Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅರಣ್ಯಕಾಂಡ 5:23 - ಕನ್ನಡ ಸತ್ಯವೇದವು J.V. (BSI)

23 ಆಗ ಯಾಜಕನು ಆ ಶಾಪವಚನಗಳನ್ನು ಪತ್ರದಲ್ಲಿ ಬರೆದು

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

23 “‘ಇದಲ್ಲದೆ ಯಾಜಕನು ಈ ಶಾಪವಚನಗಳನ್ನು ಸುರುಳಿಯಲ್ಲಿ ಬರೆದು, ವಿಷಕರ ಜಲದಲ್ಲಿ ಆ ಶಾಪವಚನವನ್ನು ತೊಳೆಯಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

23 “ಬಳಿಕ ಯಾಜಕನು ಆ ಶಾಪವಚನಗಳನ್ನು ಒಂದು ಪತ್ರದಲ್ಲಿ ಬರೆದು ಆ ವಿಷಕರ ಜಲದಲ್ಲಿ ತೊಳೆಯಲಿ;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

23 “ಯಾಜಕನು ಈ ಶಾಪಗಳನ್ನು ಒಂದು ಸುರುಳಿಯಲ್ಲಿ ಬರೆಯಬೇಕು. ಬಳಿಕ ಆ ಕಹಿ ನೀರಿನಿಂದ ಆ ಸುರುಳಿಯ ವಾಕ್ಯವನ್ನು ತೊಳೆಯಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

23 “ ‘ಇದಲ್ಲದೆ ಯಾಜಕನು ಈ ಶಾಪವನ್ನು ಪುಸ್ತಕದಲ್ಲಿ ಬರೆದು, ಕಹಿಯಾದ ನೀರಿನಿಂದ ತೊಳೆದು,

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅರಣ್ಯಕಾಂಡ 5:23
14 ತಿಳಿವುಗಳ ಹೋಲಿಕೆ  

ಇದಲ್ಲದೆ ಸತ್ತವರಾದ ದೊಡ್ಡವರೂ ಚಿಕ್ಕವರೂ ಸಿಂಹಾಸನದ ಮುಂದೆ ನಿಂತಿರುವದನ್ನು ಕಂಡೆನು. ಆಗ ಪುಸ್ತಕಗಳು ತೆರೆಯಲ್ಪಟ್ಟವು; ಮತ್ತು ಜೀವಬಾಧ್ಯರ ಪಟ್ಟಿ ಎಂಬ ಇನ್ನೊಂದು ಪುಸ್ತಕವು ತೆರೆಯಲ್ಪಟ್ಟಿತು; ಆ ಪುಸ್ತಕಗಳಲ್ಲಿ ಬರೆದಿದ್ದ ಸಂಗತಿಗಳ ಆಧಾರದಿಂದ ಅವರವರ ಕೃತ್ಯಗಳ ಪ್ರಕಾರ ಸತ್ತವರಿಗೆ ನ್ಯಾಯತೀರ್ಪಾಯಿತು.


ಆದದರಿಂದ ದೇವರು ನಿಮ್ಮ ಪಾಪಗಳನ್ನು ಅಳಿಸಿಬಿಡುವ ಹಾಗೆ ನೀವು ಪಶ್ಚಾತ್ತಾಪಪಟ್ಟು ಆತನ ಕಡೆಗೆ ತಿರುಗಿಕೊಳ್ಳಿರಿ. ತಿರುಗಿದರೆ ದೇವರ ಸನ್ನಿಧಾನದಿಂದ ವಿಶ್ರಾಂತಿಕಾಲಗಳು ಒದಗಿ


ನಿನ್ನ ದ್ರೋಹಗಳನ್ನು ಮಂಜಿನಂತೆ ಪರಿಹರಿಸಿದ್ದೇನೆ, ನಿನ್ನ ಪಾಪಗಳನ್ನು ಮೋಡದಂತೆ ಹಾರಿಸಿದ್ದೇನೆ; ನಿನ್ನನ್ನು ವಿಮೋಚಿಸಿದ್ದೇನೆ, ನನ್ನ ಕಡೆಗೆ ತಿರುಗಿಕೋ.


ನಾನಾಗಿ ನಾನೇ ನನಗೋಸ್ಕರ ನಿನ್ನ ದ್ರೋಹಗಳನ್ನು ಅಳಿಸಿ ಬಿಡುತ್ತೇನೆ, ನಿನ್ನ ಪಾಪಗಳನ್ನು ನನ್ನ ನೆನಪಿನಲ್ಲಿಡೆನು.


ನನ್ನ ದೋಷಕ್ಕೆ ವಿಮುಖನಾಗು; ನನ್ನ ಪಾಪಗಳನ್ನೆಲ್ಲಾ ಅಳಿಸಿಬಿಡು.


ಪ್ರೀತಿಸ್ವರೂಪನಾದ ದೇವರೇ, ನನ್ನನ್ನು ಕರುಣಿಸು; ಕರುಣಾನಿಧಿಯೇ, ನನ್ನ ದ್ರೋಹವನ್ನೆಲ್ಲಾ ಅಳಿಸಿಬಿಡು.


ಅಯ್ಯೋ, ನನ್ನ ಕಡೆಗೆ ಕಿವಿಗೊಡತಕ್ಕವನು ಇದ್ದರೆ ಎಷ್ಟೋ ಲೇಸು! ಇದೇ ನನ್ನ ಕೈಗುರುತು, ನೋಡಿರಿ, ಸರ್ವಶಕ್ತನು ನನಗೆ ಉತ್ತರಕೊಡಲಿ! ನನ್ನ ವಿರೋಧಿಯು ಬರೆದುಕೊಂಡ ಆಪಾದನಪತ್ರವು ನನಗೆ ಸಿಕ್ಕಿದರೆ ಎಷ್ಟೋ ಸಂತೋಷ!


ಆತನು - ಈ ದೇಶದ ಮೇಲೆಯೂ ಜನರ ಮೇಲೆಯೂ ಯೆಹೂದದ ಅರಸನ ಮುಂದೆ ಪಾರಾಯಣವಾದ ಆ ಗ್ರಂಥದಲ್ಲಿ ಬರೆದಿರುವ ಎಲ್ಲಾ ಶಾಪಗಳನ್ನು ಬರಮಾಡುವೆನು;


ಆದಕಾರಣ ನೀನು ಈ ಪದ್ಯವನ್ನು ಬರೆದುಕೊಂಡು ಇಸ್ರಾಯೇಲ್ಯರಿಗೆ ಕಲಿಸಿಕೊಡಬೇಕು. ಈ ಪದ್ಯವು ಇಸ್ರಾಯೇಲ್ಯರಿಗೆ ವಿರೋಧವಾಗಿ ನನ್ನ ಪಕ್ಷದಲ್ಲಿ ಸಾಕ್ಷಿಯಾಗಿರುವಂತೆ ಇದನ್ನು ಅವರಿಗೆ ಬಾಯಿ ಪಾಠಮಾಡಿಸು.


ಆಗ ಯೆಹೋವನು ಮೋಶೆಗೆ - ಭೂವಿುಯ ಮೇಲೆ ಅಮಾಲೇಕ್ಯರ ಹೆಸರೇ ಇಲ್ಲದಂತೆ ಮಾಡುವೆನು; ಈ ಮಾತನ್ನು ಜ್ಞಾಪಕಾರ್ಥವಾಗಿ ಪುಸ್ತಕದಲ್ಲಿ ಬರೆ, ಮತ್ತು ಯೆಹೋಶುವನಿಗೆ ಮಂದಟ್ಟು ಮಾಡಿಕೊಡು ಎಂದು ಹೇಳಿದನು.


ಶಾಪವನ್ನುಂಟುಮಾಡುವ ಈ ನೀರು ನಿನ್ನೊಳಗೆ ಸೇರಿ ನಿನ್ನ ಹೊಟ್ಟೆ ಉಬ್ಬುವಂತೆಯೂ ತೊಡೆಗಳು ಕ್ಷೀಣವಾಗಿ ಹೋಗುವಂತೆಯೂ ಮಾಡುವದು ಎಂದು ಹೇಳಬೇಕು. ಅದಕ್ಕೆ ಆ ಸ್ತ್ರೀಯು - ಆಮೆನ್, ಹಾಗೆಯೇ ಆಗಲಿ ಎಂದು ಹೇಳಬೇಕು.


ಆ ವಿಷಕರಜಲದಲ್ಲಿ ಸೇರುವಂತೆ ಒರಸಿ ಶಾಪವನ್ನುಂಟುಮಾಡುವ ಆ ನೀರನ್ನು ಆ ಸ್ತ್ರೀಗೆ ಕುಡಿಸಬೇಕು. ಶಾಪವನ್ನುಂಟುಮಾಡುವ ಆ ನೀರು ಅವಳೊಳಗೆ ಸೇರಿ ವಿಷಕರವಾಗುವದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು