ಅರಣ್ಯಕಾಂಡ 5:29 - ಕನ್ನಡ ಸತ್ಯವೇದವು J.V. (BSI)29 ಇದೇ ವ್ಯಭಿಚಾರಸಂಶಯವನ್ನು ಪರಿಹರಿಸುವ ವಿಧಿ. ಹೆಂಡತಿಯಾದವಳು ಗಂಡನ ಸ್ವಾಧೀನದಲ್ಲಿದ್ದರೂ ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201929 ಒಬ್ಬ ಹೆಂಡತಿ ತನ್ನ ಗಂಡನನ್ನು ಬಿಟ್ಟು ಜಾರತ್ವಮಾಡಿ ಅಶುದ್ಧಳಾದರೆ ಇಂತಹ ವ್ಯಭಿಚಾರದ ಸಂಶಯವನ್ನು ಪರಿಹರಿಸುವ ನಿಯಮ ಇದೇ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)29 ವ್ಯಭಿಚಾರ ಸಂಶಯವನ್ನು ಪರಿಹರಿಸುವ ವಿಧಿ ಇದುವೆ. ಹೆಂಡತಿಯಾದವಳು ಗಂಡನ ಸ್ವಾಧೀನದಲ್ಲಿದ್ದರೂ ಪಾತಿವ್ರತ್ಯವನ್ನು ತೊರೆದು ಜಾರತ್ವ ಮಾಡಿರುವಾಗ ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್29 “ಇದೇ ವ್ಯಭಿಚಾರ ಸಂಶಯವನ್ನು ಪರಿಹರಿಸುವ ವಿಧಿ. ಗಂಡನ ಸ್ವಾಧೀನದಲ್ಲಿರುವ ಹೆಂಡತಿಯು ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ29 “ ‘ಸಂಶಯ ಪರಿಹಾರದ ನಿಯಮವು ಇದೇ. ಒಬ್ಬ ಹೆಂಡತಿ ತನ್ನ ಗಂಡನನ್ನು ಬಿಟ್ಟು ಜಾರತ್ವ ಮಾಡಿ, ಅಶುದ್ಧಳಾಗಿದ್ದರೆ, ಅಧ್ಯಾಯವನ್ನು ನೋಡಿ |
ಆ ಪುರುಷನು ತನ್ನ ಹೆಂಡತಿಯನ್ನು ಯಾಜಕನ ಬಳಿಗೆ ಕರಕೊಂಡು ಬರಬೇಕು. ಮತ್ತು ಅವಳ ಸಂಗತಿಯನ್ನು ವಿಚಾರಿಸುವದಕ್ಕಾಗಿ ಅವನು ಯಾಜಕನಿಗೆ ಮೂರು ಸೇರು ಜವೆಗೋದಿಯ ಹಿಟ್ಟನ್ನು ಕಾಣಿಕೆಯಾಗಿ ತಂದುಕೊಡಬೇಕು. ಅದು ವ್ಯಭಿಚಾರಸಂಶಯವನ್ನು ಸೂಚಿಸುವದಕ್ಕೂ ಪಾಪವನ್ನು ಹೊರಪಡಿಸುವದಕ್ಕೂ ಯೆಹೋವನಿಗೆ ನೈವೇದ್ಯವಾದ ಕಾಣಿಕೆಯಾದದರಿಂದ ಆ ಹಿಟ್ಟಿನ ಮೇಲೆ ಎಣ್ಣೆಯನ್ನು ಹೊಯ್ಯಲೂಬಾರದು, ಧೂಪವನ್ನು ಇಡಲೂಬಾರದು.