 ತಿಳಿವುಗಳ ಹೋಲಿಕೆ  

ಶಪಿಸುವದೇ ಅವನಿಗೆ ವಸ್ತ್ರವಾಗಿತ್ತು. ಅದು ನೀರಿನಂತೆ ಅವನ ಅಂತರಂಗದಲ್ಲಿಯೂ ಎಣ್ಣೆಯಂತೆ ಎಲುಬುಗಳಲ್ಲಿಯೂ ಸೇರಿತು.


ಯೇಸು ಅವರಿಗೆ - ನಿಮಗೆ ನಿಜನಿಜವಾಗಿ ಹೇಳುತ್ತೇನೆ, ನೀವು ಮನುಷ್ಯಕುಮಾರನ ಮಾಂಸವನ್ನು ತಿನ್ನದೆ ಅವನ ರಕ್ತವನ್ನು ಕುಡಿಯದೆ ಹೋದರೆ ನಿಮ್ಮೊಳಗೆ ಜೀವವಿಲ್ಲ;


ನಿನಗೆ ನಿಜನಿಜವಾಗಿ ಹೇಳುತ್ತೇನೆ, ತಿಳಿದದ್ದನ್ನು ಹೇಳುತ್ತೇವೆ, ನೋಡಿದ್ದಕ್ಕೆ ಸಾಕ್ಷಿಕೊಡುತ್ತೇವೆ; ನೀವು ನಮ್ಮ ಸಾಕ್ಷಿಯನ್ನು ಒಪ್ಪುವದಿಲ್ಲ.


ಅದಕ್ಕೆ ಯೇಸು - ನಾನು ನಿನಗೆ ನಿಜನಿಜವಾಗಿ ಹೇಳುತ್ತೇನೆ, ಒಬ್ಬನು ಹೊಸದಾಗಿ ಹುಟ್ಟದಿದ್ದರೆ ಅವನು ದೇವರ ರಾಜ್ಯವನ್ನು ಕಾಣಲಾರನು ಅಂದನು.


ಆಗ ಆತನು ನನಗೆ - ನರಪುತ್ರನೇ, ನಾನು ಕೊಡುವ ಈ ಸುರಳಿಯನ್ನು ತಿಂದು ಹೊಟ್ಟೆ ತುಂಬಿಸಿಕೋ ಎಂದು ಹೇಳಲು ಅದನ್ನು ತಿಂದುಬಿಟ್ಟೆನು; ಅದು ನನ್ನ ಬಾಯಲ್ಲಿ ಜೇನಿನಂತೆ ಸಿಹಿಯಾಗಿತ್ತು.


ಆದದರಿಂದ ಅವರು ತಮ್ಮ ನಡತೆಯ ಫಲವನ್ನು ಅನುಭವಿಸಿ ಸ್ವಂತ ಕುಯುಕ್ತಿಗಳನ್ನೇ ಹೊಟ್ಟೆತುಂಬಾ ಉಣ್ಣಬೇಕಾಗುವದು.


ಯೆಹೋವನಿಗೆ ಸದಾಕಾಲವೂ ಕೊಂಡಾಟವಾಗಲಿ. ಆಮೆನ್, ಆಮೆನ್.


ಆತನ ಪ್ರಭಾವವುಳ್ಳ ನಾಮಕ್ಕೆ ಸದಾಕಾಲವೂ ಪ್ರಣಾಮವಿರಲಿ; ಭೂಮಂಡಲವೆಲ್ಲಾ ಆತನ ಪ್ರಭಾವದಿಂದ ತುಂಬಿರಲಿ. ಆಮೆನ್, ಆಮೆನ್.


ಇಸ್ರಾಯೇಲ್ಯರ ದೇವರಾದ ಯೆಹೋವನಿಗೆ ಯುಗಯುಗಾಂತರಗಳವರೆಗೂ ಕೊಂಡಾಟವಾಗಲಿ. ಆಮೆನ್. ಆಮೆನ್.


ಅವಳು ದೋಷಿಯಾಗಿ ಗಂಡನಿಗೆ ದ್ರೋಹಮಾಡಿದವಳಾಗಿದ್ದರೆ ಕುಡಿದನಂತರ ಶಾಪಕರವಾದ ಆ ನೀರು ಅವಳೊಳಗೆ ಸೇರಿ ವಿಷವಾಗುವದರಿಂದ ಅವಳ ಹೊಟ್ಟೆ ಉಬ್ಬುವದು, ಅವಳ ತೊಡೆಗಳು ಕ್ಷೀಣವಾಗಿ ಹೋಗುವವು; ಆ ಸ್ತ್ರೀಯು ತನ್ನ ಜನರೊಳಗೆ ಶಾಪಗ್ರಸ್ತಳಾಗುವಳು.


ಆಗ ಯಾಜಕನು ಆ ಶಾಪವಚನಗಳನ್ನು ಪತ್ರದಲ್ಲಿ ಬರೆದು


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು